ಕನ್ನಡಪ್ರಭ ವಾರ್ತೆ ಕನಕಪುರ
ಕರ್ನಾಟಕ ರಕ್ಷಣಾ ವೇದಿಕೆ ವತಿಯಿಂದ ನಗರದ ಎಂ.ಜಿ. ರಸ್ತೆಯಲ್ಲಿರುವ ಕಚೇರಿಯಲ್ಲಿ ರಾಷ್ಟ್ರಕವಿ ಕುವೆಂಪು ಅವರ 120ನೇ ಜನ್ಮದಿನಾಚರಣೆಯಲ್ಲಿ ಕುವೆಂಪು ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಮಾತನಾಡಿದ ಅವರು, ಕುವೆಂಪು ಅವರ ವಿಶ್ವಮಾನವ ಸಂದೇಶ ಹೆಚ್ಚು ಪ್ರಸ್ತುತವಾಗಿದೆ. ಕನ್ನಡ ಸಾಹಿತ್ಯ- ಸಂಸ್ಕೃತಿಯನ್ನು ಜಾಗತಿಕ ಮಟ್ಟದಲ್ಲಿ ವಿಜೃಂಭಿಸುವಂತೆ ಮಾಡಲು ಕುವೆಂಪು ಅವರ ಕೊಡುಗೆ ಅಪಾರವಾದುದು ಎಂದರು.ನಗರದ ರೂರಲ್ ಕಾಲೇಜಿನ ಉಪ ಪ್ರಾಂಶುಪಾಲ ಪ್ರೊ. ದೇವರಾಜು ಮಾತನಾಡಿ, ರಾಷ್ಟ್ರಕವಿ ಕುವೆಂಪು ಅವರು ಶ್ರೀ ರಾಮಾಯಣ ದರ್ಶನಂ ಮಹಾಕಾವ್ಯ ಸೇರಿದಂತೆ ಹಲವಾರು ಸಾಹಿತ್ಯ ಪ್ರಕಾರಗಳನ್ನು ರಚನೆ ಮಾಡಿ ಶ್ರೀ ಸಾಮಾನ್ಯನಿಗೂ ಮಾನವೀಯ ಮೌಲ್ಯಗಳನ್ನು ತಿಳಿಸಿ ಕೊಡುವ ಮೂಲಕ ತಮ್ಮ ಸಾಹಿತ್ಯ ಪ್ರಕಾರಗಳಲ್ಲಿ ಸಮಾನತೆಯನ್ನು ಸಾರಿದ ಮಹಾನ್ ಚೇತನವಾಗಿ ವಿಶ್ವಮಾನವರಾಗಿದ್ದು, ಇಂದಿನ ಯುವ ಪೀಳಿಗೆ ಇವರ ಸಾಹಿತ್ಯವನ್ನು ಓದುವ ಆಸಕ್ತಿಯನ್ನು ಮೈಗೂಡಿಸಿಕೊಳ್ಳುವಂತೆ ಕರೆ ನೀಡಿದರು.
ಕರವೇ ಜಿಲ್ಲಾ ಉಪಾಧ್ಯಕ್ಷ ಪುಟ್ಟಸ್ವಾಮಿ, ತಾಲೂಕು ಅಧ್ಯಕ್ಷ ಜಯರಾಮೇಗೌಡ, ಪದಾಧಿಕಾರಿಗಳಾದ ಶಿವಶಂಕರ್, ಜಗದೀಶ್, ಶಿವರಾಜ್, ಶಂಕರ್ ಗೌಡ, ಪರಮೇಶ್, ತಿಮ್ಮರಾಜು, ಬಾಲರಾಜ್, ಮಹೇಶ್ ಬಾಬು, ಜಯರಾಂ, ಮೋಹನ್, ಧನಶೇಖರ್, ರಾಮಚಂದ್ರ, ಕೇಶವಮೂರ್ತಿ, ಹಿಂದೂ ಜಾಗರಣ ವೇದಿಕೆಯ ಸಂಚಾಲಕ ವೆಂಕಟೇಶ್, ವಕೀಲ ಮಹೇಶ್ ಸೇರಿದಂತೆ ಹಲವರು ಈ ವೇಳೆ ಉಪಸ್ಥಿತರಿದ್ದರು.