ಆರಾಧನೆ ಮೂಲ ಪ್ರಕೃತಿ ಸಂರಕ್ಷಣೆ ಸಾಧ್ಯ: ಹನುಮಂತಪ್ಪ ಅಂಗಡಿ

KannadaprabhaNewsNetwork |  
Published : Nov 28, 2026, 02:30 AM IST
-192ನೇ ಕಾವೇರಿ ಮಹಾ ಆರತಿ ಕಾರ್ಯಕ್ರಮ | Kannada Prabha

ಸಾರಾಂಶ

ಕುಶಾಲನಗರದಲ್ಲಿ ಕಾವೇರಿ ಮಹಾ ಆರತಿ ಬಳಗ ಆಶ್ರಯದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಸಹಯೋಗದೊಂದಿಗೆ ಹುಣ್ಣಿಮೆ ಅಂಗವಾಗಿ ಕುಶಾಲನಗರದಲ್ಲಿ ನಡೆದ 192ನೇ ಕಾವೇರಿ ಮಹಾ ಆರತಿ ಕಾರ್ಯಕ್ರಮ

ಕುಶಾಲನಗರ: ಆರಾಧನೆಯ ಮೂಲಕ ನದಿ ಪ್ರಕೃತಿಯ ಸಂರಕ್ಷಣೆ ಮಾಡಲು ಸಾಧ್ಯ ಎಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸೋಮವಾರಪೇಟೆ ತಾಲೂಕು ಯೋಜನಾಧಿಕಾರಿ ಹನುಮಂತಪ್ಪ ಅಂಗಡಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಕುಶಾಲನಗರದಲ್ಲಿ ಕಾವೇರಿ ಮಹಾ ಆರತಿ ಬಳಗ ಆಶ್ರಯದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಸಹಯೋಗದೊಂದಿಗೆ ಹುಣ್ಣಿಮೆ ಅಂಗವಾಗಿ ಕುಶಾಲನಗರದಲ್ಲಿ ನಡೆದ 192ನೇ ಕಾವೇರಿ ಮಹಾ ಆರತಿ ಕಾರ್ಯಕ್ರಮದಲ್ಲಿ ಮಾತನಾಡಿದರು.

ಪ್ರಾಸ್ತಾವಿಕ ಮಾತನಾಡಿದ ಕಾವೇರಿ ನದಿ ಸ್ವಚ್ಛತಾ ಆಂದೋಲನ ರಾಜ್ಯ ಸಂಚಾಲಕ ಎಂ.ಎನ್. ಚಂದ್ರಮೋಹನ್, ನದಿ ಸ್ವಚ್ಛತೆ ಸಂಬಂಧ ಕಳೆದ ಎರಡು ದಶಕಗಳಿಂದ ನಿರಂತರವಾಗಿ ಕಾರ್ಯಕ್ರಮಗಳ ಮೂಲಕ ಜನರಿಗೆ ಅರಿವು ಜಾಗೃತಿ ಮೂಡಿಸಲಾಗುತ್ತಿದೆ ಎಂದರು.

ಅರ್ಚಕ ಕೃಷ್ಣಮೂರ್ತಿ ಭಟ್ ಕುಂಕುಮಾರ್ಚನೆ ಅಷ್ಟೋತ್ತರ ನಂತರ ನದಿಗೆ ಮಹಾ ಆರತಿ ಬೆಳಗಿದರು. ಕುಶಾಲನಗರ ಪುರಸಭೆಯ ಸ್ವಚ್ಛತಾ ಕಾರ್ಮಿಕರಾದ ಕುಮಾರ್ ಅವರನ್ನು ಬಳಗದ ವತಿಯಿಂದ ಗೌರವಿಸಲಾಯಿತು.

ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕುಶಾಲನಗರ ಮೇಲ್ವಿಚಾರಕರಾದ ಸುಧೀರ್, ಕಾವೇರಿ ಆರತಿ ಬಳಗದ ಸಂಚಾಲಕಿ ವನಿತಾ ಚಂದ್ರಮೋಹನ್, ಪ್ರಮುಖರಾದ ಮಂಡೆಪಂಡ ಬೋಸ್ ಮೊಣ್ಣಪ್ಪ, ಧರಣಿ, ಕರುಂಬಯ್ಯ, ಕ್ಷೇತ್ರ ಯೋಜನೆಯ ಸೇವಾ ಪ್ರತಿನಿಧಿಗಳು, ಶೌರ್ಯ ತಂಡ ಮತ್ತು ಬಳಗದ ಸದಸ್ಯರು ಇದ್ದರು.

-------------------------------ಚಿತ್ರ ಆರತಿ ಕಾರ್ಯಕ್ರಮ ಸಂದರ್ಭ

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಹೆಣ್ಮಕ್ಕಳು ಮನಸು ಮಾಡಿದರೇ ಯಾವುದೂ ಅಸಾಧ್ಯವಲ್ಲ
ಕಸಾಪ ಸೇವೆಗೆ ತೃಪ್ತಿಯಿದೆ, ಸಂತೃಪ್ತಿಯಿಲ್ಲ