ಕನ್ನಡಪ್ರಭ ವಾರ್ತೆ ಕುಶಾಲನಗರ
ಜಿಲ್ಲಾ ಪಂಚಾಯತಿ ವತಿಯಿಂದ ನಡೆಯುವ ಕಾಮಗಾರಿಯಲ್ಲಿ ಎರಡು ಅಂತಸ್ತಿನ ಕಟ್ಟಡ ನಿರ್ಮಾಣವಾಗಲಿದ್ದು ಆಯುರ್ವೇದ ಚಿಕಿತ್ಸೆಗೆ ಸಂಬಂಧಪಟ್ಟಂತೆ ರೋಗಿಗಳಿಗೆ ಹೆಚ್ಚಿನ ಸವಲತ್ತುಗಳನ್ನು ಒದಗಿಸುವ ಯೋಜನೆ ಇದಾಗಿದೆ ಎಂದು ಮಾಹಿತಿ ಒದಗಿಸಿದರು.
ಆಯುರ್ವೇದ ಚಿಕಿತ್ಸೆಗೆ ಹೆಚ್ಚಿನ ಮಂದಿ ಮೈಸೂರು, ಮಂಗಳೂರು ಆಸ್ಪತ್ರೆಗಳನ್ನು ಅವಲಂಬಿಸುತ್ತಿದ್ದು ಮುಂದಿನ ದಿನಗಳಲ್ಲಿ ಕುಶಾಲನಗರದಲ್ಲಿ ಎಲ್ಲಾ ಸೌಲಭ್ಯಗಳೊಂದಿಗೆ ಆಯುರ್ವೇದ ಚಿಕಿತ್ಸೆಗೆ ಅವಕಾಶ ಲಭಿಸಲಿದೆ ಎಂದು ಹೇಳಿದರು.ಗುಣಮಟ್ಟದ ಕಾಮಗಾರಿ ನಡೆಸುವಂತೆ ಸಂಬಂಧಿಸಿದ ಇಂಜಿನಿಯರ್ ಮತ್ತು ಗುತ್ತಿಗೆದಾರರಿಗೆ ಕಿವಿಮಾತು ಹೇಳಿದರು.
ಕುಶಾಲನಗರ ಯೋಜನಾ ಪ್ರಾಧಿಕಾರ ಅಧ್ಯಕ್ಷ ಪ್ರಮೋದ್ ಮುತ್ತಪ್ಪ, ಪಟ್ಟಣ ಪಂಚಾಯತಿ ಸದಸ್ಯ ವಿ ಎಸ್ ಆನಂದಕುಮಾರ್, ಗ್ಯಾರಂಟಿ ಅನುಷ್ಠಾನ ಸಮಿತಿಯ ತಾಲೂಕು ಅಧ್ಯಕ್ಷ ವಿ ಪಿ ಶಶಿಧರ್, ಜಿಲ್ಲಾ ಆಯುಷ್ ವೈದ್ಯಾಧಿಕಾರಿ ಡಾ ರೇಣುಕಾ ಡಾ. ಆಶ್ರಿತ, ಕುಶಾಲನಗರ ನಗರ ಕಾಂಗ್ರೆಸ್ ಅಧ್ಯಕ್ಷ ಜೋಸೆಫ್ ವಿಕ್ಟರ್ ಸೋನ್ಸ್, ಸ್ಥಳೀಯ ಜನಪ್ರತಿನಿಧಿಗಳು ಇದ್ದರು.
ಮಡಿಕೇರಿ: ಸಂಗೀತ ಗಾನ ಲಹರಿ ಕರ್ನಾಟಕ ಯೂತ್ ವೇಲ್ಫೇರ್ ಅಸೋಸಿಯೇಷನ್ ಹಾಗೂ ರಿಯಾಲಿಟಿ ಬುಕ್ ಆಫ್ ವರ್ಡ್ ರೆಕಾರ್ಡ್ ಸಹಯೋಗದಲ್ಲಿ ನಡೆದ ಸಮಾರಂಭದಲ್ಲಿ ಕೊಡಗಿನ ಸಮಾಜ ಸೇವ ಕೊಣಿಯಂಡ ಕಾವ್ಯ ಸಂಜು ಶಿವಮೊಗ್ಗ ದ ಸಂಗೀತ ಗಾನ ಲಹರಿ ಸಂಸ್ಥೆಯ ಡಾ.ಪುನೀತ್ ರಾಜಕುಮಾರ್ ಕಲಾ ರತ್ನ ಸೇವಾ ಪ್ರಶಸ್ತಿ ಪಡೆದುಕೊಂಡಿದ್ದಾರೆ. ಇವರು ಕೊಡಗಿನಲ್ಲಿ ಬಾರಿ ಮಳೆಯಿಂದ ಮನೆಗಳಿಗೆ ಹಾನಿಯುoಟಾದ ಸಂದರ್ಭದಲ್ಲಿ ಹಲವಾರು ಕುಟುಂಬಗಳಿಗೆ ಸಹಾಯ ಹಸ್ತ ನೀಡಿದ್ದಾರೆ. ಕೋವಿಡ್ ಸಂದರ್ಭದಲ್ಲಿ ಸ್ವಯಂ ಪ್ರೇರಣಾ ಬಳಗದ ವತಿಯಿಂದ ಸಾವಿರಾರು ಜನರಿಗೆ ಉಪಯೋಗವಾಗುವಂತೆ ದಿನಸಿ ಕಿಟ್ ವಿತರಣೆ, ರಕ್ತದಾನ ಶಿಬಿರ, ಸಸಿಗಳನ್ನು ನೆಡುವ,ಹಾಗೂ ನೇತ್ರದಾನ, ದೇಹ ದಾನಗಳoತಹ ಮಹತ್ವ ದ ಕಾರ್ಯಕ್ರಮಗಳನ್ನು ನಿರಂತರವಾಗಿ ಮಾಡಿಕೊಂಡು ಬಂದಿದ್ದಾರೆ. ಜೆಸಿಐ ಅಧ್ಯಕ್ಷೆಯಾಗಿದ್ದಾರೆ.