ಕುವೆಂಪು ವಿವಿ ಕನ್ನಡ ಐಚ್ಚಿಕ ಪರೀಕ್ಷೆ ಮುಂದೂಡಿಕೆ

KannadaprabhaNewsNetwork |  
Published : May 25, 2025, 01:51 AM IST
ಕುಲಸಚಿವ ಪ್ರೊ. ಎಸ್. ಎಂ. ಗೋಪಿನಾಥ್  | Kannada Prabha

ಸಾರಾಂಶ

ಶನಿವಾರ ನಿಗದಿಯಾಗಿದ್ದ ಬಿ.ಎ. ಆರನೇ ಸೆಮಿಸ್ಟರ್ ಕನ್ನಡ ಐಚ್ಛಿಕ ಪರೀಕ್ಷೆಯನ್ನು ಪ್ರಶ್ನೆ ಪತ್ರಿಕೆಯ ಗೊಂದಲದಿಂದ ಮುಂದೂಡಲಾಗಿದ್ದು, ಪರೀಕ್ಷೆಯ ದಿನಾಂಕವನ್ನು ನಂತರ ಪ್ರಕಟಿಸಲಾಗುವುದು ಎಂದು ಕುವೆಂಪು ವಿವಿ ಪರೀಕ್ಷಾಂಗ ಕುಲಸಚಿವ ಪ್ರೊ. ಎಸ್. ಎಂ. ಗೋಪಿನಾಥ್ ತಿಳಿಸಿದ್ದಾರೆ.

ಶಿವಮೊಗ್ಗ: ಶನಿವಾರ ನಿಗದಿಯಾಗಿದ್ದ ಬಿ.ಎ. ಆರನೇ ಸೆಮಿಸ್ಟರ್ ಕನ್ನಡ ಐಚ್ಛಿಕ ಪರೀಕ್ಷೆಯನ್ನು ಪ್ರಶ್ನೆ ಪತ್ರಿಕೆಯ ಗೊಂದಲದಿಂದ ಮುಂದೂಡಲಾಗಿದ್ದು, ಪರೀಕ್ಷೆಯ ದಿನಾಂಕವನ್ನು ನಂತರ ಪ್ರಕಟಿಸಲಾಗುವುದು ಎಂದು ಕುವೆಂಪು ವಿವಿ ಪರೀಕ್ಷಾಂಗ ಕುಲಸಚಿವ ಪ್ರೊ. ಎಸ್. ಎಂ. ಗೋಪಿನಾಥ್ ತಿಳಿಸಿದ್ದಾರೆ.

ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಕನ್ನಡ ವಿಷಯದ ಪರೀಕ್ಷಾ ಮಂಡಳಿಯ ಅಧ್ಯಕ್ಷರನ್ನು ಕರೆಸಿ ಪರೀಕ್ಷಾ ವಿಭಾಗದಲ್ಲಿ ವಿಚಾರಣೆ ನಡೆಸಿದ್ದು, ಪ್ರಶ್ನೆ ಪತ್ರಿಕೆ ಸಿದ್ದಪಡಿಸಿ, ಪರಿಶೀಲನೆ ನಡೆಸಿದ ಅಧ್ಯಾಪಕರುಗಳು ಮತ್ತು ಅಧ್ಯಕ್ಷರು ಈ ಘಟನೆಗೆ ಹೊಣೆಗಾರರಾಗಿರುತ್ತಾರೆ ಎಂದು ತಿಳಿಸಲಾಗಿದೆ. ಈ ಕುರಿತು ಪರೀಕ್ಷಾ ಮಂಡಳಿಯ ಅಧ್ಯಕ್ಷರು ತಪ್ಪೊಪ್ಪಿಗೆಯ ಪತ್ರ ಸಲ್ಲಿಸಿದ್ದು, ಸಂಬಂಧಪಟ್ಟವರ ಮೇಲೆ ಕ್ರಮ ಜರುಗಿಸಲಾಗುವುದು ಎಂದು ತಿಳಿಸಿದ್ದಾರೆ.

ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಿದ್ದು, ವಿಶ್ವವಿದ್ಯಾಲಯದ ಘನತೆಗೆ ಕುಂದು ತಂದಿರುವ ಮತ್ತು ವಿದ್ಯಾರ್ಥಿಗಳಿಗೆ ತೊಡಕು ಉಂಟು ಮಾಡಿರುವ ಈ ಪ್ರಕರಣಕ್ಕೆ ಸಂಬಂಧಪಟ್ಟವರ ಮೇಲೆ ಪರೀಕ್ಷಾ ಕಾಯ್ದೆಯ ಪ್ರಕಾರ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಅತಿಕ್ರಮಣ ಮಾಡಿಕೊಂಡಿದ್ದ ಸರ್ಕಾರಿ ಆಸ್ತಿಗೆ ಬೀಗ
ಸ್ಥಳೀಯ ರೈಲ್ವೆ ಪೊಲೀಸ್ ಸಿಬ್ಬಂದಿಯ ಕಾರ್ಯವೈಖರಿ ಪರಿಶೀಲಿಸಿದ ಡಿಐಜಿ ರಶ್ಮಿ