ಕನ್ನಡಪ್ರಭ ವಾರ್ತೆ ಸೋಮವಾರಪೇಟೆ
ಕುವೆಂಪು ಅವರು ತಮ್ಮ ಜೀವನದುದ್ದಕ್ಕೂ ಪರಿಸರ, ಪ್ರಾಣಿ,ಪಕ್ಷಿ, ಗಿಡ, ಮರಗಳನ್ನು ಒಡಗೂಡಿದ ಪ್ರಕೃತಿಯನ್ನು ಆರಾಧಿಸಿದರು. ಪರಿಸರ ಪ್ರಕೃತಿ ಸಂರಕ್ಷಣೆಯ ಮಹತ್ವ ಸಾರಿದರು. ಆ ಮೂಲಕ ಗುಡಿ ಗೋಪುರ ಮಸೀದಿ ಮಂದಿರಗಳನ್ನು ಬಿಟ್ಟು ಹೊರ ಬನ್ನಿ ಎಂದು ಸಾರಿದ ಮಹಾಮಹಿಮ ಎಂದರು.
ಯಡೂರು ಸರ್ಕಾರಿ ಪ್ರಾಥಮಿಕ ಶಾಲೆ ಮುಖ್ಯ ಶಿಕ್ಷಕಿ ಎಲ್.ಎಂ. ಪ್ರೇಮ ಮಾತನಾಡಿ, ಜಾತಿ, ಮತ, ಪಂಥಗಳ ಬೇಲಿಯನ್ನು ದಾಟಿ ನಿಜವಾದ ಮನುಷ್ಯರಾಗುವ ಜೀವನದ ಪಾಠವನ್ನು ಕಲಿಸಿದ ಯುಗದ ಕವಿ ಸಾಹಿತ್ಯ ಸೇವೆಯ ತಪಸ್ವಿ ಕುವೆಂಪು ಕರುನಾಡಿನ ಮಹಾ ಜ್ಯೋತಿಯಾಗಿ ಕನ್ನಡ ಸಾಹಿತ್ಯ ಕ್ಷೇತ್ರಕ್ಕೆ ಹೊಸ ಬೆಳಕು ಮೂಡಿಸಿದವರು. ಬರೆದಂತೆ ಬದುಕಿದ ಜ್ಞಾನದ ಶಿಖರವೇರಿದ ಕನ್ನಡ ನೆಲದ ಮಹಾ ತಪಸ್ವಿ ಡಾ. ಕುವೆಂಪು ದೇಶಕ್ಕೆ ಹೆಮ್ಮೆ ಎಂದರು.ಬ್ರಿಟಿಷ್ ಕವಿ ಜೇಮ್ಸ್ ಕಸಿನ್ಸ್ ಎಂಬವರು ಅಂದು ಕುವೆಂಪು ಅವರ ಸಾಹಿತ್ಯ ಸೇವೆಯನ್ನು ಶ್ಲಾಘಿಸದೇ ಇದ್ದಿದ್ದರೆ ಇವತ್ತು ಕನ್ನಡ ನಾಡು ಇಂತಹ ಶ್ರೇಷ್ಠ ಕವಿಯನ್ನು ಕಾಣುತ್ತಿರಲಿಲ್ಲ ಎಂದು ಹೆಮ್ಮೆ ವ್ಯಕ್ತ ಪಡಿಸಿದರು. ಡಾ. ಅಂಬೇಡ್ಕರ್ ವಸತಿ ಶಾಲೆ ಪ್ರಿನ್ಸಿಪಾಲ್ ಚಂದ್ರಶೇಖರ ರೆಡ್ಡಿ ಅಧ್ಯಕ್ಷತೆ ವಹಿಸಿದ್ದರು. ಕೊಡಗು ಜಿಲ್ಲಾ ಶರಣ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಕೆ.ಎಸ್. ಮೂರ್ತಿ, ಶಿಕ್ಷಕರಾದ ಶಭಾನಾ, ಕೀರ್ತಿ, ಪುಷ್ಪಲತಾ, ಪೂಜಾ, ಅರ್ಪಿತಾ, ರಮ್ಯಾ ಇದ್ದರು.ಕುವೆಂಪು ರಚಿತ ಹಾಡುಗಳಿಗೆ ಶಾಲಾ ವಿದ್ಯಾರ್ಥಿನಿಯರಿಂದ ವೈವಿಧ್ಯಮಯ ನೃತ್ಯ ಕಾರ್ಯಕ್ರಮಗಳು ನಡೆದವು. ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ರಂಗೋಲಿ ಸ್ಪರ್ಧೆಯಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆಯಾದ ಶಾಲಾ ವಿದ್ಯಾರ್ಥಿನಿ ಪುಣ್ಯ ಆಚಾರ್ ಅವರನ್ನು ಸನ್ಮಾನಿಸಲಾಯಿತು.