ಕುಶಾಲನಗರ: 1954ನೇ ಮದ್ಯವರ್ಜನ ಶಿಬಿರ ಸಮಾರೋಪ

KannadaprabhaNewsNetwork |  
Published : Jul 25, 2025, 01:13 AM IST
 ಮಾಜಿ ಶಾಸಕ ರಂಜನ್ ಅವರು ಮಾತನಾಡುತ್ತಿರುವುದು | Kannada Prabha

ಸಾರಾಂಶ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್, ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿ ಮತ್ತು ವಿವಿಧ ಸಂಘ ಸಂಸ್ಥೆಗಳ ಸಹಯೋಗದೊಂದಿಗೆ ಕುಶಾಲನಗರ ಕೊಡವ ಸಮಾಜದಲ್ಲಿ ಎಂಟು ದಿನಗಳ ಕಾಲ ನಡೆದ 1954ನೇ ಮದ್ಯವರ್ಜನ ಶಿಬಿರದ ಸಮಾರೋಪ ಸಮಾರಂಭ ನಡೆಯಿತು.

ಕನ್ನಡಪ್ರಭ ವಾರ್ತೆ ಕುಶಾಲನಗರಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್, ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿ ಮತ್ತು ವಿವಿಧ ಸಂಘ ಸಂಸ್ಥೆಗಳ ಸಹಯೋಗದೊಂದಿಗೆ ಕುಶಾಲನಗರ ಕೊಡವ ಸಮಾಜದಲ್ಲಿ ಎಂಟು ದಿನಗಳ ಕಾಲ ನಡೆದ 1954ನೇ ಮದ್ಯವರ್ಜನ ಶಿಬಿರದ ಸಮಾರೋಪ ಸಮಾರಂಭ ನಡೆಯಿತು.ಸಮಾರೋಪದಲ್ಲಿ ಪಾಲ್ಗೊಂಡ ಮುಖ್ಯ ಅತಿಥಿ ಮಾಜಿ ಸಚಿವ ಎಂ.ಪಿ. ಅಪ್ಪಚ್ಚು ರಂಜನ್ ಮಾತನಾಡಿ, ಪ್ರತಿಯೊಬ್ಬರೂ ನೆಮ್ಮದಿ ಶಾಂತಿ ನಡುವೆ ಬದುಕು ಸಾಗಿಸಬೇಕಾಗಿದೆ. ಯಾವುದೇ ಸಂದರ್ಭ ದುಶ್ಚಟಗಳಿಗೆ ಬಲಿಯಾಗಬಾರದು, ಆ ಮೂಲಕ ಕೌಟುಂಬಿಕ ಜೀವನದ ನೆಮ್ಮದಿಯನ್ನು ಹಾಳು ಮಾಡಿಕೊಳ್ಳಬಾರದು ಎಂದು ಹೇಳಿದರು.

ಶಿಬಿರದಲ್ಲಿ ಪಾಲ್ಗೊಂಡು ಕುಡಿತದ ಚಟದಿಂದ ಹೊರಬಂದು ಪರಿವರ್ತನೆಗೊಂಡಿರುವ ಎಲ್ಲ ಶಿಬಿರಾರ್ಥಿಗಳಿಗೆ ಶುಭ ಕೋರಿದರು.1954ನೇ ಮಧ್ಯವರ್ಜನ ಶಿಬಿರದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ವಾಂಚೀರ ಮನು ನಂಜುಂಡ ಅಧ್ಯಕ್ಷತೆಯಲ್ಲಿ ನಡೆದ ಸಮಾರಂಭದ ದಿವ್ಯ ಸಾನ್ನಿಧ್ಯವನ್ನು ಕೊಡ್ಲಿಪೇಟೆ ಕಿರಿ ಕೊಡ್ಲಿ ಮಠ ಮಠಾಧೀಶರಾದ ಶ್ರೀ ಸದಾಶಿವ ಸ್ವಾಮೀಜಿ ವಹಿಸಿ ಆಶೀರ್ವಚನ ನೀಡಿದರು.ಕಾರ್ಯಕ್ರಮದಲ್ಲಿ ಶಿಬಿರ ಉಸ್ತುವಾರಿ ಅಧಿಕಾರಿ ನಂದಕುಮಾರ್, ಎಂಟು ದಿನಗಳ ಕಾರ್ಯ ಚಟುವಟಿಕೆಗಳ ಬಗ್ಗೆ ಸಮಗ್ರ ಮಾಹಿತಿ ಒದಗಿಸಿದರು. ಕ್ಷೇತ್ರ ಯೋಜನೆಯ ಜಿಲ್ಲಾ ನಿರ್ದೇಶಕರಾದ ಲೀಲಾವತಿ, ಜಿಲ್ಲೆಯಲ್ಲಿ ಯೋಜನೆಯ ಕಾರ್ಯಚಟುವಟಿಕೆಗಳ ಬಗ್ಗೆ ಮಾಹಿತಿ ಒದಗಿಸಿದರು. ಶಿಬಿರಾರ್ಥಿಗಳು ತಮ್ಮ ಶಿಬಿರದ ಅನುಭವವನ್ನು ಸಭೆಯಲ್ಲಿ ಹಂಚಿಕೊಂಡರು.

ಉಡುಪಿ ಜನಜಾಗೃತಿ ವೇದಿಕೆಯ ಗಣೇಶ್ ಆಚಾರ್ಯ, ನವ ಜೀವನ ಸಮಿತಿಯ ಬಗ್ಗೆ ಮಾತನಾಡಿದರು. ಸಭೆಯಲ್ಲಿ ಕುಶಾಲನಗರ ರೋಟರಿ ಅಧ್ಯಕ್ಷ ಮನು ತಿಮ್ಮಯ್ಯ, ಗೌಡ ಸಮಾಜ ಅಧ್ಯಕ್ಷ ಗಣಿ ಪ್ರಸಾದ್, ಮಾತನಾಡಿದರು.

ಜನಜಾಗೃತಿ ವೇದಿಕೆಯ ಉಪಾಧ್ಯಕ್ಷ ವಿ.ಡಿ. ಪುಂಡರಿಕಾಕ್ಷ, ಜನಜಾಗೃತಿ ವೇದಿಕೆಯ ಸದಸ್ಯರು, ಸ್ಥಳೀಯ ಗಣ್ಯರು ಇದ್ದರು. ಶಿಬಿರದಲ್ಲಿ ಶಿಬಿರಾರ್ಥಿಗಳ ಆತ್ಮಾವಲೋಕನ ಕಾರ್ಯಕ್ರಮ, ಭಜನಾ ಕಾರ್ಯಕ್ರಮಗಳು, ನವಜೀವನೋತ್ಸವ ಹಾಗೂ ವಿದಾಯ ಕಾರ್ಯಕ್ರಮ ನಂತರ ಕುಟುಂಬ ದಿನ ಕಾರ್ಯಕ್ರಮ ಜರುಗಿತು. ಕಾರ್ಯಕ್ರಮದಲ್ಲಿ ಶಿಬಿರಾರ್ಥಿಗಳ ಕುಟುಂಬ ಸದಸ್ಯರು ಇದ್ದರು. ಕುಶಾಲನಗರ ಸೇರಿದಂತೆ ಸುತ್ತಮುತ್ತಲ ಗ್ರಾಮಗಳ ಒಟ್ಟು 49 ಮಂದಿ ಶಿಬಿರದಲ್ಲಿ ಪಾಲ್ಗೊಂಡಿದ್ದರು.ಯೋಜನಾಧಿಕಾರಿ ಹನುಮಂತಪ್ಪ ಅಂಗಡಿ ಸ್ವಾಗತಿಸಿದರು. ವಲಯ ಮೇಲ್ವಿಚಾರಕರಾದ ನಾಗರಾಜ್ ಅವರು ವಂದಿಸಿದರು.

PREV

Recommended Stories

ರಾಜ್ಯದಲ್ಲಿ 3 ದಿನ ಭಾರೀ ಮಳೆ: 15 ಜಿಲ್ಲೆಗೆ ಯೆಲ್ಲೋ ಅಲರ್ಟ್‌
ವರ್ಗಾವಣೆ ಬಳಿಕ ಪೊಲೀಸರು ವರದಿ ಮಾಡಿಕೊಳ್ಳದಿದ್ದರೆ ಸಂಬಳ ಕಟ್‌ : ವೈದ್ಯಕೀಯ ರಜೆಗೆ ಬ್ರೇಕ್