ಕುಶಾಲನಗರ ಕಲಾ ಭವನ ಶೀಘ್ರ ಲೋಕಾರ್ಪಣೆ: ನಿರ್ಮಲ ಮಠಪತಿ

KannadaprabhaNewsNetwork |  
Published : Aug 06, 2026, 02:45 AM IST
ಜಂಟಿ ನಿರ್ದೇಶಕರಾದ ನಿರ್ಮಲ ಮಠಪತಿ ಅವರು ಕುಶಾಲನಗರಕ್ಕೆ ಭೇಟಿ ನೀಡಿದ ಸಂದರ್ಭ | Kannada Prabha

ಸಾರಾಂಶ

ಕುಶಾಲನಗರದಲ್ಲಿ ನಿರ್ಮಾಣಗೊಂಡಿರುವ ಕಲಾ ಭವನವನ್ನು ಸದ್ಯದಲ್ಲಿ ಅಧಿಕೃತವಾಗಿ ಲೋಕಾರ್ಪಣೆ ಮಾಡುವ ಮೂಲಕ ಕಲೆ ಸಾಂಸ್ಕೃತಿಕ ಚಟುವಟಿಕೆ ಕಾರ್ಯಕ್ರಮಗಳಿಗೆ ಒದಗಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಮೈಸೂರು ವಿಭಾಗದ ಜಂಟಿ ನಿರ್ದೇಶಕ ನಿರ್ಮಲ ಮಠಪತಿ ತಿಳಿಸಿದರು.

ಕನ್ನಡಪ್ರಭ ವಾರ್ತೆ ಕುಶಾಲನಗರ

ಕುಶಾಲನಗರದಲ್ಲಿ ನಿರ್ಮಾಣಗೊಂಡಿರುವ ಕಲಾ ಭವನವನ್ನು ಸದ್ಯದಲ್ಲಿ ಅಧಿಕೃತವಾಗಿ ಲೋಕಾರ್ಪಣೆ ಮಾಡುವ ಮೂಲಕ ಕಲೆ ಸಾಂಸ್ಕೃತಿಕ ಚಟುವಟಿಕೆ ಕಾರ್ಯಕ್ರಮಗಳಿಗೆ ಒದಗಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಮೈಸೂರು ವಿಭಾಗದ ಜಂಟಿ ನಿರ್ದೇಶಕ ನಿರ್ಮಲ ಮಠಪತಿ ತಿಳಿಸಿದರು.

ಅವಳು ಇತ್ತೀಚಿಗೆ ಕುಶಾಲನಗರಕ್ಕೆ ಭೇಟಿ ನೀಡಿದ ಸಂದರ್ಭ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ್ದು ನಿರ್ಮಾಣದ ಹಂತದಲ್ಲಿರುವ ಕಲಾ ಭವನ ಕಟ್ಟಡ ಕಾಮಗಾರಿ ಬಹುತೇಕ ಪೂರ್ಣ ಗೊಳ್ಳುತ್ತಿದೆ. ಕಟ್ಟಡ ಸಂಪೂರ್ಣ ಪೂರ್ಣಗೊಳ್ಳದಿದ್ದರೂ ಕೆಲವು ಕಾರ್ಯಕ್ರಮಗಳಿಗೆ ಬಳಕೆ ಮಾಡುತ್ತಿರುವ ಬಗ್ಗೆ ಪ್ರತಿಕ್ರಿಯೆ ವ್ಯಕ್ತಪಡಿಸಿದ ಅವರು ಕಟ್ಟಡವನ್ನು ನಿರ್ವಹಣೆಗಾಗಿ ತಮ್ಮ ಇಲಾಖೆ ಮೂಲಕ ಕುಶಾಲನಗರ ಪುರಸಭೆ ಸುಪರ್ದಿಗೆ ವಹಿಸಲಾಗುವುದು ಎಂದು ತಿಳಿಸಿದರು.

ಈ ಸಂದರ್ಭ ಇಲಾಖೆಯ ಸಹಾಯಕ ನಿರ್ದೇಶಕ ಕುಮಾರ್, ಮಣಜೂರು ಮಂಜುನಾಥ್, ಕನ್ನಡ ಜಾಗೃತಿ ಸಮಿತಿಯ ಸದಸ್ಯರಾದ ಲೋಕೇಶ್ ಸಾಗರ್ ಮತ್ತಿತರರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮೂಡುಬಿದಿರೆಯಲ್ಲಿ ಶ್ರೀ ಶಾರದಾ ನಾಟ್ಯಾಲಯದಿಂದ ಆಟಿಡೊಂಜಿ ದಿನ
ಮಂಗಳೂರಿನಲ್ಲಿ ಬಿಪಿಸಿಎಲ್‌ನ ‘ಭಾರತ್‌ಗ್ಯಾಸ್ ಲೈಟ್ ಜಿಪ್’ ಶುಭಾರಂಭ