ರಕ್ಷಿತ್‌ ಪಡ್ರೆಗೆ ಕುಂದೇಶ್ವರ ಸಮ್ಮಾನ್‌ ಪ್ರಶಸ್ತಿ, 22ರಂದು ಕಾರ್ಕಳ ಕುಂದೇಶ್ವರ ಜಾತ್ರೆ

KannadaprabhaNewsNetwork |  
Published : Jan 21, 2024, 01:33 AM IST
ರಕ್ಷಿತ್‌ ಶೆಟ್ಟಿ ಪಡ್ರೆ  | Kannada Prabha

ಸಾರಾಂಶ

ಕಾರ್ಕಳದ ಹಿರ್ಗಾನ ಶ್ರೀ ಕುಂದೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರೋತ್ಸವ ಸಂದರ್ಭ ಜ.21ರಂದು ರಾತ್ರಿ ಪ್ರಶಸ್ತಿ ಪ್ರದಾನ ಮಾಡಲಾಗುವುದು. ಶಾಸಕ ಸುನಿಲ್‌ ಕುಮಾರ್‌ ಹಾಗೂ ಚಲನಚಿತ್ರ ನಟ ವಿಘ್ನೇಶ್‌ ಎಂ.ಭಾಗವಹಿಸಲಿದ್ದಾರೆ.

ಕನ್ನಡಪ್ರಭ ವಾರ್ತೆ ಮಂಗಳೂರುತೆಂಕು ಬಡಗು ಕಲಾ ಸವ್ಯಸಾಚಿ ನಾಟ್ಯ ಮಯೂರ ರಕ್ಷಿತ್‌ ಶೆಟ್ಟಿ ಪಡ್ರೆ ಅವರು ಪ್ರತಿಷ್ಠಿತ ಕುಂದೇಶ್ವರ ಸಮ್ಮಾನ್‌ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.

ಕಾರ್ಕಳದ ಹಿರ್ಗಾನ ಶ್ರೀ ಕುಂದೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರೋತ್ಸವ ಸಂದರ್ಭ ಜ.21ರಂದು ರಾತ್ರಿ ಪ್ರಶಸ್ತಿ ಪ್ರದಾನ ಮಾಡಲಾಗುವುದು. ಶಾಸಕ ಸುನಿಲ್‌ ಕುಮಾರ್‌ ಹಾಗೂ ಚಲನಚಿತ್ರ ನಟ ವಿಘ್ನೇಶ್‌ ಎಂ.ಭಾಗವಹಿಸಲಿದ್ದಾರೆ. ಈ ಸಂದರ್ಭ ರಕ್ಷಿತ್ ಪಡ್ರೆ ಅವರಿಂದ ಶ್ವೇತಕುಮಾರ ಚರಿತ್ರೆ ಯಕ್ಷನಾಟಕ ಪ್ರದರ್ಶನಗೊಳ್ಳಲಿದೆ ಎಂದು ಕಾರ್ಯಕ್ರಮ ಸಂಯೋಜಕ ಜಿತೇಂದ್ರ ಕುಂದೇಶ್ವರ ತಿಳಿಸಿದ್ದಾರೆ.

ಬಪ್ಪನಾಡು, ಸಸಿಹಿತ್ಲು, ಹೊಸನಗರ, ಎಡನೀರು ಮೇಳದಲ್ಲಿ ಕಲಾಸೇವೆ ಮಾಡಿ ಈಗ ಹನುಮಗಿರಿ ಮೇಳದಲ್ಲಿ ತಿರುಗಾಟ ಮಾಡುತ್ತಿರುವ ನಾಟ್ಯ ಮಯೂರ, ಯಕ್ಷ ಚೈತನ್ಯ ಬಿರುದಾಂಕಿತ ಪಡ್ರೆ ಅವರು, 20 ಕಡೆ ಮಕ್ಕಳಿಗಾಗಿ ಯಕ್ಷಗಾನ ತರಗತಿ ನಡೆಸುವ ಮೂಲಕ ಯಕ್ಷಗಾನ ಉಳಿಸಿ, ಬೆಳೆಸುವ ಕೈಂಕರ್ಯದಲ್ಲೂ ತೊಡಗಿಕೊಂಡಿದ್ದಾರೆ.

ಸುದರ್ಶನ, ಅಭಿಮನ್ಯು, ಮೇನಕೆ, ಭ್ರಮರ ಕುಂತಳೆ, ಸುಭದ್ರೆ, ಪ್ರಭಾವತಿ, ಕೃಷ್ಣ, ಶ್ರೀದೇವಿ, ಅಶ್ವತ್ಥಾಮ, ಸೀತೆ, ಮೋಹಿನಿ, ಮೀನಾಕ್ಷಿ ಇವರಿಗೆ ಪ್ರಸಿದ್ಧಿ ತಂದುಕೊಟ್ಟ ಪಾತ್ರಗಳು. ಎಂಎಸ್ಸಿ ಕಂಪ್ಯೂಟರ್ ಸೈನ್ಸ್ ಪದವೀಧರ ಪಡ್ರೆ ಅವರು ಭರತನಾಟ್ಯ ಪ್ರವೀಣ. ಗ್ಲಾಸ್ ಪೇಂಟಿಂಗ್, ರಂಗೋಲಿಯಲ್ಲೂ ನೈಪುಣ್ಯ ಸಾಧಿಸಿದ್ದಾರೆ.

ಜ.21 ರಂದು ರಾತ್ರಿ 7.30ರಿಂದ ಸಾಯಿಶಕ್ತಿ ಕಲಾ ಬಳಗ ಮಂಗಳೂರು ತಂಡದಿಂದ ಶ್ವೇತ ಕುಮಾರ ಚರಿತ್ರೆ ಎಂಬ ವಿಶಿಷ್ಟ ಯಕ್ಷನಾಟಕ ಪ್ರದರ್ಶನಗೊಳ್ಳಲಿದೆ.

22ಕ್ಕೆ ಕುಂದೇಶ್ವರ ಜಾತ್ರೆ:

ಜ. 21ರಂದು ಬೆಳಗ್ಗೆ 10.30ರಿಂದ ಪ್ರಾರ್ಥನೆ, ತೋರಣ ಮುಹೂರ್ತ ಗಣಯಾಗ, ಮಹಾಪೂಜೆ, ಸಂಜೆ 7 ಗಂಟೆಗೆ ಆರಾಧನ ಪೂಜೆ ನಡೆಯಲಿದೆ. ಜ.22 ರಂದು ಬೆಳಗ್ಗೆ 8 ಗಂಟೆಗೆ ಪಂಚವಿಂಶತಿ ಕಲಾಧಿವಾಸ, ಅಧಿವಾಸ ಹೋಮ, ಕಲಶಾಭಿಷೇಕ, ಮಹಾಪೂಜೆ, ಧ್ವಜಾರೋಹಣ, ಅವಸ್ತುತ ಬಲಿ, ಪಲ್ಲಪೂಜೆ ನಡೆಯಲಿದ್ದು, ಸಂಜೆ 6.30ರಿಂದ ಮಹೋತ್ಸವ, ಉತ್ಸವ ಬಲಿ, ಅವಭೃತ ಕಟ್ಟೆಪೂಜೆ, ದೈವ ಭೇಟಿ, ಅಗ್ನಿಕೇಳಿ, ರಂಗಪೂಜೆಯಾಗಿ ಧ್ವಜಾವರೋಣವಾಗಲಿದೆ. ಜ. 23ರಂದು ನವಕಪ್ರಧಾನ ಹೋಮ, ಸಂಪ್ರೋಕ್ಷಣೆ ಹಾಗೂ ಪ್ರಸಾದ ವಿತರಣೆ. ಧಾರ್ಮಿಕ ಕಾರ್ಯಕ್ರಮಗಳು ಕೌಡೂರು ವೇ.ಮೂ. ಭಗೀರಥ ಭಟ್‌, ಕುಂದೇಶ್ವರ ಕೃಷ್ಣರಾಜೇಂದ್ರ ಭಟ್‌, ರವೀಂದ್ರ ಭಟ್ ನೇತೃತ್ವದಲ್ಲಿ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.

PREV

Recommended Stories

ಸಾರಿಗೆ ನೌಕರರ ಜತೆ ಸರ್ಕಾರ ಸಂಧಾನ ವಿಫಲ
ಸುಹಾಸ್ ಶೆಟ್ಟಿ ಹ* ಕೇಸಲ್ಲಿ ಎನ್‌ಐಎನಿಂದ 18 ಕಡೆ ದಾಳಿ