ಕುವೆಂಪು ವಿವಿ ಅಂತರ ಕಾಲೇಜು ಅಥ್ಲೆಟಿಕ್ಸ್‌ನಲ್ಲಿ ಡಿವಿಎಸ್‌ ಚಾಂಪಿಯನ್

KannadaprabhaNewsNetwork |  
Published : Dec 14, 2023, 01:30 AM IST
ಪೋಟೋ: 12ಎಸ್‌ಎಂಜಿಕೆಪಿ07ಶಿವಮೊಗ್ಗದ ನೆಹರು ಕ್ರೀಡಾಂಗಣದಲ್ಲಿ ಏರ್ಪಡಿಸಿದ್ದ ಕುವೆಂಪು ವಿಶ್ವವಿದ್ಯಾಲಯ ಅಂತರ ಕಾಲೇಜು ಕ್ರೀಡಾಕೂಟದಲ್ಲಿ ಪುರುಷ ಮತ್ತು ಮಹಿಳಾ ವಿಭಾಗದಲ್ಲಿ ಡಿವಿಎಸ್ ಕಲೆ, ವಾಣಿಜ್ಯ ಮತ್ತು ವಿಜ್ಞಾನ ಕಾಲೇಜು ವಿದ್ಯಾರ್ಥಿಗಳು ಸಮಗ್ರ ಚಾಂಪಿಯನ್‌ ಶಿಪ್‌ಗೆ ಭಾಜನರಾಗಿದ್ದಾರೆ.  | Kannada Prabha

ಸಾರಾಂಶ

ಕಾರ್ಯಕ್ರಮದ ಸಮಾರೋಪಲ್ಲಿ ಕಾಲೇಜು ಶಿಕ್ಷಣ ಇಲಾಖೆ ಜಂಟಿ ನಿರ್ದೇಶಕ ಡಾ.ವಿಷ್ಣುಮೂರ್ತಿ ಮಾತನಾಡಿ, ಇಂದಿನ ಯುವ ಸಮೂಹದಲ್ಲಿ ಕ್ರೀಡೆ ಮತ್ತು ಸಾಂಸ್ಕೃತಿಕ ಸೃಜನಶೀಲತೆ ಕುರಿತಾಗಿ ಆಸಕ್ತಿಯ ಕೊರತೆಯಿದೆ. ಮೊಬೈಲ್ ಗೀಳು ಬದುಕಿನ ಅವಿಭಾಜ್ಯ ಅಂಗವಾಗಿದ್ದು, ಇಂತಹ ಅಂಧತ್ವದಿಂದ ಹೊರಬಂದು ಕ್ರಿಯಾಶೀಲ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಬೇಕು. ಆ ಮೂಲಕ ಯಶಸ್ಸಿನ ಹಾದಿಯಲ್ಲಿ ಮುನ್ನಡೆಯಬೇಕು ಎಂದು ಹೇಳಿದರು.

ಕನ್ನಡಪ್ರಭ ವಾರ್ತೆ ಶಿವಮೊಗ್ಗ

ನಗರದ ರಾಷ್ಟ್ರೀಯ ಶಿಕ್ಷಣ ಸಮಿತಿ, ಕುವೆಂಪು ವಿಶ್ವವಿದ್ಯಾಲಯ, ಆಚಾರ್ಯ ತುಳಸಿ ರಾಷ್ಟ್ರೀಯ ವಾಣಿಜ್ಯ ಕಾಲೇಜಿನ ಸಹಯೋಗದಲ್ಲಿ ನೆಹರೂ ಕ್ರೀಡಾಂಗಣದಲ್ಲಿ ಏರ್ಪಡಿಸಿದ್ದ ಕುವೆಂಪು ವಿಶ್ವವಿದ್ಯಾಲಯ ಅಂತರ ಕಾಲೇಜು ಕ್ರೀಡಾಕೂಟದಲ್ಲಿ ಪುರುಷ ಮತ್ತು ಮಹಿಳಾ ವಿಭಾಗದಲ್ಲಿ ಡಿವಿಎಸ್ ಕಲೆ, ವಾಣಿಜ್ಯ ಮತ್ತು ವಿಜ್ಞಾನ ಕಾಲೇಜಿಗೆ ಸಮಗ್ರ ಚಾಂಪಿಯನ್‌ಶಿಪ್ ಲಭಿಸಿದೆ.

ಕ್ರಮವಾಗಿ ಪುರುಷ ವಿಭಾಗದಲ್ಲಿ ಸಹ್ಯಾದ್ರಿ ವಾಣಿಜ್ಯ ಮತ್ತು ನಿರ್ವಹಣಾ ಕಾಲೇಜು ದ್ವಿತೀಯ ಸ್ಥಾನ, ಶಂಕರಘಟ್ಟ ಜ್ಞಾನಸಹ್ಯಾದ್ರಿ ತೃತೀಯ ಸ್ಥಾನ ಪಡೆದಿದೆ. ಮಹಿಳಾ‌ ವಿಭಾಗದಲ್ಲಿ ಶಂಕರಘಟ್ಟ ವಿಶ್ವವಿದ್ಯಾಲಯ ದೈಹಿಕ ಶಿಕ್ಷಣ ಕಾಲೇಜು ದ್ವಿತೀಯ ಸ್ಥಾನ, ತೀರ್ಥಹಳ್ಳಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ತೃತೀಯ ಸ್ಥಾನ ಪಡೆದಿದೆ.

ಸಹ್ಯಾದ್ರಿ ವಿಜ್ಞಾನ‌ ಕಾಲೇಜಿನ ವಿದ್ಯಾರ್ಥಿ ಗೌತಮ್ ಉತ್ತಮ ಪುರುಷ ಅಥ್ಲೀಟ್‌ ಹಾಗೂ ಡಿವಿಎಸ್ ಕಾಲೇಜಿನ ವಿದ್ಯಾರ್ಥಿನಿ ಅಕ್ಷತಾ ಶಿವಾಜಿ ಉತ್ತಮ ಮಹಿಳಾ ಅಥ್ಲೀಟ್‌ಯಾಗಿ ಬಹುಮಾನ ಪಡೆದರು. ಮೂರು ದಿನಗಳ ಕ್ರೀಡಾಕೂಟದಲ್ಲಿ ಕುವೆಂಪು ವಿಶ್ವವಿದ್ಯಾಲಯ ವ್ಯಾಪ್ತಿಯ 87 ಪದವಿ ಕಾಲೇಜುಗಳ ಸುಮಾರು 800ಕ್ಕೂ ಹೆಚ್ಚು ವಿದ್ಯಾರ್ಥಿಗಳು ಭಾಗವಹಿಸಿದ್ದರು. 28 ವಿವಿಧ ಕ್ರೀಡಾ ಸ್ಪರ್ಧೆಗಳು ನಡೆದವು.

ಸಮಾರೋಪ:

ಕಾರ್ಯಕ್ರಮದ ಸಮಾರೋಪಲ್ಲಿ ಕಾಲೇಜು ಶಿಕ್ಷಣ ಇಲಾಖೆ ಜಂಟಿ ನಿರ್ದೇಶಕ ಡಾ.ವಿಷ್ಣುಮೂರ್ತಿ ಮಾತನಾಡಿ, ಇಂದಿನ ಯುವ ಸಮೂಹದಲ್ಲಿ ಕ್ರೀಡೆ ಮತ್ತು ಸಾಂಸ್ಕೃತಿಕ ಸೃಜನಶೀಲತೆ ಕುರಿತಾಗಿ ಆಸಕ್ತಿಯ ಕೊರತೆಯಿದೆ. ಮೊಬೈಲ್ ಗೀಳು ಬದುಕಿನ ಅವಿಭಾಜ್ಯ ಅಂಗವಾಗಿದ್ದು, ಇಂತಹ ಅಂಧತ್ವದಿಂದ ಹೊರಬಂದು ಕ್ರಿಯಾಶೀಲ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಬೇಕು. ಆ ಮೂಲಕ ಯಶಸ್ಸಿನ ಹಾದಿಯಲ್ಲಿ ಮುನ್ನಡೆಯಬೇಕು ಎಂದು ಹೇಳಿದರು.

ರಾಷ್ಟ್ರೀಯ ಶಿಕ್ಷಣ ಸಮಿತಿ ಸಹ ಕಾರ್ಯದರ್ಶಿ ಡಾ. ಪಿ.ನಾರಾಯಣ್ ಮಾತನಾಡಿದರು. ಎನ್ಇಎಸ್ ನಿರ್ದೇಶಕ ಟಿ.ಆರ್.ಅಶ್ವಥನಾರಾಯಣ ಶೆಟ್ಟಿ, ಕುವೆಂಪು ವಿವಿ ದೈಹಿಕ ಶಿಕ್ಷಣ ವಿಭಾಗದ ನಿರ್ದೇಶಕ ಡಾ. ಎನ್.ಡಿ. ವಿರೂಪಾಕ್ಷ, ಸ್ನಾತಕೋತ್ತರ ದೈಹಿಕ ಶಿಕ್ಷಣ ವಿಭಾಗದ ಸಹ ಪ್ರಾಧ್ಯಾಪಕ ಡಾ.ಗಜಾನನ ಪ್ರಭು ಮಾತನಾಡಿದರು.

ಎಟಿಎನ್‌ಸಿ ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಪಿ.ಆರ್. ಮಮತಾ ಅಧ್ಯಕ್ಷತೆ ವಹಿಸಿದ್ದರು. ಕ್ರೀಡಾಕೂಟ ಸಂಯೋಜಕರಾದ ಪ್ರೊ. ಕೆ.ಎಂ. ನಾಗರಾಜ, ಪ್ರೊ‌.ಜಗದೀಶ್ ಮತ್ತಿತರರು ಉಪಸ್ಥಿತರಿದ್ದರು.

- - - -12ಎಸ್‌ಎಂಜಿಕೆಪಿ07:

ಶಿವಮೊಗ್ಗದ ನೆಹರು ಕ್ರೀಡಾಂಗಣದಲ್ಲಿ ನಡೆದ ಕುವೆಂಪು ವಿವಿ ಅಂತರ ಕಾಲೇಜು ಕ್ರೀಡಾಕೂಟದಲ್ಲಿ ಪುರುಷ ಮತ್ತು ಮಹಿಳಾ ವಿಭಾಗದಲ್ಲಿ ಡಿವಿಎಸ್ ಕಾಲೇಜು ವಿದ್ಯಾರ್ಥಿಗಳು ಸಮಗ್ರ ಚಾಂಪಿಯನ್‌ಶಿಪ್‌ ಗೌರವಕ್ಕೆ ಪಾತ್ರರಾದರು.

PREV

Recommended Stories

ದೇಶದ ನಾಯಕರಾಗಲು ಶಾಲೆಯಲ್ಲಿ ನಾಯಕತ್ವ ವಹಿಸಿಕೊಳ್ಳಿ
ಪರಿಷ್ಕೃತ ಜಿಎಸ್‌ಟಿ ಬಡ ಜನತೆಗೆ ಅನುಕೂಲ