ಕನ್ನಡಪ್ರಭ ವಾರ್ತೆ ಕುಶಾಲನಗರ
ಸನ್ಮಾನ ಸ್ವೀಕರಿಸಿ ಮಾತನಾಡಿದ ಶರವಣ ಕುಮಾರ್ ಅವರು, ಸಹಕಾರ ಕ್ಷೇತ್ರದಲ್ಲಿ ತಾನು ಮಾಡಿದ ಸೇವೆಯನ್ನು ಗುರುತಿಸಿ ಪ್ರತಿಷ್ಠಿತ ಕನ್ನಡಪ್ರಭ, ಏಷ್ಯಾನೆಟ್ ಸಂಸ್ಥೆಯಿಂದ ಕರ್ನಾಟಕ ಸಹಕಾರ ಶಿರೋಮಣಿ 2025 ಪ್ರಶಸ್ತಿ ನೀಡಿ ಗೌರವಿಸಿರುವುದು ಸಂತಸ ತಂದಿದೆ. ಪ್ರಶಸ್ತಿ ಪ್ರದಾನ ಕಾರ್ಯಕ್ರಮ ಉತ್ತಮವಾಗಿ ಮೂಡಿ ಬಂದಿತು. ಈ ಪ್ರಶಸ್ತಿ ಬರಲು ಕಾರಣರಾದ ನಮ್ಮ ಬ್ಯಾಂಕಿನ ನಿರ್ದೇಶಕರು ಹಾಗೂ ಸಿಬ್ಬಂದಿ ವರ್ಗದವರಿಗೆ ಧನ್ಯವಾದ ಅರ್ಪಿಸುತ್ತೇನೆ ಎಂದರು.
ಇತ್ತೀಚಿನ ದಿನಗಳಲ್ಲಿ ನೇರ ನುಡಿ, ಪ್ರಾಮಾಣಿಕತೆ ಇರುವವರಿಗೆ ಪ್ರಶಸ್ತಿ ಸಿಗುವುದು ಕಷ್ಟ. ಈ ಬಗ್ಗೆ ನಾನು ಎಂದಿಗೂ ತಲೆಕೆಡಿಸಿಕೊಂಡಿಲ್ಲ. ಬದಲಾಗಿ ನಮ್ಮ ಜನ ನನಗೆ ಉತ್ತಮ ಅಧಿಕಾರ ನೀಡಿದ್ದಾರೆ. ಅದರಂತೆ ನಾವು ಊರಿಗಾಗಿ ಕೊಡುಗೆ ನೀಡಿ ಹೋಗಬೇಕು. ಈಗಾಗಲೇ ಎರಡೂ ಸಂಸ್ಥೆಯನ್ನು ದೊಡ್ಡ ಮಟ್ಟದಲ್ಲಿ ಬೆಳೆಸಿದ್ದೇವೆ. ಬಡವರಿಗೆ, ಮಧ್ಯಮ ವರ್ಗದವರಿಗೆ, ವ್ಯಾಪಾರಸ್ಥರಿಗೆ ಸುಲಭವಾಗಿ ಜೀವನವನ್ನು ಕಟ್ಟಿಕೊಳ್ಳಲು ಆರ್ಥಿಕ ಸೌಲಭ್ಯ ಒದಗಿಸುವ ನಿಟ್ಟಿನಲ್ಲಿ ಸಹಕಾರಿ ಕ್ಷೇತ್ರದಲ್ಲಿ ಕೆಲಸ ಮಾಡುತ್ತಿದ್ದೇವೆ ಎಂದರು.ಈ ಸಂದರ್ಭ ಸಾಹಿತಿ ಭಾರಧ್ವಾಜ್, ಬ್ಯಾಂಕಿನ ನಿರ್ದೇಶಕರಾದ ಕೆ.ಎನ್. ದೇವರಾಜ್, ಕನ್ನಡಪ್ರಭ ಮೈಸೂರು ವಿಭಾಗದ ಹಿರಿಯ ಜಾಹೀರಾತು ವ್ಯವಸ್ಥಾಪಕ ಕೃಷ್ಣಪ್ರಸಾದ್, ಕನ್ನಡಪ್ರಭ ಜಿಲ್ಲಾ ವರದಿಗಾರರಾದ ವಿಘ್ನೇಶ್ ಭೂತನಕಾಡು, ತಾಲೂಕು ವರದಿಗಾರರಾದ ಚಂದ್ರಮೋಹನ್, ಶನಿವಾರಸಂತೆ ವರದಿಗಾರರಾದ ಹರೀಶ್ ಕುಮಾರ್ ಹಾಗೂ ಕೈಗಾರಿಕೋದ್ಯಮಿಗಳ ಮತ್ತು ವೃತ್ತಿನಿರತರ ವಿವಿಧೋದ್ದೇಶ ಸಹಕಾರ ಬ್ಯಾಂಕ್ ನ ಮ್ಯಾನೇಜರ್ ಶ್ರೀಜೇಶ್ ಹಾಗೂ ಸಿಬ್ಬಂದಿ ವರ್ಗದವರು ಇದ್ದರು.ಶರವಣ ಕುಮಾರ್ ಅವರ ಪರಿಚಯ
ಕೊಡಗಿನ ಹೆಬ್ಬಾಗಿಲು ಕುಶಾಲನಗರದಲ್ಲಿ ನೆಲೆಸಿರುವ ಟಿ.ಆರ್. ಶರವಣ ಕುಮಾರ್ ಸುಮಾರು 30 ವರ್ಷಗಳ ಕಾಲ ಸಹಕಾರಿ ಕ್ಷೇತ್ರದಲ್ಲಿದ್ದು, ಕುಶಾಲನಗರದ ಸಹಕಾರ ಸಾರಥಿ ಎಂದೇ ಖ್ಯಾತಿ ಪಡೆದಿದ್ದಾರೆ. ಇವರು ಟಿ.ಕೆ. ರಾಜು-ಮಂಗೈಯಾರ್ ಕರೆಸಿ ದಂಪತಿ ಪುತ್ರ. ಪತ್ನಿ- ರೋಹಿಣಿ ಎಸ್, ಮದನ್ ಕುಮಾರ್, ಓಂ ಪ್ರಕಾಶ್ ಇಬ್ಬರು ಪುತ್ರರಿದ್ದಾರೆ.ಕುಶಾಲನಗರದ ನ.122ನೇ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ನಿಯಮಿತ ಹಾಗೂ ನಂ.19722 ಕೈಗಾರಿಕೋದ್ಯಮಿಗಳ ಮತ್ತು ವೃತ್ತಿನಿರತರ ವಿವಿದೋದ್ದೇಶ ಸಹಕಾರ ಸಂಘದ ಅಧ್ಯಕ್ಷರಾಗಿದ್ದಾರೆ. ಕೊಡಗು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಲ್ಲಿ ನಿರ್ದೇಶಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ.ಕುಶಾಲನಗರ ಪಟ್ಟಣದಲ್ಲಿ ತಮ್ಮದೇ ಸ್ವಂತ ಬ್ರ್ಯಾಂಡ್ ಸುಮುಕ್ ಐಸ್ ಕ್ರೀಮ್ ತಯಾರಿಕೆ ಮತ್ತು ಹೋಟೆಲ್ ಉದ್ಯಮವನ್ನು ನಡೆಸುತ್ತಿದ್ದಾರೆ. ಸಹಕಾರ ಕ್ಷೇತ್ರದಲ್ಲಿ 1995ರಲ್ಲಿ ಪಾದರ್ಪಣೆ ಮಾಡಿ ಸಹಕಾರ ಸಂಸ್ಥೆಗಳಲ್ಲಿ ಸುಮಾರು 30 ವರ್ಷಗಳ ಕಾಲ ಸೇವೆ ಮಾಡಿದ್ದಾರೆ. ಕಳಂಕರಹಿತ ಸೇವೆ ಸಲ್ಲಿಸುತ್ತಿದ್ದಾರೆ. 2023ರ ವೇಳೆಗೆ ಸಹಕಾರಿ ಕ್ಷೇತ್ರದಲ್ಲಿ ಸುಮಾರು 25 ವರ್ಷಗಳ ಕಾಲ ಸಾರ್ಥಕ ಸೇವೆ ಸಲ್ಲಿಸಿದ ಹಿನ್ನೆಲೆಯಲ್ಲಿ ಕುಶಾಲನಗರದಲ್ಲಿ ವಿವಿಧ ಸಂಘ ಸಂಸ್ಥೆಗಳಿಂದ ಪೌರ ಸನ್ಮಾನಕ್ಕೆ ಭಾಜನರಾಗಿದ್ದಾರೆ. ಸಹಕಾರ ಕ್ಷೇತ್ರದಲ್ಲಿ ತಾನು ಮಾಡಿದ ಸೇವೆಯನ್ನು ಗುರುತಿಸಿ ಪ್ರತಿಷ್ಠಿತ ಕನ್ನಡಪ್ರಭ, ಏಷ್ಯಾನೆಟ್ ಸುವರ್ಣನ್ಯೂಸ್ ಸಂಸ್ಥೆಯಿಂದ ಕರ್ನಾಟಕ ಸಹಕಾರ ಶಿರೋಮಣಿ 2025 ಪ್ರಶಸ್ತಿ ನೀಡಿ ಗೌರವಿಸಿರುವುದು ಸಂತಸ ತಂದಿದೆ. ನಮ್ಮ ಎರಡೂ ಸಂಸ್ಥೆಗಳು ಕೂಡ ಕೊಡಗಿನಲ್ಲಿ ಮುಂಚೂಣಿಯಲ್ಲಿ ಕೆಲಸ ಮಾಡುತ್ತಿದೆ. ತನಗೆ ಈ ಪ್ರಶಸ್ತಿ ಬರಲು ಎಲ್ಲರ ಸಹಕಾರವಿದೆ. ನಮ್ಮ ಸಂಘದ ನಿರ್ದೇಶಕರು, ಸಿಬ್ಬಂದಿ ವರ್ಗದವರಿಗೆ ಧನ್ಯವಾದವನ್ನು ಅರ್ಪಿಸುತ್ತೇನೆ.
-ಟಿ.ಆರ್. ಶರವಣಕುಮಾರ್, ಕನ್ನಡಪ್ರಭ-ಸುವರ್ಣನ್ಯೂಸ್ ಕರ್ನಾಟಕ ಸಹಕಾರ ಶಿರೋಮಣಿ 2025 ಪ್ರಶಸ್ತಿ ವಿಜೇತರು