ಕನ್ನಡಪ್ರಭ ವಾರ್ತೆ ಕುಶಾಲನಗರ ಕುಶಾಲನಗರ ತಾಲೂಕು ಆರೋಗ್ಯ ಅಧಿಕಾರಿಗಳ ಕಚೇರಿ ವತಿಯಿಂದ ಕುಶಾಲನಗರ ಸಮೀಪದ ಬಸವನಹಳ್ಳಿ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಡೆಂಘಿ ವಿರೋಧ ಮಾಸಾಚರಣೆ ಆಚರಿಸಲಾಯಿತು.
ಈ ಸಂದರ್ಭದಲ್ಲಿ ಸರಳ ಕಾರ್ಯಕ್ರಮದಲ್ಲಿ ರಾಷ್ಟ್ರೀಯ ಬಾಲ ಸ್ವಾಸ್ಥ್ಯ ಕಾರ್ಯಕ್ರಮದ ವೈದ್ಯಾಧಿಕಾರಿ ಡಾ. ಭರತ್, ಪರಿಸರ ಶುಚಿತ್ವ, ರಕ್ತ ಹೀನತೆಯ ಬಗ್ಗೆ ಸಂಪೂರ್ಣ ವಾದ ಮಾಹಿತಿಯನ್ನು ನೀಡಿದರು. ತಾಲೂಕು ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ವಿಶ್ವಜ್ಞಾ ಮಾತನಾಡಿ, ಡೆಂಘಿ ಜ್ವರ, ಡೆಂಘಿ ಜ್ವರದ ಲಕ್ಷಣ ಹಾಗೂ ಮುಂಜಾಗ್ರತಾ ಕ್ರಮಗಳ ಬಗ್ಗೆ ಸಾರ್ವಜನಿಕರಿಗೆ ಮಾಹಿತಿ ನೀಡಿ ಅತಿಸಾರ ಭೇದಿ ನಿಯಂತ್ರಣಾ ಕಾರ್ಯಕ್ರಮದ ಬಗ್ಗೆಯು ಸಹ ತಿಳಿಸಿದರು.ಡೆಂಘಿ, ಮಲೇರಿಯಾ ಜ್ವರ ಶೀಘ್ರ ಪತ್ತೆ ಹಚ್ಚಿ ಸಂಪೂರ್ಣವಾದ ಚಿಕಿತ್ಸೆ ಯನ್ನು ನೀಡುವುದರ ಮೂಲಕ ಗುಣಪಡಿಸಬಹುದು ಎಂದರು. ಮಲೇರಿಯಾ ಜ್ವರದ ಲಕ್ಷಣ, ಮತ್ತು ಚಿಕಿತ್ಸೆ, ಸೊಳ್ಳೆಗಳ ಜೀವನ ಚಕ್ರದ ಬಗ್ಗೆ ಸಾರ್ವಜನಿಕರಿಗೆ ವಿಶ್ವಜ್ಞಾ ಮಾಹಿತಿ ನೀಡಿದರು.ಸಂಚಾರಿ ಗಿರಿಜನ ಆರೋಗ್ಯ ಘಟಕದ ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಜನಾರ್ಧನ ರಾವ್ ಕದಂ ಮಾತನಾಡಿ, ಚಿಕೂನ್ ಗುನ್ಯಾ ಜ್ವರ, ರಾಷ್ಟ್ರೀಯ ಕ್ಷಯರೋಗ ನಿರ್ಮೂಲನ ಕಾರ್ಯಕ್ರಮ, ರಾಷ್ಟ್ರೀಯ ಕುಷ್ಠರೋಗ ನಿರ್ಮೂಲನ ಕಾರ್ಯಕ್ರಮ, ನಾಯಿ ಕಡಿತ ಹಾಗೂ ಹಾವು ಕಡಿತದ ಬಗ್ಗೆ ಸಂಪೂರ್ಣವಾದ ಮಾಹಿತಿಯನ್ನು ನೀಡಿದರು.
ಪ್ರಾಥಮಿಕ ಆರೋಗ್ಯ ಸುರಕ್ಷತಾ ಅಧಿಕಾರಿಗಳಾದ ಸೌಮ್ಯ ಮಾತನಾಡಿ ಎಲ್ಲಾ ರಾಷ್ಟ್ರೀಯ ಆರೋಗ್ಯ ಕಾರ್ಯಕ್ರಮ, ಪರಿಸರ ಸ್ವಚ್ಛತೆಯ ಬಗ್ಗೆ ನೀರಿನ ಸ್ವಚ್ಛತೆಯ ಬಗ್ಗೆ ಆರೋಗ್ಯ ಶಿಕ್ಷಣದ ಕುರಿತು ಮಾಹಿತಿ ನೀಡಿದರು. ಕಾರ್ಯಕ್ರಮದಲ್ಲಿ ಆರೋಗ್ಯ ಇಲಾಖೆಯ ಹಿರಿಯ ಫಾರ್ಮಸಿ ಅಧಿಕಾರಿ ಶಹನಾಜ್ , ಈಶ್ವರಿ, ವೆನಿಲ್ಲಾ , ಸಮುದಾಯ ಆರೋಗ್ಯ ಅಧಿಕಾರಿ ರಾಕೇಶ್ ಮೊರಾರ್ಜಿ ದೇಸಾಯಿ ವಸತಿ ಶಾಲೆ ಬಸವನಹಳ್ಳಿಯ ಪ್ರಾಂಶುಪಾಲರಾದ ಶ್ರೀದೇವಿ ಹಾಗೂ ಶಿಕ್ಷಕರು ಮುತ್ತು ಸಿಬ್ಬಂದಿ ವರ್ಗದವರು ಶಾಲೆಯ ವಿದ್ಯಾರ್ಥಿ ವಿದ್ಯಾರ್ಥಿನಿಯರು ಇದ್ದರು.