ಕುಂದಾಪುರ: ಇಲ್ಲಿನ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನಲ್ಲಿ ರಾಜ್ಯ ಮಟ್ಟದ ರ‍್ಯಾಂಕ್ ವಿಜೇತ ವಿದ್ಯಾರ್ಥಿಗಳಿಗೆ ಅಭಿನಂದನಾ ಕಾರ್ಯಕ್ರಮ ಹಾಗೂ ಪ್ರಸಕ್ತ ಶೈಕ್ಷಣಿಕ ವರ್ಷದ ಪ್ರಥಮ ಪಿಯುಸಿ ವಿದ್ಯಾರ್ಥಿಗಳ ಪೋಷಕರ ಸಭೆ ಕಾಲೇಜಿನ ಸಭಾಂಗಣದಲ್ಲಿ ಜರುಗಿತು
ಅತಿಥಿಯಾಗಿ ಭಾಗವಹಿಸಿದ ಡಾ.ಬಿ. ಬಿ. ಹೆಗ್ಡೆ ಕಾಲೇಜಿನ ಪ್ರಾಂಶುಪಾಲ ಡಾ.ಕೆ. ಉಮೇಶ್ ಶೆಟ್ಟಿ ಮಾತನಾಡಿ,
ಹೆತ್ತವರು ತಮ್ಮ ಮಕ್ಕಳಿಗೆ ಸದ್ವಿಚಾರ, ಸಂಸ್ಕೃತಿ, ಮೌಲ್ಯಗಳನ್ನು ಬೆಳೆಸುವ ನಿಟ್ಟಿನಲ್ಲಿ ಯಾವ ರೀತಿ ಕಾರ್ಯ ಪ್ರವೃತ್ತರಾಗಬೇಕು ಎನ್ನುವುದರ ಕುರಿತು ಸಂಪೂರ್ಣ ಮಾಹಿತಿಯನ್ನು ನೀಡಿದರು.ಈ ಸಂದರ್ಭದಲ್ಲಿ 2025- 26 ನೇ ಶೈಕ್ಷಣಿಕ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ರಾಜ್ಯ ಮಟ್ಟದ ರ್ಯಾಂಕ್ವಿಜೇತ 48 ವಿದ್ಯಾರ್ಥಿಗಳಿಗೆ ಅಭಿನಂದನಾ ಪತ್ರದೊಂದಿಗೆ ಬೆಳ್ಳಿಲೋಟ, ಬೆಳ್ಳಿ ನಾಣ್ಯ, ಫಲ ಪುಷ್ಪವನ್ನು ನೀಡಿ ಸನ್ಮಾನಿಸಲಾಯಿತು.ಕಾಲೇಜಿನ ಪ್ರಾಂಶುಪಾಲ ಸಂದೀಪ್ ಗಾಣಿಗ ಪ್ರಸಕ್ತ ಶೈಕ್ಷಣಿಕ ಸಾಲಿನ ಕಾರ್ಯಯೋಜನೆಗಳ ಕುರಿತು ಮಾಹಿತಿ ನೀಡಿ, ಶೈಕ್ಷಣಿಕ ಪ್ರಗತಿಗೆ ಪೋಷಕರು ಉಪನ್ಯಾಸಕರ ಜೊತೆ ಸಹಕರಿಸಬೇಕೆಂದು ಸಲಹೆ ನೀಡಿದರು.
ಉಪಪ್ರಾಂಶುಪಾಲ ಸುಜೇಯ್ ಕೋಟೆಗಾರ್, ಪ್ರಾಥಮಿಕ ವಿಭಾಗದ ಮುಖ್ಯಸ್ಥ ರೇಷ್ಮಾ ಡಿಸೋಜಾ, ಪೂರ್ವ ಪ್ರಾಥಮಿಕ ವಿಭಾಗದ ಮುಖ್ಯಸ್ಥ ಪ್ರಮೀಳಾ ಡಿಸೋಜಾ ಉಪಸ್ಥಿತರಿದ್ದರು.ಸನ್ಮಾನಿತರ ಪಟ್ಟಿಯನ್ನು ಅರ್ಥಶಾಸ್ತ್ರ ಉಪನ್ಯಾಸಕ ಮಂಜುನಾಥ್ ಹಾಗೂ ಆಂಗ್ಲ ಭಾಷಾ ಉಪನ್ಯಾಸಕಿ ಅಮೃತಾ ವಾಚಿಸಿದರು, ಇಂಗ್ಲೀಷ್ ಉಪನ್ಯಾಸಕಿ ಸುಪ್ರೀತಾ ಶೆಟ್ಟಿ ಹಾಗೂ ಕನ್ನಡ ಉಪನ್ಯಾಸಕ ಸುಧೀರ್ ಅತಿಥಿಗಳನ್ನು ಪರಿಚಯಿಸಿದರು.ಉಪಪ್ರಾಂಶುಪಾಲ ಸುಜೇಯ್ ಕೋಟೆಗಾರ್ ಸ್ವಾಗತಿಸಿದರು, ಭೌತ ಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಭರತ್ ಚಂದ್ರ. ಕೆ ವಂದಿಸಿದರು. ಕನ್ನಡ ಉಪನ್ಯಾಸಕಿ ಸುನೀತಾ ಶೆಟ್ಟಿ ನಿರೂಪಿಸಿದರು.