ಕುಶಾಲನಗರ: ಮಹರ್ಷಿ ವಾಲ್ಮೀಕಿ ಜಯಂತಿ ಸಮಾರಂಭ

KannadaprabhaNewsNetwork |  
Published : Oct 11, 2025, 12:03 AM IST
 ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಸಮಾರಂಭ  | Kannada Prabha

ಸಾರಾಂಶ

ಕುಶಾಲನಗರ ವಾಲ್ಮೀಕಿ ಭವನದಲ್ಲಿ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಸಮಾರಂಭ ನಡೆಯಿತು.

ಕನ್ನಡಪ್ರಭ ವಾರ್ತೆ ಕುಶಾಲನಗರಕುಶಾಲನಗರ ತಾಲೂಕು ಆಡಳಿತ, ತಾಲೂಕು ಪಂಚಾಯಿತಿ, ಪುರಸಭೆ, ಸಮಾಜ ಕಲ್ಯಾಣ ಇಲಾಖೆ ಹಾಗೂ ಕೊಡಗು ಜಿಲ್ಲಾ ವಾಲ್ಮೀಕಿ ನಾಯಕ ಕ್ಷೇಮಾಭಿವೃದ್ಧಿ ಸಂಘದ ಸಂಯುಕ್ತಾಶ್ರಯದಲ್ಲಿ ಕುಶಾಲನಗರ ವಾಲ್ಮೀಕಿ ಭವನದಲ್ಲಿ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಸಮಾರಂಭ ನಡೆಯಿತು.ಕುಶಾಲನಗರ ಪುರಸಭೆ ಅಧ್ಯಕ್ಷೆ ಜಯಲಕ್ಷ್ಮಿ ಚಂದ್ರ ವೇದಿಕೆ ಕಾರ್ಯಕ್ರಮ ಉದ್ಘಾಟಿಸಿದರು.ಶ್ರೀ ಮಹರ್ಷಿ ವಾಲ್ಮೀಕಿ ಭಾವಚಿತ್ರಕ್ಕೆ ಕುಶಾಲನಗರ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಶಶಿಧರ್ ಸೇರಿದಂತೆ ಗಣ್ಯರು ಪುಷ್ಪಾರ್ಚನೆ ಮಾಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಮುಖ್ಯ ಭಾಷಣಕಾರರಾಗಿ ಪಾಲ್ಗೊಂಡಿದ್ದ ಸಾಹಿತಿ ಹಾಗೂ ಚಿಂತಕ ಡಾ.ಹೆಚ್.ಕೆ.ನರಸಿಂಹಮೂರ್ತಿ ಅವರು ವಾಲ್ಮೀಕಿ ಜಯಂತಿ ಕುರಿತು ಮಾತನಾಡಿದರು. ವಾಲ್ಮೀಕಿ ರಾಮಾಯಣ ಭಾರತೀಯ ಸಂಸ್ಕೃತಿಯ ಬೆಳೆದು ಬಂದ ವಿಧಾನ, ಕೌಟುಂಬಿಕ ವ್ಯವಸ್ಥೆಯ ಬಗ್ಗೆ ಸಮಾಜಕ್ಕೆ ಕಟ್ಟಿಕೊಟ್ಟ ಕಾವ್ಯ ಎಂದು ಬಣ್ಣಿಸಿದರು. ಜಗತ್ತಿನ ಮೊದಲ ಕಾವ್ಯ ರಚಿಸಿದ ಕೀರ್ತಿ ವಾಲ್ಮೀಕಿ ಮಹರ್ಷಿ ಅವರದ್ದಾಗಿದೆ ಎಂದರು.ರಾಷ್ಟ್ರೀಯ ಹಬ್ಬಗಳ ಆಚರಣೆ ಸಮಿತಿ ಅಧ್ಯಕ್ಷರು ಹಾಗೂ ಕುಶಾಲನಗರ ತಾಲೂಕು ತಹಸೀಲ್ದಾರ್ ಕಿರಣ್ ಜಿ ಗೌರಯ್ಯ ಮಾತನಾಡಿ, ವಾಲ್ಮೀಕಿ ಮಹರ್ಷಿ ರಚಿಸಿದ ರಾಮಾಯಣ ಕೃತಿಯ ಮಹತ್ವದ ಬಗ್ಗೆ ವಿವರಿಸಿದರು. ರಾಮಾಯಣ ರಚಿಸುವ ಮೂಲಕ ಮಹರ್ಷಿಗಳು ಸಮಗ್ರ ಭಾರತೀಯ ಸಂಸ್ಕೃತಿಯ ‌ಮೇಲೆ ಪ್ರಭಾವ ಬೀರಿದ್ದಾರೆ. ಸರ್ವರೂ ಇವರ ಸಾಧನೆಗೆ ಗೌರವ ಸಮರ್ಪಣೆ ಮಾಡಬೇಕಿದೆ ಎಂದರು.ಕುಶಾಲನಗರ ತಾಲೂಕು ಗ್ಯಾರೆಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ವಿ.ಪಿ.ಶಶಿಧರ್ ಮಾತನಾಡಿ, ವಾಲ್ಮೀಕಿ ಮಹಿರ್ಷಿ ಭಾರತೀಯ ಪುರಾಣಕ ಸಾಹಿತ್ಯದಲ್ಲಿ ವಿಶಿಷ್ಟ ಸ್ಧಾನ ವನ್ನು ಪಡೆದ ಮಹಾನ್ ಖುಷಿ, ವಾಲ್ಮೀಕಿ ಅವರ ರಾಮಾಯಣದ ಮೂಲಕ ನಾವು ನೈತಿಕತೆ, ಧೈರ್ಯ, ಶ್ರದ್ಧೆ ಭಕ್ತಿ ಗುಣಗಳ ಮೂಲಕ ಭ್ರಾತೃತ್ವ, ಭಾವನಾತ್ಮಕ ಸಂಬಂಧಗಳ ಮುಖೇನ ಜ್ಞಾನಾಭಿವೃಧ್ಧಿಯ ಯಶಸ್ಸು ಕಾಣಲು ಇವರ ಆದರ್ಶಗಳ ಸಾಧನೆಯನ್ನು ಅಳವಡಿಸಿಕೊಳ್ಳುವ ಮೂಲಕ ಉನ್ನತ ವಿಚಾರಗಳು ಎಂದೆಂದಿಗೂ ಸ್ಮರಣೀಯ ಎಂದು ಹೇಳಿದರು.ಜಿಲ್ಲಾ ಮಹರ್ಷಿ ವಾಲ್ಮೀಕಿ ಸಂಘದ ಅಧ್ಯಕ್ಷ ಕೆ.ಎನ್. ಆಶೋಕ್ ಮಾತನಾಡಿದರು. ಈ ಸಂದರ್ಭದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸಿದ ಪ್ರಮುಖರಿಗೆ ಸನ್ಮಾನಿಸಿ ಗೌರವಿಸಲಾಯಿತು.

ಪುರಸಭೆ ಉಪಾಧ್ಯಕ್ಷೆ ಪುಟ್ಟಲಕ್ಷ್ಮಮ್ಮ, ಸದಸ್ಯರಾದ ಜಯಲಕ್ಷ್ಮಿ ನಂಜುಂಡಸ್ವಾಮಿ, ವಿ.ಜೆ. ನವೀನ್, ಮುಖ್ಯಾಧಿಕಾರಿ ಗಿರೀಶ್, ಸಮಾಜ‌ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಸಿದ್ದೇಗೌಡ, ಕ್ಷೇತ್ರ ಶಿಕ್ಷಣಾಧಿಕಾರಿ ಕೃಷ್ಣಪ್ಪ, ತಾಲೂಕು ಪಂಚಾಯತಿ ಅಧಿಕಾರಿ ಶ್ರೀನಿವಾಸ್ ಮತ್ತಿತರರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಅಧಿವೇಶನ ಮುಗಿದ ಬಳಿಕ ಡಿಕೆಶಿಗೆ ಶುಭಸುದ್ದಿ : ಇಕ್ಬಾಲ್
ಬೆಳಗಾವೀಲೂ ‘ಕೈ’ ಡಿನ್ನರ್‌ ಸಭೆಗೆ ಬಿವೈವಿ ಕಿಡಿ