ಕುಶಾಲನಗರ: ಕುಶಾಲನಗರ ಶಾಸಕರ ಕಚೇರಿಯಲ್ಲಿ ಸಾರ್ವಜನಿಕರಿಂದ ಅಹವಾಲು ಸ್ವೀಕಾರ ನಡೆಯಿತು. ಕುಶಾಲನಗರ ಪಟ್ಟಣ ಸೇರಿದಂತೆ ಸುತ್ತಮುತ್ತ ಗ್ರಾಮಗಳ ನಾಗರಿಕರು ಹೆಚ್ಚಿನ ಸಂಖ್ಯೆಯಲ್ಲಿ ಕಚೇರಿಗೆ ಆಗಮಿಸಿ ತಮ್ಮ ಗ್ರಾಮದ ಮೂಲಭೂತ ಸೌಲಭ್ಯಗಳ ಬಗ್ಗೆ ಶಾಸಕರಿಗೆ ಅಹವಾಲು ಸಲ್ಲಿಸಿದರು.ಅರ್ಜಿಗಳ ಪರಿಶೀಲನೆ ನಡೆಸಿದ ಶಾಸಕ ಡಾ ಮಂತರ್ ಗೌಡ ಸಂಬಂಧಿಸಿದ ಅಧಿಕಾರಿಗಳನ್ನು ಸಂಪರ್ಕಿಸಿ ಸಮಸ್ಯೆಗಳ ಪರಿಹಾರಕ್ಕೆ ಸೂಚನೆ ನೀಡಿದರು.
ಕುಶಾಲನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಪ್ರಮೋದ್ ಮುತ್ತಪ್ಪ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವಿ ಪಿ ಶಶಿಧರ್, ನಗರ ಕಾಂಗ್ರೆಸ್ ಅಧ್ಯಕ್ಷರಾದ ಜೋಸೆಫ್ ವಿಕ್ಟರ್ ಸೋನ್ಸ್, ಪ್ರಮುಖರಾದ ಮಂಜುನಾಥ ಗುಂಡೂರಾವ್, ಕಚೇರಿ ಆಪ್ತ ಸಹಾಯಕರಾದ ರಂಜು ಹೆಬ್ಬಾಲೆ ಮತ್ತಿತರರು ಇದ್ದರು.