ಕುಶಾಲನಗರ ಫಾತಿಮಾ ಕಾನ್ವೆಂಟ್: ಸುವರ್ಣ ಸಂಭ್ರಮ ಸಿದ್ಧತೆ

KannadaprabhaNewsNetwork |  
Published : Jun 16, 2026, 02:45 AM IST
ಕಾರ್ಯಕ್ರಮ ಸಂದರ್ಭ ಸಂದರ್ಭ | Kannada Prabha

ಸಾರಾಂಶ

ಕುಶಾಲನಗರದ ಫಾತಿಮಾ ಕಾನ್ವೆಂಟ್ ಶಿಕ್ಷಣ ಸಂಸ್ಥೆ 1976ರಲ್ಲಿ ಆರಂಭವಾಗಿದ್ದು, ಸುವರ್ಣ ಸಂಭ್ರಮವನ್ನು ಅದ್ದೂರಿಯಾಗಿ ಆಚರಿಸಲು ನಿರ್ಧರಿಸಲಾಗಿದೆ.

ಕನ್ನಡಪ್ರಭ ವಾರ್ತೆ ಕುಶಾಲನಗರ

ಕುಶಾಲನಗರದ ಫಾತಿಮಾ ಕಾನ್ವೆಂಟ್ ಶಿಕ್ಷಣ ಸಂಸ್ಥೆ 1976ರಲ್ಲಿ ಆರಂಭವಾಗಿದ್ದು, ಸುವರ್ಣ ಸಂಭ್ರಮವನ್ನು ಅದ್ದೂರಿಯಾಗಿ ಆಚರಿಸಲು ನಿರ್ಧರಿಸಲಾಗಿದೆ.

ಶಾಲೆಯ ಸಭಾಂಗಣದಲ್ಲಿ ಪೋಷಕರು, ಹಿರಿಯ ವಿದ್ಯಾರ್ಥಿಗಳು, ಶಾಲಾ ಆಡಳಿತ ಮಂಡಳಿ ಸಭೆಯಲ್ಲಿ ಈ ಬಗ್ಗೆ ನಿರ್ಣಯ ಕೈಗೊಳ್ಳಲಾಗಿದ್ದು, ಸುವರ್ಣ ವರ್ಷವನ್ನು ಹಲವು ಕಾರ್ಯಕ್ರಮಗಳ ಮೂಲಕ ಆಚರಿಸಲು ತೀರ್ಮಾನ ಕೈಗೊಳ್ಳಲಾಗಿದೆ.

ಜೂನ್ ತಿಂಗಳಲ್ಲಿ ಶಾಲೆಯಲ್ಲಿ ಕಲಿಯುತ್ತಿರುವ ವಿದ್ಯಾರ್ಥಿಗಳಿಗೆ, ಪಾಲಕರಿಗೆ, ಶಾಲಾ ಸಿಬ್ಬಂದಿಗಳಿಗೆ ಜಾಗೃತಿ ಸಭೆ ಏರ್ಪಡಿಸುವುದು, ಜುಲೈ ತಿಂಗಳಲ್ಲಿ ಬೃಹತ್ ಆರೋಗ್ಯ ತಪಾಸಣಾ ಶಿಬಿರ ಆಯೋಜಿಸಲು ಚಿಂತಿಸಲಾಗಿದೆ.

ಆಗಸ್ಟ್ ತಿಂಗಳಲ್ಲಿ ಅಂತರ ಶಾಲೆ ಮತ್ತು ಕಾಲೇಜು ವಿದ್ಯಾರ್ಥಿಗಳಿಗೆ ಜಿಲ್ಲಾ ಮಟ್ಟದ ಕ್ರೀಡೆ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದು. ಸೆಪ್ಟೆಂಬರ್ ತಿಂಗಳಲ್ಲಿ ಗರ್ಭಕಂಠ ಕ್ಯಾನ್ಸರ್ ತಡೆಗಟ್ಟಲು ಜಾಗೃತಿ ಮ್ಯಾರಥಾನ್ ಆಯೋಜನೆ.

ಯುವ ಜನಾಂಗದಲ್ಲಿ ಆಚಾರ ವಿಚಾರಗಳನ್ನು ತಿಳಿಸುವ ಪ್ರಯತ್ನವಾಗಿ ಶಾಲೆಯ ವಿದ್ಯಾರ್ಥಿಗಳಿಗೆ ಮತ್ತು ಪಾಲಕರಿಗೆ ಸಾಂಪ್ರದಾಯಿಕ ದಿನವನ್ನು ಅಕ್ಟೋಬರ್ ತಿಂಗಳಲ್ಲಿ ಆಚರಿಸಲಾಗುವುದು. ನವೆಂಬರ್ ತಿಂಗಳಿನಲ್ಲಿ ರಾಜ್ಯೋತ್ಸವ ಮತ್ತು ಹಿರಿಯ ವಿಧ್ಯಾರ್ಥಿಗಳ ಸಮ್ಮಿಲನ ಸಂಭ್ರಮ ಕಾರ್ಯಕ್ರಮ ನಡೆಯಲಿದೆ.

ಡಿಸೆಂಬರ್ ತಿಂಗಳಲ್ಲಿ ಸುವರ್ಣ ಸಂಭ್ರಮದ ಸಮಾರೋಪ ಸಮಾರಂಭ ನಡೆಸಿ, ರಾಷ್ಟ್ರ ಮಟ್ಟದಲ್ಲಿ ಸಾಧನೆ ಮಾಡಿದ ಶಾಲೆಯ ಹಿರಿಯ ವಿಧ್ಯಾರ್ಥಿಗಳನ್ನು ಗೌರವಿಸುವುದು, ಸಾಂಸ್ಕೃತಿಕ ಕಾರ್ಯಕ್ರಮ ಏರ್ಪಡಿಸಲಾಗುವುದು.

ಸಭೆಯಲ್ಲಿ ಶಾಲೆಯ ವ್ಯವಸ್ಥಾಪಕಿ ಸಿಸ್ಟರ್ ಆಗ್ನೆಸ್, ಶಾಲೆಯ ಪ್ರತಿನಿಧಿ ಸಿಸ್ಟರ್ ಪ್ಲೋರೆಟ್, ಆಡಳಿತಾಧಿಕಾರಿ ಸಿಸ್ಟರ್ ಅರ್ಪಿತಾ, ಸಿಸ್ಟರ್ ಸೋಫಿಯಾ ಮೇರಿ, ಪೋಷಕರ ಪ್ರತಿನಿಧಿ ಕೆ.ಎಸ್. ನಾಗೇಶ್, ಆಶ್ರಪ್, ಹಿರಿಯ ವಿಧ್ಯಾರ್ಥಿಗಳ ಪ್ರತಿನಿಧಿ ಮಂಜುನಾಥ್ ಗುಂಡೂರಾವ್, ಅಪ್ಪಯ್ಯ, ನಾಗರಾಜ್, ಶಾಲೆಯ ಸಲಹಾ ಸಮಿತಿಯ ಡಾ. ರಾಮ ಭಟ್ ಮತ್ತಿತರರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಎಂಸಿಸಿ ಬ್ಯಾಂಕ್‌: ವಾರ್ಷಿಕ ಕಾರ್ಯಕ್ಷಮತೆ ಪರಿಶೀಲನೆ, ಪ್ರಶಸ್ತಿ ಪ್ರದಾನ
ನ್ಯಾಯದಾನಕ್ಕೆ ಮುಕ್ತ ವಾತಾವರಣ ಅಗತ್ಯ: ನ್ಯಾ. ನರೇಂದ್ರ ಪ್ರಸಾದ್