ನೇಣು ಬಿಗಿದು ಆತ್ಮಹತ್ಯೆ

KannadaprabhaNewsNetwork |  
Published : Jul 16, 2026, 03:15 AM IST
ಆತ್ಮಹತ್ಯೆ ಮಾಡಿಕೊಂಡ ಅಪರಿಚಿತ ವ್ಯಕ್ತಿ | Kannada Prabha

ಸಾರಾಂಶ

ಕುಶಾಲನಗರ ಟೌನ್ ಪೊಲೀಸ್ ಠಾಣೆ ಹಿಂಭಾಗ ಸೋಮೇಶ್ವರ ಬಡಾವಣೆ ರಸ್ತೆ ಬದಿ ಕಟ್ಟಡದಲ್ಲಿ ಅಪರಿಚಿತ ವ್ಯಕ್ತಿಯೊಬ್ಬ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಗಳವಾರ ರಾತ್ರಿ ನಡೆದಿದೆ.

ಕುಶಾಲನಗರ: ಕುಶಾಲನಗರ ಟೌನ್ ಪೊಲೀಸ್ ಠಾಣೆ ಹಿಂಭಾಗ ಸೋಮೇಶ್ವರ ಬಡಾವಣೆ ರಸ್ತೆ ಬದಿ ಕಟ್ಟಡದಲ್ಲಿ ಅಪರಿಚಿತ ವ್ಯಕ್ತಿಯೊಬ್ಬ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಗಳವಾರ ರಾತ್ರಿ ನಡೆದಿದೆ. ಕೇಬಲ್ ವೈರ್‌ ಸುತ್ತಿಕೊಂಡು ಕಟ್ಟಡದ ಮೇಲಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದು ಸ್ಥಳಕ್ಕೆ ಕುಶಾಲನಗರ ಪಟ್ಟಣ ಪೊಲೀಸರು ಭೇಟಿ ನೀಡಿ ಮಹಜರು ನಡೆಸಿ ಕ್ರಮ ಕೈಗೊಂಡಿದ್ದಾರೆ. ವಾರಸುದಾರರು ಇದ್ದಲ್ಲಿ ಕುಶಾಲನಗರ ಪಟ್ಟಣ ಪೊಲೀಸ್ ಠಾಣೆಗೆ ಸಂಪರ್ಕಿಸುವಂತೆ ಕೋರಿದ್ದಾರೆ.

--------------------------------

ಇಂದು ವಿದ್ಯುತ್ ಪೂರೈಕೆ ವ್ಯತ್ಯಯ

ಮಡಿಕೇರಿ: ಮೂರ್ನಾಡು 33/11 ಕೆ.ವಿ ವಿದ್ಯುತ್ ವಿತರಣಾ ಉಪಕೇಂದ್ರದ ಕೇಂದ್ರದಿಂದ ಹೊರಹೊಮ್ಮುವ ಎಫ್2 ನಾಪೋಕ್ಲು, ಎಫ್5 ಹೊದ್ದೂರು ಹಾಗೂ ಎಫ್6 ತಲಕಾವೇರಿ ಫೀಡರ್‍ನಲ್ಲಿ ಗುರುವಾರ ಬೆಳಗ್ಗೆ 9.30 ಯಿಂದ ಸಂಜೆ 4.30 ಗಂಟೆಯವರೆಗೆ ಕೊಡಗು ಜಾಲ ಬಲವರ್ಧನೆ ಕಾಮಗಾರಿ ನಡೆಯಲಿದೆ. ಈ ಮಾರ್ಗದಿಂದ ವಿದ್ಯುತ್ ಸರಬರಾಜಾಗುವ ಹೊದ್ದೂರು, ಕಬಡಗೇರಿ, ಕೊಳಕೇರಿ, ಕುಂಜಿಲ, ಎಮ್ಮೆಮಾಡು, ನೆಲಜಿ, ಬಲ್ಲಮಾವಟಿ, ಪೆರೂರು, ನಾಪೋಕ್ಲು ಟೌನ್, ಕೊಟ್ಟಮುಡಿ, ಪಾಲೂರು, ಚೆರಿಯಪರಂಬು, ಹಳೆತಾಲೂಕು ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ ಎಂದು ಚಾವಿಸನಿನಿ ಕಾರ್ಯ ಮತ್ತು ಪಾಲನೆ ವಿಭಾಗದ ಕಾರ್ಯನಿರ್ವಾಹಕ ಎಂಜಿನಿಯರ್ ರಾಮಚಂದ್ರ ತಿಳಿಸಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಯೂತ್ ಹಾಸ್ಟೆಲ್ಸ್ ಅಸೋಸಿಯೇಷನ್ ಆಫ್ ಇಂಡಿಯಾ ಬೆಳುವಾಯಿ ಘಟಕಕ್ಕೆ ಮುರಳಿಧರ್ ಎಸ್. ಅಧ್ಯಕ್ಷರಾಗಿ ಆಯ್ಕೆ
ಪಂಚವರ್ಣಕ್ಕೆ ಹಸಿರು ರಥ ಹಸ್ತಾಂತರ