ಕುವೆಂಪುರವರ ವಿಶ್ವಮಾನವ ಸಂದೇಶ ಇಂದಿಗೂ ಪ್ರಸ್ತುತ

KannadaprabhaNewsNetwork |  
Published : Jan 01, 2026, 03:00 AM IST
ಸುದ್ದಿ ಚಿತ್ರ ೧ ಶಿಡ್ಲಘಟ್ಟ ನಗರದಲ್ಲಿ ಹಮ್ಮಿಕೊಂಡಿದ್ದ ವಿಶ್ವ ಮಾನವ ದಿನಾಚರಣೆಯಲ್ಲಿ ತಹಶೀಲ್ದಾರ್ ಗಗನಸಿಂಧು ಪ್ರತಿಭಾವಂತ ಮಕ್ಕಳನ್ನು ಸನ್ಮಾನಿಸಿದರು | Kannada Prabha

ಸಾರಾಂಶ

ಅನುಭವದ ಆಳಕ್ಕೆ ಇಳಿದು ಕವಿಯಾಗಿ ಜಗತ್ತಿಗೆ ವಿಚಾರಧಾರೆಗಳನ್ನು ಹಂಚುವ ಮೂಲಕ ವಿಶ್ವಕ್ಕೆ ಉತ್ತಮ ಸಂದೇಶಗಳನ್ನು ನೀಡಿ ಮನುಕುಲದಲ್ಲಿ ಅಜರಾಮರವಾಗಿ ಉಳಿದರು ಕುವೆಂಪು. ವಿಶ್ವಮಾನವನಾಗಿ ಎಲ್ಲರ ಮನೆ ಮನದಲ್ಲಿ ಉಳಿದುಕೊಂಡಿರುವ ಇಂತಹ ಮಹಾನ್ ಸಂತನನ್ನು ನೆನೆಯುವುದೇ ನಮ್ಮೆಲ್ಲರ ಕರ್ತವ್ಯ.

ಕನ್ನಡಪ್ರಭ ವಾರ್ತೆ ಶಿಡ್ಲಘಟ್ಟ

ಜಗದ ಕವಿ, ಯುಗದ ಕವಿ ಎಂದೇ ಪ್ರಖ್ಯಾತರಾದ ರಾಷ್ಟ್ರಕವಿ ಕುವೆಂಪು ಅವರ ವಿಶ್ವಮಾನವ ಸಂದೇಶಗಳು ಇಂದಿಗೂ ಪ್ರಸ್ತುತ, ಅವುಗಳನ್ನು ಪ್ರತಿಯೊಬ್ಬ ವಿದ್ಯಾರ್ಥಿಗಳು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ತಹಸೀಲ್ದಾರ್ ಗಗನ ಸಿಂಧು ತಿಳಿಸಿದರು.

ನಗರದ ತಾಲೂಕು ಕಚೇರಿ ಸಭಾಂಗಣದಲ್ಲಿ ರಾಷ್ಟ್ರೀಯ ಹಬ್ಬಗಳ ಆಚರಣೆ ವತಿಯಿಂದ ಕುವೆಂಪುರವರ 121ನೇ ಜನ್ಮದಿನ ಹಾಗೂ ವಿಶ್ವಮಾನವ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.ವಿಶ್ವಕ್ಕೇ ಸಂದೇಶ:

ಅನುಭವದ ಆಳಕ್ಕೆ ಇಳಿದು ಕವಿಯಾಗಿ ಜಗತ್ತಿಗೆ ವಿಚಾರಧಾರೆಗಳನ್ನು ಹಂಚುವ ಮೂಲಕ ವಿಶ್ವಕ್ಕೆ ಉತ್ತಮ ಸಂದೇಶಗಳನ್ನು ನೀಡಿ ಮನುಕುಲದಲ್ಲಿ ಅಜರಾಮರವಾಗಿ ಉಳಿದರು. ವಿಶ್ವಮಾನವನಾಗಿ ಎಲ್ಲರ ಮನೆ ಮನದಲ್ಲಿ ಉಳಿದುಕೊಂಡಿರುವ ಇಂತಹ ಮಹಾನ್ ಸಂತನನ್ನು ನೆನೆಯುವುದೇ ನಮ್ಮೆಲ್ಲರ ಭಾಗ್ಯ ಎಂದು ಸ್ಮರಿಸಿದರು. ಕಸಾಪ ತಾಲೂಕು ಮಟ್ಟದ ಪ್ರೌಢ ಶಾಲಾ ವಿದ್ಯಾರ್ಥಿಗಳಿಗೆ ಏರ್ಪಡಿಸಿದ್ದ ರಸಪ್ರಶ್ನೆ ಪರೀಕ್ಷೆಯಲ್ಲಿ ಆಯ್ಕೆಯಾದ ಆರು ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರಗಳನ್ನು ನೀಡಲಾಯಿತು.ಈ ವೇಳೆ ಕಸಾಪ ತಾಲೂಕು ಅಧ್ಯಕ್ಷ ಪಟೇಲ್ ನಾರಾಯಣಸ್ವಾಮಿ, ಗ್ರೇಡ್ 2 ತಹಸಿಲ್ದಾರ್ ಮಂಜುನಾಥ್, ಇಸಿಓ ಮಂಜುನಾಥ್, ಕಸಾಪ ತಾಲೂಕು ಗೌರವಾಧ್ಯಕ್ಷ ಎನ್ ಸುಂದರ್, ಒಕ್ಕಲಿಗರ ಸಂಘದ ತಾಲೂಕು ಅಧ್ಯಕ್ಷ ನಾರಾಯಣಸ್ವಾಮಿ, ಒಕ್ಕಲಿಗ ಸಂಘದ ಯುವ ಅಧ್ಯಕ್ಷ ವೆಂಕಟಸ್ವಾಮಿ ಮತ್ತಿತರರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಬೆಂಗಳೂರು ನಗರದಲ್ಲಿ 2026ಕ್ಕೆ ಅದ್ಧೂರಿ ಸ್ವಾಗತ
ನಗುವ ಜಗದ ಅಳುವ ಬಯಸಿದ ಚಿರಕವಿ ಸಣಕಲ್ಲ