ಕನ್ನಡಪ್ರಭ ವಾರ್ತೆ ಕುಶಾಲನಗರಕುಶಾಲನಗರ ಶ್ರೀ ಗಣಪತಿ ರಥೋತ್ಸವ ನ.8ರಂದು ನಡೆಯಲಿದೆ. ಗಣಪತಿ ದೇವಸ್ಥಾನ ವಾರ್ಷಿಕೋತ್ಸವ ಅಂಗವಾಗಿ ಕಾರ್ತಿಕ ಮಾಸ ಬಹುಳ ಚತುರ್ಥಿಯಂದು ಬೆಳಗ್ಗೆ ದೇವರಿಗೆ ಪಂಚಾಮೃತ ಅಭಿಷೇಕ, ಪುಷ್ಪಾಲಂಕಾರ, ದೇವರನ್ನು ರಥದಲ್ಲಿ ಕೂರಿಸಿ ಪೂಜೆ, ಮಹಾಮಂಗಳಾರತಿ ನೆರವೇರಿಸಲಾಗುವುದು. ನಂತರ ಮಧ್ಯಾಹ್ನ 12 ಗಂಟೆಗೆ ರಥೋತ್ಸವ ಕಾರ್ಯಕ್ರಮ ನಡೆಯಲಿದೆ ಎಂದು ಕುಶಾಲನಗರ ಶ್ರೀ ಗಣಪತಿ ದೇವಸ್ಥಾನ ಸೇವಾ ಸಮಿತಿ ಅಧ್ಯಕ್ಷ ಎಂ.ಕೆ. ದಿನೇಶ್ ತಿಳಿಸಿದ್ದಾರೆ.
ಇದೇ ಸಂದರ್ಭ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಆಶ್ರಯದಲ್ಲಿ ರಥೋತ್ಸವದ ಸಂದರ್ಭ ರಥ ಬೀದಿಯಲ್ಲಿ ಕುಣಿತ ಭಜನಾ ತಂಡದಿಂದ ಕಾರ್ಯಕ್ರಮ ನಡೆಯಲಿದೆ ಎಂದು ತಿಳಿಸಿದರು.ದೇವಾಲಯ ವಾರ್ಷಿಕೋತ್ಸವ ಅಂಗವಾಗಿ ಶುಕ್ರವಾರ ಬೆಳಗ್ಗೆ ಧ್ವಜಾರೋಹಣ, ಪಂಚಾಮೃತ ಅಭಿಷೇಕ, ಮಹಾಮಂಗಳಾರತಿ, ನಂತರ ಪ್ರಸಾದ ವಿನಿಯೋಗ ನಡೆಯಿತು. ಇದೇ ಸಂದರ್ಭ ಕುಶಾಲನಗರ ದೇವಾಲಯಗಳ ಒಕ್ಕೂಟದ ಪ್ರತಿನಿಧಿಗಳು ಫಲ ತಾಂಬೂಲಗಳೊಂದಿಗೆ ಆಗಮಿಸಿ, ಸಾಮೂಹಿಕ ಪೂಜೆ ಸಲ್ಲಿಸಿದರು.
ಈ ಸಂದರ್ಭ ದೇವಾಲಯ ಕಾರ್ಯಕಾರಿ ಮಂಡಳಿ ಗೌರವ ಅಧ್ಯಕ್ಷ ವಿ.ಎನ್. ವಸಂತಕುಮಾರ್, ಕಾರ್ಯದರ್ಶಿ ಬಿ.ಕೆ. ಮುತ್ತಣ್ಣ, ಖಜಾಂಚಿ ಎಸ್.ಕೆ. ಸತೀಶ್, ಸಹ ಕಾರ್ಯದರ್ಶಿ ಕೆ.ಎಂ. ದೇವರಾಜು, ನಿರ್ದೇಶಕ ಎಚ್.ಎಂ. ಚಂದ್ರು, ಪ್ರಧಾನ ಅರ್ಚಕರಾದ ಆರ್.ಕೆ. ನಾಗೇಂದ್ರ ಬಾಬು, ದೇವಾಲಯಗಳ ಒಕ್ಕೂಟದ ಪ್ರತಿನಿಧಿಗಳು ಮತ್ತಿತರರು ಇದ್ದರು.