ಕನ್ನಡದ ಕಂಪನ್ನು ಜಗತ್ತಿಗೆ ಪಸರಿಸಿದ ಕವಿ ಕುವೆಂಪು: ಎಡೀಸಿ ಸೈಯಿದಾ ಆಯಿಷಾ

KannadaprabhaNewsNetwork |  
Published : Dec 30, 2025, 01:30 AM IST
ಬೆಂ.ಗ್ರಾ ಜಿಲ್ಲಾಡಳಿತದಿಂದ ರಾಷ್ಟ್ರಕವಿ ಕುವೆಂಪು ಜನ್ಮದಿನದ ಅಂಗವಾಗಿ ವಿಶ್ವಮಾನವ ದಿನಾಚರಣೆ ನಡೆಯಿತು. | Kannada Prabha

ಸಾರಾಂಶ

ಕುವೆಂಪು ಅವರ ಸಾಹಿತ್ಯ ಕೇವಲ ಕರ್ನಾಟಕಕ್ಕೆ ಸೀಮಿತವಾಗಿಲ್ಲ, ರಾಷ್ಟ್ರದಾದ್ಯಂತ ಸಾಹಿತ್ಯ ಪಸರಿಸಿದೆ. ಕನ್ನಡ ಸಾಹಿತ್ಯಕ್ಕೆ, ಸಮಾಜ ಸುಧಾರಣೆಗೆ, ಜಾತ್ಯತೀತ ವ್ಯವಸ್ಥೆಗೆ ಅವರ ಕೊಡುಗೆ ಅಪಾರವಾದದ್ದು. ಇಡೀ ಜಗತ್ತಿಗೆ ವಿಶ್ವ ಮಾನವ ಸಂದೇಶ ಸಾರಿದ ರಾಷ್ಟ್ರಕವಿ ಕುವೆಂಪು ಅವರ ಸಾಹಿತ್ಯದ ಪರಿಕಲ್ಪನೆಗಳನ್ನು ಜೀವನದಲ್ಲಿ ಪ್ರತಿಯೊಬ್ಬರೂ ಅಳವಡಿಸಿಕೊಂಡಾಗ ಉತ್ತಮ ಸಮಾಜ ನಿರ್ಮಾಣ ಸಾಧ್ಯ.

ಕನ್ನಡಪ್ರಭ ವಾರ್ತೆ ದೊಡ್ಡಬಳ್ಳಾಪುರ

ಸಾಹಿತಿ, ಸಮಾಜ ಸುಧಾರಕ, ದಾರ್ಶನಿಕ ಕವಿ ಕುವೆಂಪು ಅವರು ಕನ್ನಡದ ಕಂಪನ್ನು ವಿಶ್ವಕ್ಕೆ ಪರಿಚಯಿಸಿದ ಮಹಾನ್ ಚೇತನ. ಅವರ ಸಾಹಿತ್ಯ ನಮಗೆ ಸದಾ ದಾರಿದೀಪ ಎಂದು ಅಪರ ಜಿಲ್ಲಾಧಿಕಾರಿ ಸೈಯಿದಾ ಆಯಿಷಾ ತಿಳಿಸಿದರು.

ಬೆಂ.ಗ್ರಾ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸೋಮವಾರ ರಾಷ್ಟ್ರಕವಿ ಕುವೆಂಪು ಅವರ ಜನ್ಮದಿನದ ಅಂಗವಾಗಿ ಆಯೋಜಿಸಿದ್ದ ವಿಶ್ವಮಾನವ ದಿನಾಚರಣೆ ಕಾರ್ಯಕ್ರಮದಲ್ಲಿ ಕುವೆಂಪು ಅವರ ಭಾವಚಿತ್ರಕ್ಕೆ ನಮನ ಸಲ್ಲಿಸಿ ಅವರು ಮಾತನಾಡಿದರು.

ಕುವೆಂಪು ಅವರ ಸಾಹಿತ್ಯ ಕೇವಲ ಕರ್ನಾಟಕಕ್ಕೆ ಸೀಮಿತವಾಗಿಲ್ಲ, ರಾಷ್ಟ್ರದಾದ್ಯಂತ ಸಾಹಿತ್ಯ ಪಸರಿಸಿದೆ. ಕನ್ನಡ ಸಾಹಿತ್ಯಕ್ಕೆ, ಸಮಾಜ ಸುಧಾರಣೆಗೆ, ಜಾತ್ಯತೀತ ವ್ಯವಸ್ಥೆಗೆ ಅವರ ಕೊಡುಗೆ ಅಪಾರವಾದದ್ದು. ಇಡೀ ಜಗತ್ತಿಗೆ ವಿಶ್ವ ಮಾನವ ಸಂದೇಶ ಸಾರಿದ ರಾಷ್ಟ್ರಕವಿ ಕುವೆಂಪು ಅವರ ಸಾಹಿತ್ಯದ ಪರಿಕಲ್ಪನೆಗಳನ್ನು ಜೀವನದಲ್ಲಿ ಪ್ರತಿಯೊಬ್ಬರೂ ಅಳವಡಿಸಿಕೊಂಡಾಗ ಉತ್ತಮ ಸಮಾಜ ನಿರ್ಮಾಣ ಸಾಧ್ಯ ಎಂದರು.

ರಾಷ್ಟ್ರಕವಿ ಕುವೆಂಪು ಅವರ ಪುಸ್ತಕಗಳನ್ನು ಓದಬೇಕು, ಅವರ ಕಾವ್ಯಗಳಲ್ಲಿರುವ ಮೌಲ್ಯಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಇದರಿಂದ ಸಮಾಜದಲ್ಲಿ ಉತ್ತಮ ನಾಗರಿಕರಾಗಲು ಸಹಾಯವಾಗಲಿದೆ ಎಂದು ತಿಳಿಸಿದರು.

ಜಿಲ್ಲಾಧಿಕಾರಿ ಕಚೇರಿ ಸಹಾಯಕ ರಾಜೀವ್ ಸುಲೋಚನ, ಜಿಲ್ಲಾಮಟ್ಟದ ಅಧಿಕಾರಿಗಳು, ಕಚೇರಿ ಸಿಬ್ಬಂದಿ ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಏಕಾದಶಿ ಪ್ರಯುಕ್ತ ಶರವಣ ಟ್ರಸ್ಟ್‌ನಿಂದ ಲಕ್ಷ ಲಡ್ಡು ಹಂಚಿಕೆ
ಹಳೆ ದ್ವೇಷ: ರಸ್ತೆಯಲ್ಲಿ ಅಟ್ಟಾಡಿಸಿ ಅಪ್ಪ, ಮಗನ ಮೇಲೆ ಹಲ್ಲೆ ನಡೆಸಿ ಪರಾರಿ