ಕುಶಾಲನಗರ: ಗ್ಯಾರಂಟಿ ಯೋಜನೆ ಅನುಷ್ಠಾನ ಪ್ರಾಧಿಕಾರ ಪ್ರಗತಿ ಪರಿಶೀಲನೆ

KannadaprabhaNewsNetwork |  
Published : Jun 26, 2026, 03:00 AM IST
ತಾಲೂಕು ಪಂಚಾಯತಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ ಪ್ರಗತಿ ಪರಿಶೀಲನಾ ಸಭೆ | Kannada Prabha

ಸಾರಾಂಶ

ಕುಶಾಲನಗರ ತಾಲೂಕು ಪಂಚಾಯಿತಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ ಪ್ರಗತಿ ಪರಿಶೀಲನಾ ಸಭೆ ನಡೆಯಿತು.

ಕನ್ನಡಪ್ರಭ ವಾರ್ತೆ ಕುಶಾಲನಗರ

ಕುಶಾಲನಗರ ತಾಲೂಕು ಪಂಚಾಯಿತಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ ಪ್ರಗತಿ ಪರಿಶೀಲನಾ ಸಭೆ ನಡೆಯಿತು.

ಕುಶಾಲನಗರ ಪುರಸಭೆ ಸಭಾಂಗಣದಲ್ಲಿ ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿಯ ಅಧ್ಯಕ್ಷ ವಿಪಿ ಶಶಿಧರ್ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಆಹಾರ ಇಲಾಖೆ ಮತ್ತು ಸಾರಿಗೆ ಇಲಾಖೆಯ ಅಧಿಕಾರಿಗಳ ಜೊತೆಗೆ ಪ್ರಗತಿ ಪರಿಶೀಲನೆ ಬಗ್ಗೆ ಸಮಗ್ರ ಚರ್ಚೆ ನಡೆಸಲಾಯಿತು.

ಅಂಗನವಾಡಿ ಕಾರ್ಯಕರ್ತರ ಸಹಾಯಕಿಯರ ಆಯ್ಕೆ ಸಂಬಂಧಿಸಿದಂತೆ ಅಧಿಕಾರಿಗಳ ಮೂಲಕ ಮಾಹಿತಿ ಪಡೆಯಲಾಯಿತು.

ಕುಶಾಲನಗರ ನೂತನ ಬಸ್ ಡಿಪೋ ನಿರ್ಮಾಣ ಕಾಮಗಾರಿ ಪ್ರಗತಿ ಬಗ್ಗೆ ಸಭೆಯಲ್ಲಿ ಚರ್ಚಿಸಿ ಅಧಿಕಾರಿಗಳೊಂದಿಗೆ ಮಾಹಿತಿ ಕಲೆ ಹಾಕಲಾಯಿತು.

ಕೂಡು ಮಂಗಳೂರು ಗ್ರಾಮದ ಬಡಾವಣೆಯೊಂದರಲ್ಲಿ ಚರಂಡಿ ಮೇಲೆ 11 ಕೆವಿ ವಿದ್ಯುತ್ ಲೈನ್ ಹೋಗಿರುವ ಬಗ್ಗೆ ಮತ್ತು ಶುಂಠಿಕೊಪ್ಪ ವ್ಯಾಪ್ತಿಯ ಪೊಲೀಸ್ ಠಾಣೆ ಬಳಿ ಎಲ್ ಟಿ ಲೈನ್ ಗೆ ಕೇಬಲ್ ಅಳವಡಿಸುವ ಬಗ್ಗೆ ಚರ್ಚಿಸಲಾಯಿತು.

ಕುಶಾಲನಗರ ಸಮೀಪ ಗುಮ್ಮನ ಕೊಲ್ಲಿ ಗ್ರಾಮದಲ್ಲಿ 11 ಕೆ ವಿ ವಿದ್ಯುತ್ ಲೈನ್ ತಗುಲಿ ಬಾಲಕಿ ಆಸ್ಪತ್ರೆಗೆ ಸೇರಿರುವ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಸಂಗ್ರಹಿಸಲಾಯಿತು ಈ ಬಗ್ಗೆ ಮಾಹಿತಿ ನೀಡಿದ ಸೆಸ್ಕಾಂ ಇಲಾಖೆ ಸಹಾಯಕ ಕಾರ್ಯ ಪಾಲಕ ಅಭಿಯಂತರ ಮಂಜುನಾಥ್ ಅವರು ಬಾಲಕಿಯ ಚಿಕಿತ್ಸೆಗೆ ಇಲಾಖಾ ವತಿಯಿಂದ ಈಗಾಗಲೇ 3.75 ಲಕ್ಷ ರು. ಗಳನ್ನು ನೀಡಲಾಗಿದೆ. ಅಲ್ಲದೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅಧಿಕಾರಿಗಳಿಗೆ ಕಾರಣ ಕೇಳಿ ನೋಟಿಸ್ ಅನ್ನು ಜಾರಿಗೊಳಿಸಲಾಗಿದೆ ಎಂದು ಸಭೆಗೆ ಮಾಹಿತಿ ಒದಗಿಸಿದರು.

ಜಿಲ್ಲಾ ಗ್ಯಾರಂಟಿ ಸಮಿತಿಯ ಉಪಾಧ್ಯಕ್ಷರಾದ ಕೆ ಸಿ ಶಶಿ ಭೀಮಯ್ಯ, ಮುಸ್ತಫ, ಸದಸ್ಯರಾದ ಅಣ್ಣಯ್ಯ ಮತ್ತು ತಾಲೂಕು ಸಮಿತಿಯ ಸದಸ್ಯರುಗಳಾದ ಬಿ ಸಿ ಮಲ್ಲಿಕಾರ್ಜುನ, ಫಿಲೋಮಿನಾ, ಸುಹಾದ ಅಶ್ರಫ್, ಎಸ್ ಎ ಶ್ರೀನಿವಾಸ್ ಎನ್ ಶ್ರೀನಿವಾಸ್ ಕುಮಾರ್ ಯು ಎಂ ಕಿಶೋರ್ ಹೆಚ್ ಯು ರಫಿಕ್ ಖಾನ್ ಮತ್ತು ಮತ್ತಿತರ ಅಧಿಕಾರಿಗಳು ಇದ್ದರು. ಅಧಿಕಾರಿಗಳಾದ ಲೋಕೇಶ್, ರಾಕೇಶ್ ಮತ್ತಿತರರು ಇದ್ದರು.

ಸಭೆ ನಡೆಯುತ್ತಿದ್ದ ಸಂದರ್ಭ ಜಿಲ್ಲಾ ಮಟ್ಟದ ಅಧಿಕಾರಿಯೊಬ್ಬರು ಮೊಬೈಲ್ ನಲ್ಲಿ ಗೇಮ್ ವೀಕ್ಷಣೆ ಮಾಡುತ್ತಿದ್ದ ಬಗ್ಗೆ ಗಮನಕ್ಕೆ ಬಂದ ಸಂದರ್ಭ ಅಧ್ಯಕ್ಷರು ತರಾಟೆಗೆ ತೆಗೆದುಕೊಂಡ ಘಟನೆ ನಡೆಯಿತು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕಸ್ತೂರ್ಬಾ ಆಸ್ಪತ್ರೆಯಲ್ಲಿ ಬಿಎಚ್‌ಐಎಂ ಘಟಕ ಉದ್ಘಾಟನೆ
ದುಶ್ಚಟಗಳಿಂದ ದೂರವಿರಿ: ಅನಂತ್‌ ಕುಮಾರ್‌