ಕುಶಾಲನಗರ : ಕುಶಾಲನಗರ ಗಣಪತಿ ದೇವಾಲಯದ ಜಾತ್ರಾ ಮಹೋತ್ಸವದ ಅಂಗವಾಗಿ ನಡೆಯುವ ಮನರಂಜನಾ ಕಾರ್ಯಕ್ರಮದಲ್ಲಿ ಈ ಬಾರಿ ರಾಜ್ಯ ಮಟ್ಟದ ಕಲಾವಿದರಿಂದ ವಿಶೇಷ ಸಾಂಸ್ಕೃತಿಕ ಕಾರ್ಯಕ್ರಮ ನಡೆಸುವ ಬಗ್ಗೆ ಚಿಂತನೆ ಹರಿಸಲಾಗುವುದು ಎಂದು ಶಾಸಕ ಮಂತರ್ ಗೌಡ ಹೇಳಿದರು.
25 ರಿಂದ ಜಾತ್ರಾ ಮಹೋತ್ಸವ ಆರಂಭಗೊಳ್ಳಲಿದ್ದು 27 ರಂದು ಗಣಪತಿ ರಥೋತ್ಸವ ಜರುಗಲಿದೆ. ಈ ಹಿನ್ನೆಲೆಯಲ್ಲಿ ಜಾತ್ರಾ ಮೈದಾನದ ಪೂರ್ವ ಸಿದ್ಧತೆಯ ಪರಿಶೀಲನೆ ಹಿನ್ನೆಲೆಯಲ್ಲಿ ಶಾಸಕರು ದೇವಸ್ಥಾನ ಸಮಿತಿ ಪ್ರಮುಖರಿಂದ ಮತ್ತು ಅಧಿಕಾರಿಗಳಿಂದ ಮಾಹಿತಿ ಪಡೆದರು. ಜಾತ್ರಾ ಮೈದಾನದಲ್ಲಿ ಸಮರ್ಪಕ ವ್ಯವಸ್ಥೆ ಕಲ್ಪಿಸಲು ಪುರಸಭೆಯ ಅಧಿಕಾರಿ ಕೃಷ್ಣಪ್ರಸಾದ್ ಮತ್ತು ಆರೋಗ್ಯ ಅಧಿಕಾರಿ ಉದಯಕುಮಾರ್ ಅವರುಗಳಿಗೆ ಸೂಚನೆ ನೀಡಿದರು.
ಪುರಸಭೆ ಅಧಿಕಾರಿಗಳಿಗೆ ಉಸ್ತುವಾರಿ: ಜಾತ್ರಾ ಮೈದಾನದ ಸಂಪೂರ್ಣ ಉಸ್ತುವಾರಿಯನ್ನು ಪುರಸಭೆ ಅಧಿಕಾರಿಗಳು ವಹಿಸಿ ನಿರ್ವಹಣೆ ಮಾಡುವಂತೆ ಶಾಸಕರು ಅಧಿಕಾರಿಗಳಿಗೆ ಸೂಚನೆ ನೀಡಿದರು.ದೇವಾಲಯ ಸಮಿತಿ ಅಧ್ಯಕ್ಷ ಎಂ ಕೆ ದಿನೇಶ್, ಸಾಂಸ್ಕೃತಿಕ ಸಮಿತಿಯ ಅಧ್ಯಕ್ಷರಾದ ವಿ ಪಿ ಶಶಿಧರ್, ದೇವಾಲಯ ಸಮಿತಿಯ ಪ್ರಮುಖರಾದ ಟಿ ಆರ್ ಶರವಣಕುಮಾರ್, ಮುತ್ತಣ್ಣ, ಕೆ ಎನ್ ದೇವರಾಜ್, ಪುರಸಭೆ ಮಾಜಿ ಸದಸ್ಯರಾದ ಜಗದೀಶ್, ಕುಶಾಲನಗರ ಪಂಚಾಯಿತಿ ಮಾಜಿ ಅಧ್ಯಕ್ಷರಾದ ಹೆಚ್ ಡಿ ಚಂದ್ರು,, ಪ್ರಮುಖರಾದ ಹೆಬ್ಬಾಲೆ ರಂಜನ್, ಇರ್ಫಾನ್ ಮತ್ತಿತರರು ಇದ್ದರು.