ಕನ್ನಡಪ್ರಭ ವಾರ್ತೆ ಮಡಿಕೇರಿ
ಕೊಡಗು ಗೌಡ ನಿವೃತ್ತ ನೌಕರರ ಸಂಘದ ನೇತೃತ್ವದಲ್ಲಿ ರೋಟರಿ ಮಿಸ್ಟಿ ಹಿಲ್ಸ್, ಮಡಿಕೇರಿಯ ವಿನೋದ್ ಮೆಡಿಕಲ್ಸ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಂದತ್ವ ನಿಯಂತ್ರಣ ವಿಭಾಗ ಹಾಗೂ ಕುಶಾಲನಗರ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜ್ ರೆಡ್ ಕ್ರಾಸ್ ಘಟಕದ ಸಹಯೋಗದೊಂದಿಗೆ ಸಾರ್ವಜನಿಕರಿಗಾಗಿ ಉಚಿತ ನೇತ್ರ ತಪಾಸಣಾ ಶಿಬಿರ ನಡೆಯಿತು.ಕುಶಾಲನಗರದ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜ್ ನ ಸುವರ್ಣ ಭವನದಲ್ಲಿ ನಡೆದ ಶಿಬಿರದಲ್ಲಿ ನೇತ್ರ ತಜ್ಞ ಡಾ.ಸಿ.ಆರ್.ಪ್ರಶಾಂತ್ ಕಣ್ಣು ತಪಾಸಣೆ ನಡೆಸಿದರು.
ಆರೋಗ್ಯ ಸಿಬ್ಬಂದಿ ರವಿ ಆರ್ಯನ್, ರವಿಕುಮಾರ್ ಹಾಗೂ ಆದರ್ಶ್ ದೃಷ್ಟಿ ಪರಿಶೀಲಿಸಿ ವರದಿ ನೀಡಿದರು. ಮಡಿಕೇರಿಯ ವಿನೋದ್ ಮೆಡಿಕಲ್ಸ್ ನಿಂದ ಉಚಿತ ಔಷಧಿ ವಿತರಿಸಲಾಯಿತು.ಅಗತ್ಯವಿದ್ದವರು ಉಚಿತ ಕನ್ನಡವನ್ನು ಜೂ.18 ರಂದು ಕೊಡಗು ಗೌಡ ನಿವೃತ್ತ ನೌಕರರ ಸಂಘದ ಮೂಲಕ ಪಡೆಯಬಹುದು ಎಂದು ಸಂಘದ ಅಧ್ಯಕ್ಷ ಕೋರನ ವಿಶ್ವನಾಥ್ ತಿಳಿಸಿದರು.
ಪಾಲಿಟೆಕ್ನಿಕ್ ಕಾಲೇಜ್ ಆಡಳಿತ ಮಂಡಳಿಯ ಅಧ್ಯಕ್ಷ ದಿನೇಶ್ ಮಾತನಾಡಿ, ಇದೊಂದು ಉತ್ತಮ ಕಾರ್ಯಕ್ರಮವಾಗಿದ್ದು, ಈ ರೀತಿಯ ಶಿಬಿರಗಳು ಸಾರ್ವಜನಿಕರಿಗೆ ಹೆಚ್ಚು ಸಹಕಾರಿಯಾಗಲಿದೆ ಎಂದರು.ರೋಟರಿ ಮಿಸ್ಟಿ ಹಿಲ್ಸ್ ನ ಮುಂದಿನ ಸಾಲಿನ ಅಧ್ಯಕ್ಷ ಪೊನ್ನಚ್ಚನ ಮಧು ಮಾತನಾಡಿ, ಸಂಘದ ಹಿರಿಯರು ಹಾಗೂ ಎಲ್ಲಾ ಸದಸ್ಯರು ಸಮಾಜ ಸೇವೆಯಲ್ಲಿ ತೊಡಗಿಸಿಕೊಂಡಿರುವುದು ಶ್ಲಾಘನೀಯ ಎಂದು ಹೇಳಿದರು.
ಸಂಘದ ಅಧ್ಯಕ್ಷ ಕೋರನ ವಿಶ್ವನಾಥ್ ಸ್ವಾಗತಿಸಿದರು. ಕಾರ್ಯದರ್ಶಿ ಬಾರಿಕೆ ಅಯ್ಯಪ್ಪ ನಿರೂಪಿಸಿದರು. ಉಪಾಧ್ಯಕ್ಷ ಕುದುಪಜೆ ಬೋಜಪ್ಪ, ಖಜಾಂಚಿ ಕರ್ಣಯ್ಯನ ನಾಗೇಶ್, ಸಹ ಕಾರ್ಯದರ್ಶಿ ಅತ್ತೇಡಿ ಕೃಷ್ಣಪ್ಪ, ನಿರ್ದೇಶಕರಾದ ಉಮಾವತಿ ಹಾಗೂ ವಿನೋದ್ ಮೆಡಿಕಲ್ಸ್ ನ ಮಾಲೀಕ ಅಂಬೆಕಲ್ ಕುಶಾಲಪ್ಪ ಉಪಸ್ಥಿತರಿದ್ದು ಸಹಕರಿಸಿದರು.