ಕನ್ನಡಪ್ರಭ ವಾರ್ತೆ ದೊಡ್ಡಬಳ್ಳಾಪುರ
ಅವರು ಇಲ್ಲಿನ ಲಾವಣ್ಯ ಸಂಯುಕ್ತ ಪದವಿಪೂರ್ವ ಕಾಲೇಜಿನಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ಮತ್ತು ದೊಡ್ಡಬಳ್ಳಾಪುರ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ನಡೆದ ವಿಶ್ವ ಮಾನವ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.
ಕುವೆಂಪು ಅವರ ಸಾಹಿತ್ಯದ ಮೂಲ ಆಶಯ ‘ವಿಶ್ವಮಾನವ’ ಸಂದೇಶ ಆಗಿದೆ. ವೈಚಾರಿಕ ಪ್ರಜ್ಞೆ, ಪ್ರಕೃತಿ ಪ್ರೀತಿ, ಆಧುನಿಕ ಚಿಂತನೆ ಮತ್ತು ಸಾಮಾಜಿಕ ಸಮಾನತೆ ವಿಚಾರಗಳನ್ನು ತಮ್ಮ ಸಾಹಿತ್ಯದ ಮೂಲಕ ನೀಡಿದವರು. ಸಮಾಜದ ಕಟ್ಟಕಡೆಯ ಜನ ಸಾಮಾನ್ಯನಿಗೂ ನ್ಯಾಯ ಒದಗಿಸುವ ಆಶಯ ಕುವೆಂಪು ಸಾಹಿತ್ಯದಲ್ಲಿದೆ ಎಂದರು.ನಿವೃತ್ತ ಅಧ್ಯಾಪಕ ಶರಣಯ್ಯ ಹಿರೇಮಠ ಮಾತನಾಡಿ, ಕುವೆಂಪು ಅವರ ವಿಶ್ವಮಾನವ ಸಂದೇಶದ ಮೂಲ ತತ್ತ್ವಗಳು ಮನುಜಮತ, ವಿಶ್ವಪಥ, ಸರ್ವೋದಯ, ಸಮನ್ವಯ ಮತ್ತು ಪೂರ್ಣದೃಷ್ಟಿ. ಇವುಗಳು ಜಗತ್ತಿನ ಮನುಷ್ಯರನ್ನು ಜಾತಿ, ಮತ, ಭಾಷೆ, ದೇಶಗಳ ಗಡಿಗಳನ್ನು ಮೀರಿ ವಿಶ್ವಮಾನವರಾಗಿ ಒಂದಾಗಿ ಕಾಣುವ ಮತ್ತು ಸಮಷ್ಟಿ ಕಲ್ಯಾಣದ ದೃಷ್ಟಿಯನ್ನು ಪ್ರತಿಪಾದಿಸುತ್ತವೆ ಎಂದರು.
ಲಾವಣ್ಯ ವಿದ್ಯಾಸಂಸ್ಥೆಯ ಕಾರ್ಯದರ್ಶಿ ಎಚ್.ವಿಶ್ವಾಸ್ ಗೌಡ ಮಾತನಾಡಿ, ಕನ್ನಡ ಭಾಷೆ, ನಾಡು, ಸಂಸ್ಕೃತಿಗೆ ಕುವೆಂಪು ಅವರು ಮಹತ್ವದ ಕೊಡುಗೆ ನೀಡಿದ್ದಾರೆ. ಕನ್ನಡಿಗರಲ್ಲಿ ಕನ್ನಡ ಪ್ರಜ್ಞೆಯನ್ನು ಜಾಗೃತಿಗೊಳಿಸುವ ಮೂಲಕ ಕನ್ನಡದ ಹಿರಿಮೆಯನ್ನು ಎತ್ತಿ ಹಿಡಿದು, ಕನ್ನಡಿಗರಲ್ಲಿ ಆತ್ಮವಿಶ್ವಾಸ ತುಂಬಲು ಶ್ರಮಿಸಿದ್ದಾರೆ ಎಂದರು.ಕಾಲೇಜಿನ ಪ್ರಾಂಶುಪಾಲ ಎಂ.ಸಿ.ಮಂಜುನಾಥ್, ಬಿ.ಎಡ್ ಕಾಲೇಜಿನ ಪ್ರಾಂಶುಪಾಲ ಕೃಷ್ಣಮೂರ್ತಿ, ರೈತ ಮುಖಂಡ ವಿನೋದ್ ಕುಮಾರ್, ಜಿಲ್ಲಾ ಕಸಾಪ ಕೋಶಾಧ್ಯಕ್ಷ ಡಾ.ಮುನಿರಾಜು, ದೇವರಾಜು, ಸಂಪತ್ ಕುಮಾರ್, ಸಿ.ಪಿ.ಎನ್.ರೆಡ್ಡಿ, ಭಾರತ್ ಸ್ಕೌಟ್ಸ್ ಮತ್ತು ಗೈಡ್ ಜಿಲ್ಲಾ ಸಹಾಯಕ ಆಯುಕ್ತ ವೆಂಕಟರಾಜು, ಕನ್ನಡ ಜಾಗೃತ ಸಮಿತಿ ಸದಸ್ಯರಾದ ಕೆ.ಮಹಾಲಿಂಗಯ್ಯ, ನಾಗರತ್ನಮ್ಮ, ಮಜರಾಹೊಸಹಳ್ಳಿ ಕೇಶವಮೂರ್ತಿ, ನಿವೃತ್ತ ಮುಖ್ಯಶಿಕ್ಷಕ ಕೆ.ವಿ.ವೆಂಕಟೇಶರೆಡ್ಡಿ, ತಾ.ಕಸಾಪ ಅಧ್ಯಕ್ಷ ಪಿ.ಗೋವಿಂದರಾಜು, ಮಾಜಿ ಅಧ್ಯಕ್ಷ ಡಿ.ಶ್ರೀಕಾಂತ್, ಗೌರವ ಕಾರ್ಯದರ್ಶಿ ಎ.ಜಯರಾಮ್, ಕಸಬಾ ಹೋಬಳಿ ಘಟಕದ ಕೋಶಾಧ್ಯಕ್ಷ ಜಿ.ಸುರೇಶ್, ಕಲಾವಿದರುಗಳಾದ ದರ್ಗಾಜೋಗಿಹಳ್ಳಿ ಮಲ್ಲೇಶ್, ಸೆಲ್ವಂರಾಜು, ಸಫೀರ್ ಮುಂತಾದವರು ಭಾಗವಹಿಸಿದ್ದರು.