ಕನ್ನಡಪ್ರಭ ವಾರ್ತೆ ಮಂಡ್ಯ
ನಗರದ ರೈತ ಸಭಾಂಗಣ ಆವರಣದಲ್ಲಿರುವ ರಾಷ್ಟ್ರಕವಿ ಕುವೆಂಪು ಪ್ರತಿಮೆ ಬಳಿ ಅಸೋಸಿಯೇಷನ್ ಆಫ್ ಅಲಯನ್ಸ್ ಸಂಸ್ಥೆ ಇಂಟರ್ ನ್ಯಾಷಿನಲ್ ಜಿಲ್ಲೆ ಮಂಡ್ಯ, ನಂಜಮ್ಮ ಮೋಟೆಗೌಡ ಚಾರಿಟಬಲ್ ಟ್ರಸ್ಟ್ ಕೊಪ್ಪ, ಪ್ರತಿಭಾಂಜಲಿ ಸುಗಮ ಸಂಗೀತ ಅಕಾಡೆಮಿ ಆಯೋಜಿಸಿದ್ದ ರಾಷ್ಟ್ರಕವಿ ಕುವೆಂಪು ಜನ್ಮದಿನ ಹಾಗೂ ವಿಶ್ವ ಮಾನವ ದಿನಾಚರಣೆ ಪ್ರಯುಕ್ತ ವಿಶ್ವಮಾನವ ಪ್ರಶಸ್ತಿ ಪ್ರದಾನ ಹಾಗೂ ಉಪನ್ಯಾಸ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.
ಕನ್ನಡ ಸಾಹಿತ್ಯ ಕ್ಷೇತ್ರಕ್ಕೆ ಮೊದಲ ಜ್ಞಾನಪೀಠ ಪ್ರಶಸ್ತಿ, ಮೊದಲ ಪಂಪ ಪ್ರಶಸ್ತಿ, ಮೊಟ್ಟ ಮೊದಲ ಬಾರಿಗೆ ಕರ್ನಾಟಕ ರತ್ನ ಪುರಸ್ಕಾರ ಪಡೆದ ಕುವೆಂಪು ಭಾರತ ಸರ್ಕಾರದಿಂದ ಪದ್ಮವಿಭೂಷಣ, ಪದ್ಮಭೂಷಣ, ಗೌರವ ಡಾಕ್ಟರೇಟ್, 2ನೇ ರಾಷ್ಟ್ರಕವಿ ಬಿರುದುಗಳನ್ನು ತಂದುಕೊಟ್ಟವರಾಗಿದ್ದಾರೆ ಎಂದು ಸ್ಮರಿಸಿದರು.ಸಾಹಿತ್ಯದ ಎಲ್ಲಾ ಪ್ರಕಾರಗಳಲ್ಲಿಯೂ ಹೆಚ್ಚು ಕಡಿಮೆ ಒಂದೇ ಬಗೆಯಾದ ಯಶಸ್ಸನ್ನು ಗಳಿಸಿದ ಲೇಖಕರು ಯಾವುದೇ ಭಾಷೆಯಲ್ಲಾದರೂ ಹೆಚ್ಚಾಗಿ ಸಿಗುವುದಿಲ್ಲ. ಇಂತಹ ಅಪರೂಪದ ಕವಿ ಕುವೆಂಪು, ಸಾರಸತ್ವ ಕ್ಷೇತ್ರವನ್ನು ಮತ್ತಷ್ಟು ಶ್ರೀಮಂತಗೊಳಿಸಿದ ಕೀರ್ತಿ, ಶ್ರೇಯಸ್ಸು ಇವರಿಗೆ ಲಭ್ಯವಾಗುತ್ತಿದೆ ಎಂದರು.
ಶ್ರೀರಾಮಾಯಣ ದರ್ಶನಂ ಮಹಾ ಕೃತಿಯಲ್ಲಿ ಈ ಕಾಲಘಟ್ಟದ ಸನ್ನಿವೇಶಗಳನ್ನು ಕಟ್ಟಿಕೊಟ್ಟು ಹೊಸ ತಲೆಮಾರಿಗೂ ಆಲೋಚನೆ ಮಾಡುವಂತೆ ಪ್ರೇರೇಪಿಸಿದ್ದಾರೆ. ಕಾದಂಬರಿಗಳ ಮೂಲಕ ಹೊಸತನ, ಪ್ರಕೃತಿ, ಜನಜೀವನ, ಸಮಸ್ಯೆಗಳು, ಸವಾಲುಗಳಿಗೆ ಉತ್ತರಗಳನ್ನು ಬಿತ್ತರಿಸಿದ್ದಾರೆ ಎಂದರು.
ಇದೇ ವೇಳೆ ನಾಲ್ವಡಿ ಕೃಷ್ಣರಾಜ ಒಡೆಯರ್ ಸಾಧನೆ ಕುರಿತು ಗೀತೆ ಬರೆದ ಸಾಹಿತಿ ಹನಸೋಗೆ ಸೋಮಶೇಖರ್ ಅವರಿಗೆ 2024ರ ವಿಶ್ವ ಮಾನವ ಪ್ರಶಸ್ತಿ ಪ್ರದಾನ ಮಾಡಲಾಯಿತು. ಗಾಯಕರು ಕುವೆಂಪು ವಿರಚಿತ ಗೀತೆಗಳನ್ನು ಹಾಡಿದರು.