ಕೊಪ್ಪಳ: ಅಂತಾರಾಷ್ಟ್ರೀಯ ಕಾರ್ಮಿಕ ದಿನ ಎನ್ನುವ ಬದಲು ಶ್ರಮಯೋಗಿ ದಿನ ಎಂದು ಕರೆಯುವುದು ಹೆಚ್ಚು ಸೂಕ್ತ ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಮಹಾಂತೇಶ ಎಸ್. ದರಗದ ಹೇಳಿದರು.
ಅಂತಾರಾಷ್ಟ್ರೀಯ ಕಾರ್ಮಿಕ ದಿನ ಎನ್ನುವ ಬದಲು ಶ್ರಮಯೋಗಿ ದಿನ ಎಂದು ಕರೆಯುವುದು ಹೆಚ್ಚು ಸೂಕ್ತ. ಬಸವಣ್ಣನವರು ಕಾಯಕವೇ ಕೈಲಾಸ ಎಂದು ನುಡಿದು ಕಾಯಕದ ಮಹತ್ವವನ್ನು ಸಾರಿದ್ದಾರೆ. ಅದೇ ರೀತಿ `ನೀನು ಅಧ್ಯಕ್ಷನಾಗಿರು, ಚಮ್ಮಾರನಾಗಿರು, ಕಮ್ಮಾನಾಗಿರು, ಏನೇ ಆಗಿದ್ದರೂ ಮೊದಲು ಶ್ರಮಯೋಗಿ ಆಗಿ ಕೆಲಸಗಾರನಾಗು, ಕಾರ್ಮಿಕನಾಗಿರು ಎಂದು ಡಾ. ಬಿ.ಆರ್. ಅಂಬೇಡ್ಕರ್ ಹೇಳಿದ್ದಾರೆ. ಶ್ರಮಿಕವರ್ಗ ದೇಶದ ಅಭಿವೃದ್ಧಿ, ಉನ್ನತಿಗೆ ಮುನ್ನುಡಿಯಾಗಿದ್ದಾರೆ ಎಂದರು.
ಕಲ್ಯಾಣ ಕರ್ನಾಟಕ ಜಿಲ್ಲೆಗಳ ನೋಂದಾಯಿತ ಕಾರ್ಮಿಕ ಸಂಘಗಳ ಒಕ್ಕೂಟ ಅಧ್ಯಕ್ಷ ರಮೇಶ ಘೋರ್ಪಡೆ ಮಾತನಾಡಿ, ಕಾರ್ಮಿಕ ಇಲಾಖೆಯಿಂದ ನಮ್ಮ ಕಾರ್ಮಿಕರಿಗೆ ಒಳ್ಳೆಯ ಸೌಲಭ್ಯಗಳನ್ನು ನೀಡಲಾಗುತ್ತಿದೆ. ಇದರಿಂದ ನಮ್ಮ ಕಾರ್ಮಿಕರು ಉತ್ತಮ ಜೀವನ ಕಟ್ಟಿಕೊಳ್ಳಲು ಕಟ್ಟಡ ನಿರ್ಮಾಣ ಕಾರ್ಮಿಕರಿಗೆ ಜೀವನ ಮಟ್ಟವನ್ನು ಸುಧಾರಿಸಿಕೊಳ್ಳಲು ಸಾಧ್ಯವಾಗಿದೆ ಎಂದರು.ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾರ್ಮಿಕ ನಿರೀಕ್ಷಕರಾದ ಮಂಜುಳಾ ವಿಶ್ವನಾಥ ಮಾತನಾಡಿ, ಪಾಶ್ಚಿಮಾತ್ಯ ದೇಶಗಳಲ್ಲಿ ಕಾರ್ಮಿಕರ ದಂಗೆಗಳು 1883ರಲ್ಲಿ ಪ್ರಾರಂಭವಾದವು. ಚಿಕಾಗೋದಲ್ಲಿ ಕಾರ್ಮಿಕ ಸಂಘಟನೆಗಳು ಕೆಲಸದ ಅವಧಿ ನಿರ್ಧರಿಸುವ ಸಲುವಾಗಿ ಮತ್ತು ಅನೇಕ ಶೋಷಣೆಗಳ ವಿರುದ್ಧ ಹೋರಾಟ ಪ್ರಾರಂಭಿಸಿದವು. ಎಂದರು.