ಕುಶಾಲನಗರ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಸಾಂಸ್ಕೃತಿಕ ವೇದಿಕೆ, ರಾಷ್ಟ್ರೀಯ ಸೇವಾ ಯೋಜನೆ ಹಾಗೂ ಕ್ರೀಡಾ ವಿಭಾಗದ ಆಶ್ರಯದಲ್ಲಿ ಆಯೋಜಿಸಿಲಾದ ಮೂರು ದಿನಗಳ ಜನಪದ ಉತ್ಸವಕ್ಕೆ ಶುಕ್ರವಾರ ತೆರೆ ಬಿದ್ದಿತು.
ಕನ್ನಡಪ್ರಭ ವಾರ್ತೆ ಕುಶಾಲನಗರಕುಶಾಲನಗರ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಸಾಂಸ್ಕೃತಿಕ ವೇದಿಕೆ, ರಾಷ್ಟ್ರೀಯ ಸೇವಾ ಯೋಜನೆ ಹಾಗೂ ಕ್ರೀಡಾ ವಿಭಾಗದ ಆಶ್ರಯದಲ್ಲಿ ಆಯೋಜಿಸಿಲಾದ ಮೂರು ದಿನಗಳ ಜನಪದ ಉತ್ಸವಕ್ಕೆ ಶುಕ್ರವಾರ ತೆರೆ ಬಿದ್ದಿತು.ಬುಧವಾರ ಜನಪದ ಕಲಾತಂಡಗಳ ಮೆರವಣಿಗೆಗೆ ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ವಿ.ಪಿ. ಶಶಿಧರ್ ಚಾಲನೆ ನೀಡಿದರು. ಜನಪದ ಕಾರ್ಯಾಗಾರವನ್ನು ಮೈಸೂರಿನ ಉಮೇಶ್ ಉದ್ಘಾಟಿಸಿದರು.
ಗುರುವಾರ ಕಾಲೇಜಿನ ವಿದ್ಯಾರ್ಥಿಗಳು ಸಿದ್ಧಪಡಿಸಿದ ದೇಶಿ ಆಹಾರ ಸಾಮಗ್ರಿಗಳ ಪ್ರದರ್ಶನ ಮತ್ತು ಮಾರಾಟ ನಡೆಯಿತು. ಕಾಲೇಜಿನ ಅಭಿವೃದ್ಧಿ ಸಮಿತಿಯ ಪ್ರಮುಖರು ಚಾಲನೆ ನೀಡಿದ್ದು, ಕಾಲೇಜಿನ ಪ್ರಾಂಶುಪಾಲ ಬಿ.ಎಂ. ಪ್ರವೀಣ್ ಕುಮಾರ್ ಅಧ್ಯಕ್ಷತೆಯಲ್ಲಿ ವಿವಿಧ ಕಾರ್ಯಕ್ರಮಗಳು ಜರುಗಿದವು. ಕಾಲೇಜು ಹಳೆ ವಿದ್ಯಾರ್ಥಿಗಳ ಸಂಘ ಅಧ್ಯಕ್ಷ ನವನೀತ್ ಪೊನ್ನೆಟಿ, ಕಾಲೇಜು ಅಭಿವೃದ್ಧಿ ಸಮಿತಿ ಸದಸ್ಯರು ಹಾಗೂ ಕಾಲೇಜಿನ ವಿವಿಧ ವಿಭಾಗಗಳ ಮುಖ್ಯಸ್ಥರು, ಉಪನ್ಯಾಸಕರು ಇದ್ದರು.ಶುಕ್ರವಾರ ಕಾಲೇಜಿನ ವಿದ್ಯಾರ್ಥಿಗಳಿಂದ ಜನಪದ ಹಾಡುಗಳು, ನೃತ್ಯ ಪ್ರದರ್ಶನ ಕಾರ್ಯಕ್ರಮ ಜರುಗಿತು.ಕರ್ನಾಟಕ ಜಾನಪದ ಪರಿಷತ್ ಕುಶಾಲನಗರ ತಾಲೂಕು ಅಧ್ಯಕ್ಷ ಎಂ.ಎನ್. ಚಂದ್ರಮೋಹನ್, ಜನಪದ ಕಲಾ ಸಂಭ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು. ವಿದ್ಯಾರ್ಥಿಗಳಿಂದ ಸಮೂಹ ನೃತ್ಯ ಮತ್ತಿತರ ಸಾಂಸ್ಕೃತಿಕ ಚಟುವಟಿಕೆಗಳು ನಡೆದವು.ಕಾಲೇಜು ಪ್ರಾಂಶುಪಾಲ ಪ್ರೊ. ಬಿ.ಎಂ. ಪ್ರವೀಣ್ ಕುಮಾರ್ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಹ ಪ್ರಾಧ್ಯಾಪಕ ಡಾ.ಪುಟ್ಟರಾಜು, ಟಿ.ಎಂ. ಸುಧಾಕರ್, ಡಾ.ಪಿ.ಪಿ. ವಂದನ, ಮಧುಶ್ರೀ, ಡಾ.ಬಿ.ಕೆ. ಕುಮಾರ್, ಡಾ. ಎಂ. ರಶ್ಮಿ ಮತ್ತಿತರರು ಇದ್ದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.