ಕನ್ನಡಪ್ರಭ ವಾರ್ತೆ ಮದ್ದೂರು
ಪಟ್ಟಣದ ಶಿವಶಕ್ತಿ ಎಂಟರ್ ಪ್ರೈಸಸ್ ಬಳಿ ಆಯೋಜಿಸಿದ್ದ ರಾಷ್ಟ್ರಕವಿ ಕುವೆಂಪು ಜನ್ಮದಿನ ಕಾರ್ಯಕ್ರಮದಲ್ಲಿ ಕುವೆಂಪು ಭಾವಚಿತ್ರಕ್ಕೆ ಪುಷ್ಪನಮನಸಲ್ಲಿಸಿ ಮಾತನಾಡಿ, ಜ್ಞಾನಪೀಠ ಪ್ರಶಸ್ತಿ, ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿಗಳನ್ನು ಪ್ರಥಮವಾಗಿ ಕನ್ನಡ ನಾಡಿಗೆ ತಂದುಕೊಟ್ಟ ಕೀರ್ತಿ ಕುವೆಂಪು ಅವರಿಗೆ ಸಲ್ಲುತ್ತದೆ ಎಂದರು.
ನಾಡಿನ ಕಲೆ, ಸಂಸ್ಕೃತಿ, ಇತಿಹಾಸ ಸಾರುವ ಜಯ ಭಾರತ ಜನನಿಯ ತನುಜಾತೆ ನಾಡಗೀತೆ ಮತ್ತು ವಿಶ್ವಕ್ಕೆ ಅನ್ನ ಹಾಕುವ ನೇಗಿಲ ಹಿಡಿದು ಹೊಲದೊಳು ಹಾಡುತ ಉಳುವ ಯೋಗಿಯ ನೋಡಲ್ಲಿ ಗೀತೆಗಳು ಎಂದೆಂದಿಗೂ ಅಮರ. ಪ್ರತಿ ಶಾಲಾ ಕಾಲೇಜುಗಳಲ್ಲಿ ಮತ್ತು ಸರ್ಕಾರಿ ಕಾರ್ಯಕ್ರಮಗಳಲ್ಲಿ ಗೀತೆಗಳನ್ನು ಹಾಡಿ ಪ್ರಸ್ತುತಪಡಿಸುವ ನಿಯಮ ಜಾರಿಯಲ್ಲಿದೆ ಎಂದು ತಿಳಿಸಿದರು.ವೈಚಾರಿಕತೆ, ದುಂದು ವೆಚ್ಚ ಮತ್ತು ವರದಕ್ಷಿಣೆ ಪದ್ಧತಿಗಳಿಗೆ ಕಡಿವಾಣ ಹಾಕಿ ಮಂತ್ರ ಮಾಂಗಲ್ಯ ಜಾರಿಗೆ ತಂದರು. ಪ್ರಾಯೋಗಿಕವಾಗಿ ತಮ್ಮ ಮಗ ಪೂರ್ಣಚಂದ್ರ ತೇಜಸ್ವಿ ಅವರ ಮದುವೆ ಮುಖಾಂತರ ಸಾಕ್ಷಿಯಾದರು. ಏನಾದರೂ ಆಗು ಮೊದಲು ಮಾನವನಾಗು ಎಂಬ ಎಂಬ ಸಂದೇಶವನ್ನು ಸಾಹಿತ್ಯದ ಮೂಲಕ ಸಾರಿದರು ಎಂದು ಹೇಳಿದರು.