ಕಾರ್ಕಳ - ಕುಂದೇಶ್ವರ ಸಮ್ಮಾನ್, ಕಲಾಭೂಷಣ ಪ್ರಶಸ್ತಿ ಪ್ರದಾನ

KannadaprabhaNewsNetwork |  
Published : Jan 25, 2026, 02:45 AM IST
ಉಮೇಸ್ ಮಿಜಾರು ಅವರಿಗೆ ಕುಂದೇಶ್ವರ್  ಕಲಾಭೂಷಣ, ಕಾವ್ಯಶ್ರೀಗೆ ಕುಂದೇಶ್ವರ ಸನ್ಮಾನ್ ಪ್ರಶಸ್ತಿ ಪ್ರದಾನ | Kannada Prabha

ಸಾರಾಂಶ

ಕಾರ್ಕಳ ಹಿರ್ಗಾನದ ಕುಂದೇಶ್ವರ ಉತ್ಸವದಲ್ಲಿ ಯಕ್ಷಗಾನ ಭಾಗವತರಾದ ಕಾವ್ಯಶ್ರೀ ಅಜೇರು ಅವರಿಗೆ ಶ್ರೀ ಕುಂದೇಶ್ವರ ಸಮ್ಮಾನ್ ಪ್ರಶಸ್ತಿ ಮತ್ತು ರಂಗಭೂಮಿ ಕಲಾವಿದ ಉಮೇಶ್ ಮಿಜಾರು ಅವರಿಗೆ ಕುಂದೇಶ್ವರ ಕಲಾಭೂಷಣ ಪ್ರಶಸ್ತಿ ಪ್ರದಾನ ಮಾಡಲಾಯಿತು.

ಕಾರ್ಕಳ: ಇಲ್ಲಿನ ಹಿರ್ಗಾನದ ಕುಂದೇಶ್ವರ ಉತ್ಸವದಲ್ಲಿ ಯಕ್ಷಗಾನ ಭಾಗವತರಾದ ಕಾವ್ಯಶ್ರೀ ಅಜೇರು ಅವರಿಗೆ ಶ್ರೀ ಕುಂದೇಶ್ವರ ಸಮ್ಮಾನ್ ಪ್ರಶಸ್ತಿ ಮತ್ತು ರಂಗಭೂಮಿ ಕಲಾವಿದ ಉಮೇಶ್ ಮಿಜಾರು ಅವರಿಗೆ ಕುಂದೇಶ್ವರ ಕಲಾಭೂಷಣ ಪ್ರಶಸ್ತಿ ಪ್ರದಾನ ಮಾಡಲಾಯಿತು. ಇದೇ ಸಂದರ್ಭದಲ್ಲಿ ದೇಗುಲ ದ್ವಾರಕ್ಕೆ ಹಿತ್ತಾಳೆ ಹೊದಿಕೆ ಸಮರ್ಪಿಸಿದ ರಮಾನಾಥ ಶೆಟ್ಟಿ ಅವರನ್ನು ಸನ್ಮಾನಿಸಲಾಯಿತು.

ಪ್ರಶಸ್ತಿ ಪ್ರದಾನ ಮಾಡಿದ ಶಾಸಕ ವಿ. ಸುನಿಲ್ ಕುಮಾರ್ ಮಾತನಾಡಿ, ಧಾರ್ಮಿಕ ಕ್ಷೇತ್ರದಲ್ಲಿ ಯಕ್ಷಗಾನ, ತಾಳಮದ್ದಲೆಗಳನ್ನು ಆಯೋಜಿಸಿ ಸಾಧಕ ಕಲಾವಿದರನ್ನು ಗೌರವಿಸುವ ಕೆಲಸ ಶ್ಲಾಘನೀಯ ಎಂದರು.

ಶ್ರೀ ನಾರಾಯಣಗುರು ನಿಗಮದ ಅಧ್ಯಕ್ಷ ಮಂಜುನಾಥ ಪೂಜಾರಿ ಮುದ್ರಾಡಿ ಮಾತನಾಡಿ, ಕುಂದೇಶ್ವರ ಕ್ಷೇತ್ರವು ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸುವ ಮೂಲಕ ರಾಜ್ಯದ ಗಮನ ಸೆಳೆದಿದೆ ಎಂದರು.

ಉದಯ ಕೃಷ್ಣಯ್ಯ ಶೆಟ್ಟಿ ಚಾರಿಟೇಬಲ್ ಟ್ರಸ್ಟ್ ವ್ಯವಸ್ಥಾಪಕ ನಿರ್ದೇಶಕ ಉದಯ ಶೆಟ್ಟಿ ಮುನಿಯಾಲು, ಕ್ಷೇತ್ರದ ಮೂಲಸೌಕರ್ಯ ಹೆಚ್ಚಳಕ್ಕೆ ದೇವಸ್ಥಾನದ ಸಂಪರ್ಕ ರಸ್ತೆಗಳನ್ನ ಮೇಲ್ದರ್ಜೆಗೆ ಏರಿಸಬೇಕು ಎಂದು ಹೇಳಿದರು.ಯಕ್ಷ ಕಲಾರಂಗದ ಅಧ್ಯಕ್ಷ ವಿಜಯ ಶೆಟ್ಟಿ, ನಿಟ್ಟೆ ಗ್ರಾಪಂ ಮಾಜಿ ಅಧ್ಯಕ್ಷ ನವೀನ್ ನಾಯಕ್, ದೇವಸ್ಥಾನದ ಧರ್ಮದರ್ಶಿ ಗಂಗಾ ಆರ್. ಭಟ್, ಪ್ರಧಾನ ಅರ್ಚಕ ಕೃಷ್ಣರಾಜೇಂದ್ರ ಭಟ್, ವೇದಮೂರ್ತಿ ರವೀಂದ್ರ ಭಟ್, ಕಾರ್ಯಕ್ರಮ ಸಂಯೋಜಕ ಜಿತೇಂದ್ರ ಕುಂದೇಶ್ವರ, ಸೃಷ್ಟಿ ಕಲಾವಿದ್ಯಾಲಯ ಸಂಸ್ಥಾಪಕ ಛಾಯಾಪತಿ ಕಂಚಿಬೈಲ್, ಉದ್ಯಮಿ ಸತೀಶ್ ಭಟ್ ಕುಂದೇಶ್ವರ, ಸಿರಿಯಣ್ಣ ಶೆಟ್ಟಿ, ಪಂಚಾಯತ್ ಅಧ್ಯಕ್ಷೆ ಸುನಿತಾ ಪೂಜಾರಿ, ಅರ್ಚಕರಾದ ಸುಧೀಂದ್ರ ಭಟ್, ಸುಜ್ಞೇಂದ್ರ ಭಟ್ ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಹಾಸ್ಟೆಲ್ ಮಕ್ಕಳಿಗೆ ಹೊಸ ಜಾತಿ ಪ್ರಮಾಣಪತ್ರ ಶಾಕ್‌
₹400 ಕೋಟಿ ಇದ್ದ 2 ಕಂಟೇನರ್‌ ಲಾರಿಗಳೇ ಬೆಳಗಾವೀಲಿ ನಾಪತ್ತೆ!