ಕನ್ನಡಪ್ರಭ ವಾರ್ತೆ ಕುಶಾಲನಗರ ಗಣೇಶೋತ್ಸವ ಅಂಗವಾಗಿ ಕುಶಾಲನಗರ ಶ್ರೀ ಕನ್ನಿಕಾ ಪರಮೇಶ್ವರಿ ದೇವಾಲಯದಲ್ಲಿ 101 ಗಣಪತಿ ಮೂರ್ತಿಗಳ ಪ್ರತಿಷ್ಠಾಪನೆ ನಡೆದು ವಿಶೇಷ ಪೂಜಾ ಕಾರ್ಯಕ್ರಮಗಳು ಜರುಗಿದವು. ಕುಶಾಲನಗರ ವಾಸವಿ ಯುವಕ ಸಂಘ ಆಶ್ರಯದಲ್ಲಿ ನಡೆದ ಪೂಜಾ ಕಾರ್ಯಕ್ರಮದಲ್ಲಿ ಐದು ದಿನಗಳ ಕಾಲ ವಿವಿಧ ಪೂಜಾ ಕಾರ್ಯಗಳು ನೆರವೇರಿದವು.ದೀಪಾಲಂಕಾರ, ರಂಗಪೂಜೆ ಮತ್ತಿತರ ಧಾರ್ಮಿಕ ಕಾರ್ಯಕ್ರಮಗಳು ನಡೆದು ಭಾನುವಾರ ಅದ್ದೂರಿ ಮೆರವಣಿಗೆಯೊಂದಿಗೆ ಮೂರ್ತಿ ವಿಸರ್ಜನಾ ಕಾರ್ಯ ನಡೆಯಿತು. ವಾಸವಿ ಯುವಕ ಸಂಘದ ಅಧ್ಯಕ್ಷರಾದ ಪ್ರವೀಣ್, ಆರ್ಯವೈಶ್ಯ ಮಂಡಳಿ ಅಧ್ಯಕ್ಷರಾದ ಬಿ ಆರ್ ನಾಗೇಂದ್ರ ಪ್ರಸಾದ್ ಮತ್ತು ವಿವಿಧ ಘಟಕಗಳ ಪದಾಧಿಕಾರಿಗಳು ಇದ್ದರು.