ಕನ್ನಡಪ್ರಭ ವಾರ್ತೆ ಕುಶಾಲನಗರ ಕುಶಾಲನಗರ ಕೊಡವ ಸೌಹಾರ್ದ ಸಹಕಾರಿ ನಿಯಮಿತ ಸಂಘದ ಕಚೇರಿಗೆ ಕುಶಾಲನಗರ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಕುಟ್ಟಂಡ ಪ್ರಮೋದ್ ಮುತ್ತಪ್ಪ ಚಾಲನೆ ನೀಡಿದರು. ಕೊಡವ ಸಮಾಜದ ಸಭಾಂಗಣದಲ್ಲಿ ನಡೆದ ಸರಳ ಸಮಾರಂಭದಲ್ಲಿ ಮಾತನಾಡಿದ ಅವರು, ಸಮುದಾಯದ ಏಳಿಗೆಯ ಗುರಿಯನ್ನು ಹೊಂದಿಕೊಂಡು ಸ್ಥಾಪನೆಯಾದ ಸಂಸ್ಥೆಯ ಅಭಿವೃದ್ಧಿಗೆ ಪ್ರತಿಯೊಬ್ಬರು ಸಹಕಾರ ನೀಡುವುದರೊಂದಿಗೆ ಯಶಸ್ಸಿಗೆ ಸಹಕರಿಸಬೇಕು ಎಂದು ಕರೆ ನೀಡಿದರು. ಉದ್ಯಮಿ ಹಾಗೂ ಕಾಫಿ ಬೆಳೆಗಾರರಾದ ಚೆಂದಂಡ ಜೆಮ್ಸಿ ಪೊನ್ನಪ್ಪ ಅವರು ನೂತನ ಸಂಸ್ಥೆಗೆ ಶುಭ ಕೋರಿ ಈ ಮೂಲಕ ಸಮುದಾಯದ ಪ್ರತಿಯೊಬ್ಬರು ಆರ್ಥಿಕ ಸಹಾಯ ಪಡೆಯುವುದರೊಂದಿಗೆ ತಮ್ಮ ಹಾಗೂ ಸಂಸ್ಥೆಯ ಬೆಳವಣಿಗೆಗೆ ಕೈಜೋಡಿಸಬೇಕು ಎಂದರು. ಕಚೇರಿಯ ಗಣಕಯಂತ್ರ ವಿಭಾಗ ಉದ್ಘಾಟನೆ ಮಾಡಿದ ಕುಶಾಲನಗರ ಕೊಡವ ಸಮಾಜ ಅಧ್ಯಕ್ಷರಾದ ವಾಂಚೀರ ಮನು ನಂಜುಂಡ ನೂತನ ಸಂಸ್ಥೆಗೆ ಶುಭ ಕೋರಿ ಸಂಘವನ್ನು ಹೆಮ್ಮರವಾಗಿ ಬೆಳೆಸುವ ಹೊಣೆಗಾರಿಕೆ ಪ್ರತಿಯೊಬ್ಬ ಸದಸ್ಯರದ್ದಾಗಿದೆ ಎಂದು ಹೇಳಿದರು. ಕೊಡವ ಸೌಹಾರ್ದ ಸಹಕಾರಿ ನಿಯಮಿತ ಅಧ್ಯಕ್ಷರಾದ ಕೋಡಿರ ಕೆ ಪೂವಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಕುಶಾಲನಗರ ಕೊಡವ ಸಮಾಜದ ಉಪಾಧ್ಯಕ್ಷರಾದ ಪುಲಿಯಂಡ ಚಂಗಪ್ಪ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅಲ್ಲಾರಂಡ ಸಿ ಹೇಮಾವತಿ ಮತ್ತು ಆಡಳಿತ ಮಂಡಳಿ ನಿರ್ದೇಶಕರು ಸದಸ್ಯರು ಇದ್ದರು.ನಿರ್ದೇಶಕರಾದ ಚೆಪ್ಪುಡಿರ ರತನ್ ಕಾವೇರಪ್ಪ ಪ್ರಾಸ್ತಾವಿಕವಾಗಿ ಮಾತನಾಡಿ ಸಂಸ್ಥೆಯ ಸಮಗ್ರ ಮಾಹಿತಿ ನೀಡಿದರು.