ನಾಗೇಶ್ ಗಾಣಿಗರಿಗೆ ಕುಂದಾಪುರ ಪತ್ರಕರ್ತರ ಸಂಘ ನುಡಿ ನಮನ

KannadaprabhaNewsNetwork |  
Published : Jul 18, 2026, 01:15 AM IST
ಶ್ರದ್ಧಾಂಜಲಿ | Kannada Prabha

ಸಾರಾಂಶ

ಕುಂದಾಪುರ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಸದಸ್ಯ, ಪತ್ರಕರ್ತ ನಾಗೇಶ್ ಗಾಣಿಗ ಸಿದ್ದಾಪುರ ಅವರಿಗೆ ಕುಂದಾಪುರ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ನುಡಿ ನಮನ ಹಾಗೂ ಶ್ರದ್ಧಾಂಜಲಿ ಸಭೆ ಶುಕ್ರವಾರ ಕುಂದಾಪುರ ಪ್ರೆಸ್ ಕ್ಲಬ್ ನಲ್ಲಿ ನಡೆಯಿತು.

ಕುಂದಾಪುರ: ಕುಂದಾಪುರ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಸದಸ್ಯ, ಪತ್ರಕರ್ತ ನಾಗೇಶ್ ಗಾಣಿಗ ಸಿದ್ದಾಪುರ ಅವರಿಗೆ ಕುಂದಾಪುರ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ನುಡಿ ನಮನ ಹಾಗೂ ಶ್ರದ್ಧಾಂಜಲಿ ಸಭೆ ಶುಕ್ರವಾರ ಕುಂದಾಪುರ ಪ್ರೆಸ್ ಕ್ಲಬ್ ನಲ್ಲಿ ನಡೆಯಿತು.

ಸಂಘದ ಅಧ್ಯಕ್ಷ ನಾಗರಾಜ ರಾಯಪ್ಪನಮಠ ಅವರು ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ, ಯಾರೊಂದಿಗೂ ವೈರತ್ವ, ದ್ವೇಷ ಮಾಡಿಕೊಳ್ಳದ ವ್ಯಕ್ತಿತ್ವ ನಾಗೇಶ್ ಗಾಣಿಗರದು ಎಂದು ಸ್ಮರಿಸಿದರು.

ಯಾರೊಂದಿಗೂ ನಿಷ್ಠುರ ಮಾಡಿಕೊಳ್ಳದ ಪತ್ರಕರ್ತರಾಗಿದ್ದರು ಎಂದು ಸಂಘದ ಪ್ರಧಾನ ಕಾರ್ಯದರ್ಶಿ ಗಣೇಶ್ ಬೀಜಾಡಿ ನುಡಿದರು. ಸಂಘದ ಉಪಾಧ್ಯಕ್ಷ ಸತೀಶ್ ಆಚಾರ್ ಮಾತನಾಡಿ, ಅಲ್ಪಾವಧಿಯಲ್ಲೇ ಸಿದ್ದಾಪುರ, ಹೊಸಂಗಡಿ ಭಾಗದ ಜನರೆಲ್ಲರ ಅಪಾರ ಪ್ರೀತಿ, ವಿಶ್ವಾಸ ಗಳಿಸಿದ್ದರು ಎಂದು ಹೇಳಿದರು. ಸಂಘದ ಸದಸ್ಯ ಎ. ಭಾಸ್ಕರ ಶೆಟ್ಟಿ ನುಡಿನಮನ ಸಲ್ಲಿಸಿದರು. ಜಿಲ್ಲಾ ಸಂಘದ ಕಾರ್ಯದರ್ಶಿ ಟಿ. ಲೋಕೇಶ್ ಆಚಾರ್, ಜಿಲ್ಲಾ‌ ಕಾರ್ಯಕಾರಿ ಮಂಡಳಿ‌ ಸದಸ್ಯರಾದ ಚಂದ್ರಮ ತಲ್ಲೂರು, ಯೋಗೀಶ್ ಕುಂಭಾಶಿ, ತಾಲೂಕು ಸಂಘದ ಉಪಾಧ್ಯಕ್ಷ ಸಂತೋಷ್ ಕುಂದೇಶ್ವರ, ಪದಾಧಿಕಾರಿಗಳು, ಸದಸ್ಯರು ಉಪಸ್ಥಿತರಿದ್ದರು. ಸಂಘದ ಕೋಶಾಧಿಕಾರಿ ಶ್ರೀಕಾಂತ ಹೆಮ್ಮಾಡಿ ನಿರೂಪಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಆಳ್ವಾಸ್‌ನ 21 ವಿದ್ಯಾರ್ಥಿಗಳಿಗೆ 99 ಪರ್ಸಂಟೈಲ್‌ಗಿಂತ ಅಧಿಕ ಅಂಕ
ನೀಟ್ ಮರುಪರೀಕ್ಷೆ ರಿಸಲ್ಟ್‌ ಬಗ್ಗೆ ವಿದ್ಯಾರ್ಥಿಗಳ ಅತೃಪ್ತಿ