ಶಿಕ್ಷಣದ ಗುಣಮಟ್ಟ ಹೆಚ್ಚಿಸುವಲ್ಲಿ ಸಂಘಟನೆಗಳ ಪಾತ್ರ ಮಹತ್ವದ್ದು: ಬಸವರಾಜ ಹೊರಟ್ಟಿ

KannadaprabhaNewsNetwork |  
Published : Apr 06, 2026, 03:00 AM IST
ಎಕ್ಸ್‌ಪರ್ಟ್‌ ಶಿಕ್ಷಣ ಸಂಸ್ಥೆ ಅಧ್ಯಕ್ಷ, ಕುಪ್ಮಾ ರಾಜ್ಯ ಸಮಿತಿ ಕಾರ್ಯದರ್ಶಿ ನರೇಂದ್ರ ಎಲ್. ನಾಯಕ್‌ಗೆ ಸನ್ಮಾನ | Kannada Prabha

ಸಾರಾಂಶ

ಕುಪ್ಮಾ ಸಂಘಟನೆಯನ್ನು ರಾಜ್ಯ ಮಟ್ಟದಲ್ಲಿ ಅತ್ಯುತ್ತಮವಾಗಿ ವಿಸ್ತರಿಸಿ, ಪರಿಣಾಮಕಾರಿ ಸಂಘಟನಾ ಶಕ್ತಿಯನ್ನು ತೋರಿದ ಎಕ್ಸ್‌ಪರ್ಟ್ ಸಮೂಹ ಶಿಕ್ಷಣ ಸಂಸ್ಥೆಯ ಅಧ್ಯಕ್ಷರು ಹಾಗೂ ಸಮಿತಿಯ ಕಾರ್ಯದರ್ಶಿ ನರೇಂದ್ರ ಎಲ್. ನಾಯಕ್ ಅವರನ್ನು ಧಾರವಾಡ ಜಿಲ್ಲಾ ಕುಪ್ಮಾ ಸಮಿತಿಯ ಉದ್ಘಾಟನಾ ಸಮಾರಂಭದಲ್ಲಿ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಗೌರವಪೂರ್ವಕವಾಗಿ ಸನ್ಮಾನಿಸಿದರು. ಈ ಸಂದರ್ಭದಲ್ಲಿ ನಾಯಕ್ ಅವರ ಸಂಘಟನಾ ಸಾಮರ್ಥ್ಯ, ಶಿಕ್ಷಣ ಕ್ಷೇತ್ರದ ಅಭಿವೃದ್ಧಿಗೆ ನೀಡಿದ ಕೊಡುಗೆ ಹಾಗೂ ಕುಪ್ಮಾ ಚಟುವಟಿಕೆಗಳಲ್ಲಿ ತೋರಿದ ನಾಯಕತ್ವವನ್ನು ವಿಶೇಷವಾಗಿ ಪ್ರಶಂಸಿಸಲಾಯಿತು.

ಮಂಗಳೂರು: ಕುಪ್ಮಾ ಸಂಘಟನೆಯನ್ನು ರಾಜ್ಯ ಮಟ್ಟದಲ್ಲಿ ಅತ್ಯುತ್ತಮವಾಗಿ ವಿಸ್ತರಿಸಿ, ಪರಿಣಾಮಕಾರಿ ಸಂಘಟನಾ ಶಕ್ತಿಯನ್ನು ತೋರಿದ ಎಕ್ಸ್‌ಪರ್ಟ್ ಸಮೂಹ ಶಿಕ್ಷಣ ಸಂಸ್ಥೆಯ ಅಧ್ಯಕ್ಷರು ಹಾಗೂ ಕುಪ್ಮಾ ರಾಜ್ಯ ಸಮಿತಿಯ ಕಾರ್ಯದರ್ಶಿ ನರೇಂದ್ರ ಎಲ್. ನಾಯಕ್ ಅವರನ್ನು ಧಾರವಾಡ ಜಿಲ್ಲಾ ಕುಪ್ಮಾ ಸಮಿತಿಯ ಉದ್ಘಾಟನಾ ಸಮಾರಂಭದಲ್ಲಿ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಗೌರವಪೂರ್ವಕವಾಗಿ ಸನ್ಮಾನಿಸಿದರು. ಈ ಸಂದರ್ಭದಲ್ಲಿ ನಾಯಕ್ ಅವರ ಸಂಘಟನಾ ಸಾಮರ್ಥ್ಯ, ಶಿಕ್ಷಣ ಕ್ಷೇತ್ರದ ಅಭಿವೃದ್ಧಿಗೆ ನೀಡಿದ ಕೊಡುಗೆ ಹಾಗೂ ಕುಪ್ಮಾ ಚಟುವಟಿಕೆಗಳಲ್ಲಿ ತೋರಿದ ನಾಯಕತ್ವವನ್ನು ವಿಶೇಷವಾಗಿ ಪ್ರಶಂಸಿಸಲಾಯಿತು.ಸನ್ಮಾನ ಸಮಾರಂಭದ ಬಳಿಕ ಮಾತನಾಡಿದ ಬಸವರಾಜ ಹೊರಟ್ಟಿ, ಶಿಕ್ಷಣ ಕ್ಷೇತ್ರದಲ್ಲಿ ಸಂಘಟನೆಯ ಅವಶ್ಯಕತೆಯನ್ನು ಒತ್ತಿ ಹೇಳಿದರು. ಗುಣಮಟ್ಟದ ಶಿಕ್ಷಣವನ್ನು ರಾಜ್ಯದ ಮೂಲೆಮೂಲೆಗೂ ತಲುಪಿಸಲು ಮಾನವ ಸಂಪನ್ಮೂಲದ ಸಮರ್ಪಕ ಬಳಕೆ, ಶಿಕ್ಷಕರ ತರಬೇತಿ ಹಾಗೂ ಶೈಕ್ಷಣಿಕ ಸಂಸ್ಥೆಗಳ ನಡುವೆ ಸಹಕಾರ ಅತ್ಯಂತ ಮುಖ್ಯ. ಶಿಕ್ಷಣದ ಗುಣಮಟ್ಟ ಹೆಚ್ಚಿಸುವಲ್ಲಿ ಇಂತಹ ಸಂಘಟನೆಗಳ ಪಾತ್ರ ಮಹತ್ವದ್ದಾಗಿದ್ದು, ಸಮಾಜದ ಒಟ್ಟಾರೆ ಅಭಿವೃದ್ಧಿಗೆ ಇದು ದಾರಿ ಮಾಡಿಕೊಡುತ್ತದೆ ಎಂದು ಅಭಿಪ್ರಾಯಪಟ್ಟರು.ವೇದಿಕೆಯಲ್ಲಿ ಕುಪ್ಮಾ ರಾಜ್ಯ ಸಮಿತಿಯ ಅಧ್ಯಕ್ಷ ಡಾ. ಎಂ. ಮೋಹನ್ ಆಳ್ವ, ಕುಪ್ಮಾ ಧಾರವಾಡ ಜಿಲ್ಲಾ ಅಧ್ಯಕ್ಷ ಡಾ. ವಿಶ್ವನಾಥ ಕೊರವಿ, ಧಾರವಾಡ ಡಿಡಿಪಿಯು ತೇಜಶ್ವಿನಿ ನಾರಾಯಣಕರ, ಕುಪ್ಮಾ ಕಾರ್ಯದರ್ಶಿ ಅನಿಲಕುಮಾರ ಚೌಗಲಾ, ಪ್ರಧಾನ ಕಾರ್ಯದರ್ಶಿ ನಾಗೇಶ ಅಣ್ಣಿಗೇರಿ, ಗೌರವಾಧ್ಯಕ್ಷ ಜಿ.ವಿ. ವಳಸಂಗ, ಪಿ.ಆರ್. ಹಂಚಿನಮನಿ, ಮಲ್ಲಿಕಾರ್ಜುನ ಸಾವುಕಾರ, ಅಶ್ರಫ್‌ ಅಲಿ ಬಶೀರಅಹ್ಮದ್, ಬಸವರಾಜ ಕೊಣ್ಣೂರ, ಉಪಾಧ್ಯಕ್ಷ ವಸಂತ ಹೊರಟ್ಟಿ, ಡಾ. ವೀಣಾ ಬಿರಾದಾರ, ಸವಿತಾ ಅಮರ ಶೆಟ್ಟಿ, ಖಜಾಂಚಿ ನೂರ್‌ ಅಹ್ಮದ್ ಧಾರವಾಡ ಮತ್ತಿತರರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಬಡತನ ನೀಗಿದ್ದರೆ ಪ್ರಚಾರಕ್ಕೆ 5 ದಿನ ಬರಬೇಕಿತ್ತಾ?: ಕುಮಾರಸ್ವಾಮಿ
ಕಾರಜೋಳ-ಚರಂತಿಮಠ ಜೋಡಿ ಬಾಗಲಕೋಟೆ ಅಭಿವೃದ್ಧಿಗೆ ಮಾರಕ: ತಿಮ್ಮಾಪೂರ