ಇಂದಿನಿಂದ ಕುಂಜಿಲ ಪೈನರಿ ಮಖಾಂ ಉರೂಸ್‌: ಹಲವು ವಿದ್ವಾಂಸರು ಭಾಗಿ

KannadaprabhaNewsNetwork | Published : Feb 23, 2024 1:53 AM

ಸಾರಾಂಶ

ಕುಂಜಿಲ ಪೈನರಿ ಮಖಾಂ ಉರೂಸ್ ಸಮಾರಂಭ ಶುಕ್ರವಾರದಿಂದ ಫೆ.27ರ ತನಕ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ. ಶುಕ್ರವಾರ ಜುಮಾ ನಮಾಜ್ ಬಳಿಕ ಪೈನರಿ ಸುನ್ನಿ ಮುಸ್ಲಿಂ ಜಮಾಅತ್ ಅಧ್ಯಕ್ಷ ಎಂ.ಎ.ಸೌಕತ್ ಅಲಿ ದ್ವಜಾರೋಹಣ ನೆರವೇರಿಸುವುದರ ಮೂಲಕ ಉರೂಸ್ ಕಾರ್ಯಕ್ರಮಕ್ಕೆ ವಿಧ್ಯುಕ್ತ ಚಾಲನೆ ನೀಡುವರು.

ಕನ್ನಡಪ್ರಭ ವಾರ್ತೆ ನಾಪೋಕ್ಲು

ಕಕ್ಕಬೆ ಗ್ರಾಮ ಪಂಚಾಯಿತಿಯ ಇತಿಹಾಸಪ್ರಸಿದ್ಧ ಕುಂಜಿಲ ಪೈನರಿ ಮಖಾಂ ಉರೂಸ್ ಸಮಾರಂಭ ಶುಕ್ರವಾರದಿಂದ ಫೆ.27ರ ತನಕ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ ಎಂದು ಪೈನರಿ ಮುಸ್ಲಿಂ ಜಮಾಅತ್‌ ಮಂಡಲಿ ಪ್ರಕಟಣೆ ತಿಳಿಸಿದೆ.

ಶುಕ್ರವಾರ ಜುಮಾ ನಮಾಜ್ ಬಳಿಕ ಪೈನರಿ ಸುನ್ನಿ ಮುಸ್ಲಿಂ ಜಮಾಅತ್ ಅಧ್ಯಕ್ಷ ಎಂ.ಎ.ಸೌಕತ್ ಅಲಿ ದ್ವಜಾರೋಹಣ

ನೆರವೇರಿಸುವುದರ ಮೂಲಕ ಉರೂಸ್ ಕಾರ್ಯಕ್ರಮಕ್ಕೆ ವಿಧ್ಯುಕ್ತ ಚಾಲನೆ ನೀಡುವರು. ರಾತ್ರಿ ಕಾಂತಪುರಂ

ಅಬ್ದುಲ್ ಲತೀಫ್ ಸಖಾಫಿ ನೇತೃತ್ವದಲ್ಲಿ ಆತ್ಮೀಯ ಮದನಿಯಂ ಮಜ್ಲಿಸ್ ನಡೆಯಲ್ಲಿದೆ. ಶನಿವಾರ ರಾತ್ರಿ ಸ್ವಲಾತ್ ವಾರ್ಷಿಕ ಮತ್ತು ದುಆ ಮಜ್ಲಿಸ್ ನೇತೃತ್ವವನ್ನು ರಈಸುಲ್ ಉಲಮಾ ಶೈಖುನಾ ಸುಲೈಮಾನ್ ಮುಸ್ಲಿಯಾರ್ ವಹಿಸುವರು.

ಭಾನುವಾರ ರಾತ್ರಿ ಮುಳ್ಳೂರ್ ಕರ ಮಹಮ್ಮದಲಿ ಸಖಾಫಿ ಧಾರ್ಮಿಕ ಪ್ರಭಾಷಣ, 26ರಂದು ಮಧ್ಯಾಹ್ನ 1.30ಕ್ಕೆ ಸೌಹಾರ್ದ ಸಮ್ಮೇಳನ ನಡೆಯಲಿದೆ. ಡಾ. ಅಬ್ದುಲ್ ರಶೀದ್ ಝೖನಿ ಕಾಮಿಲ್ಡ ಸಖಾಫಿ ಕಕ್ಕಿಂಜೆ ಕಾರ್ಯಕ್ರಮ ಉದ್ಘಾಟಿಸುವರು. ಡಾ.ಮೌಲಾನ ಪೇರೋಡ್ ಅಬ್ದುಲ್ ರಹ್ಮಾನ್ ಸಖಾಫಿ ಧಾರ್ಮಿಕ ಪ್ರಭಾಷಣ ನೀಡವರು.

ಮುಖ್ಯ ಅತಿಥಿಗಳಾಗಿ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಶಾಸಕ ಎ.ಎಸ್.ಪೊನ್ನಣ್ಣ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ತೀತಿರ ಧರ್ಮಜ ಉತ್ತಪ್ಪ, ಕರ್ನಾಟಕ ಮುಸ್ಲಿಂ ಜಮಾಅತ್ ಅಧ್ಯಕ್ಷ ಅಬ್ದುಲ್ ಲತೀಫ್ ಸುಂಟಿಕೊಪ್ಪ, ನಾಪೋಕ್ಲು ಬ್ಲಾಕ್‌ ಕಾಂಗ್ರೆಸ್ ಅಧ್ಯಕ್ಷ ಇಸ್ಮಾಯಿಲ್, ಮಡಿಕೇರಿ ತಾಲೂಕು ಅಕ್ರಮ ಸಕ್ರಮ ಸಮಿತಿ ಅಧ್ಯಕ್ಷ ನೆರವಂಡ ಉಮೇಶ್ ಸೇರಿದಂತೆ ವಿವಿಧ ಧಾರ್ಮಿಕ ಸಾಮಾಜಿಕ ಹಾಗೂ ರಾಜಕೀಯ ನೇತಾರರು ಭಾಗವಹಿಸಲಿದ್ದಾರೆ. ಸಂಜೆ 4 ಗಂಟೆಗೆ ಭಕ್ತರಿಗೆ ಅನ್ನದಾನ ನೆರವೇರಲಿದೆ.

ರಾತ್ರಿ ಅನ್ವರಲಿ ಹುದವಿ ಅವರ ನೇತೃತ್ವದಲ್ಲಿ ಇಸ್ಕ್ ಮಜ್ಲಿಸ್ ಕಾರ್ಯಕ್ರಮ ನಡೆಯಲಿದೆ.

27ರಂದು ರಾತ್ರಿ ವಲಿಯುದ್ದಿನ್ ಫೈಝಿ ವಝಕ್ಕಾಡ್ ನೇತೃತ್ವದಲ್ಲಿ ನೂರೇ ಅಜ್ಮಿರ್ ಆತ್ಮೀಯ ಮಜ್ಲಿಸ್

ಕಾರ್ಯಕ್ರಮದಲ್ಲಿ ಕೊಡಗು ಜಿಲ್ಲಾ ನಾಇಬ್ ಖಾಝಿ ಹಾಗೂ ಸಮಸ್ತ ಮುಶಾವರ ಸದಸ್ಯರಾದ ಅಬ್ದುಲ್ಲ ಫೈಝಿ,ಸಯ್ಯದ್ ಶರಫುದ್ದಿನ್ಜಿ ಸಅದಿ ಅಲ್ ಮುಖೈಬಿಲಿ ಮುಳವೂರ್ ತಂಙಳ್, ಸಯ್ಯದ್ ಶಿಯಾಬುದ್ದೀನ್ ಅಲ್ ಹೈದರೂಸಿ ಕಿಲ್ಲೂರ್

ತಂಙಳ್, ನಿಝಾರ್ ಅಹ್ಸನಿ ಕಕ್ಕಡಿಪುರಂ, ಅಶ್ರಫ್ ಅಹ್ಸನಿ ಅನ್ವಾರುಲ್ ಹುದಾ ಭಾಗವಹಿಸಲಿರುವರು.

ಉರೂಸ್ ಕಾರ್ಯಕ್ರಮದಲ್ಲಿ ಹಲವಾರು ಸಾಮಾಜಿಕ ಧಾರ್ಮಿಕ ಹಾಗೂ ರಾಜಕೀಯ ನೇತಾರರು ಭಾಗವಹಿಸಲಿದ್ದಾರೆ ಎಂದು ಸಂಘಟಕರ ಪ್ರಕಟಣೆ ತಿಳಿಸಿದೆ.

Share this article