ಪೌರಕಾರ್ಮಿಕರಿಗೆ ಅಗತ್ಯ ಮೂಲ ಸೌಲಭ್ಯ: ಜಿಲ್ಲಾಧಿಕಾರಿ ಸೂಚನೆ

KannadaprabhaNewsNetwork |  
Published : Oct 30, 2026, 03:00 AM IST
ಚಿತ್ರ :  28ಎಂಡಿಕೆ1 : ಜಿಲ್ಲಾಧಿಕಾರಿ ಸಭೆ.  | Kannada Prabha

ಸಾರಾಂಶ

ಜಿಲ್ಲೆಯಲ್ಲಿ ಸಫಾಯಿ ಕರ್ಮಚಾರಿಗಳು ಹಾಗೂ ಪೌರ ಕಾರ್ಮಿಕರ ಆರೋಗ್ಯ ತಪಾಸಣೆ, ಗುಣಮಟ್ಟದ ಸುರಕ್ಷತಾ ಸೌಲಭ್ಯ ಹಾಗೂ ಸರ್ಕಾರದ ಸೌಲಭ್ಯಗಳನ್ನು ಪರಿಣಾಮಕಾರಿ ಅನುಷ್ಠಾನಕ್ಕೆ ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಅವರು ಕರೆ ನೀಡಿದರು.

ಮಡಿಕೇರಿ: ಜಿಲ್ಲೆಯಲ್ಲಿ ಸಫಾಯಿ ಕರ್ಮಚಾರಿಗಳು ಹಾಗೂ ಪೌರ ಕಾರ್ಮಿಕರ ಆರೋಗ್ಯ ತಪಾಸಣೆ, ಗುಣಮಟ್ಟದ ಸುರಕ್ಷತಾ ಸೌಲಭ್ಯ ಹಾಗೂ ಸರ್ಕಾರದ ಸೌಲಭ್ಯಗಳನ್ನು ಪರಿಣಾಮಕಾರಿ ಅನುಷ್ಠಾನಕ್ಕೆ ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಅವರು ಕರೆ ನೀಡಿದರು.ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರ ನಡೆದ ಸಫಾಯಿ ಕರ್ಮಚಾರಿಗಳ ಹಾಗೂ ಮ್ಯಾನುವಲ್ ಸ್ಕ್ಯಾವೆಂಜರ್ಸ್ ಜಿಲ್ಲಾ ಜಾಗೃತಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಜಿಲ್ಲೆಯ ನಗರ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಯಾವುದೇ ಕಾರಣಕ್ಕೂ ವ್ಯಕ್ತಿಗಳನ್ನು ನೇರವಾಗಿ ಒಳಚರಂಡಿ ಅಥವಾ ಸೆಪ್ಟಿಕ್ ಟ್ಯಾಂಕ್‌ಗಳಿಗೆ ಇಳಿಸಬಾರದು. ಪೌರಕಾರ್ಮಿಕರು ಮತ್ತು ಸಫಾಯಿ ಕರ್ಮಚಾರಿಗಳಿಗೆ ಪ್ರತಿದಿನದ ಕೆಲಸದ ವೇಳೆ ಧರಿಸಲು ಗುಣಮಟ್ಟದ ರಕ್ಷಣಾ ಪರಿಕರಗಳು, ಗ್ಲೌಸ್, ಬೂಟ್‌ಗಳು ಮತ್ತು ಮಾಸ್ಕ್ಗಳನ್ನು ಕಡ್ಡಾಯವಾಗಿ ವಿತರಿಸಬೇಕು. ಇದರೊಂದಿಗೆ ಎಲ್ಲ ಕರ್ಮಚಾರಿಗಳಿಗೆ ಪ್ರತಿ ಆರು ತಿಂಗಳಿಗೊಮ್ಮೆ ತಪ್ಪದೆ ಉಚಿತ ಹಾಗೂ ಸಂಪೂರ್ಣ ವೈದ್ಯಕೀಯ ಆರೋಗ್ಯ ತಪಾಸಣೆ ನಡೆಸಲು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.ಗುತ್ತಿಗೆ ಆಧಾರದ ಮೇಲೆ ಹಾಗೂ ನೇರವಾಗಿ ಕಾರ್ಯನಿರ್ವಹಿಸುತ್ತಿರುವ ಪ್ರತಿಯೊಬ್ಬ ಪೌರಕಾರ್ಮಿಕರಿಗೂ ಸರ್ಕಾರದ ನಿಯಮಾನುಸಾರ ಇ.ಎಸ್.ಐ. ಮತ್ತು ಭವಿಷ್ಯ ನಿಧಿ (ಪಿ.ಎಫ್.) ಸೌಲಭ್ಯಗಳು ದೊರೆಯುವಂತಾಗಬೇಕು ಎಂದರು.

ಕರ್ನಾಟಕ ರಾಜ್ಯ ಪೌರಕಾರ್ಮಿಕರ ಸಂಘದ ರಾಜ್ಯಾಧ್ಯಕ್ಷ ಡಿ.ಆರ್.ರಾಜು ಅವರು ಮಾತನಾಡಿ, ಗೋಣಿಕೊಪ್ಪ ಗ್ರಾ.ಪಂ ವ್ಯಾಪ್ತಿಯಲ್ಲಿ ಪೌರಕಾರ್ಮಿಕರು ವಾಸ ಇರುವ ಮನೆ ಪಕ್ಕದಲ್ಲಿ ಮಾಂಸದ ಮಳಿಗೆ ಹಾಗೂ ಸೆಪ್ಟಿಕ್ ಟ್ಯಾಂಕ್‌ಗಳಿದ್ದು, ಇವುಗಳನ್ನು ತೆರವುಗೊಳಿಸಲು ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ಮನವಿ ಮಾಡಿದರು. ಸಮಿತಿ ಸದಸ್ಯರಾದ ರಂಗಸ್ವಾಮಿ ಅವರು ಸಫಾಯಿ ಕರ್ಮಚಾರಿಗಳು ದಿನಗೂಲಿಯಲ್ಲಿ ಕೆಲಸ ಮಾಡುತ್ತಿದ್ದು, ಇವರಿಗೆ ಕಾರ್ಮಿಕ ಇಲಾಖೆಯ ನಿಯಮದಂತೆ ವೇತನ ನೀಡುವಂತಾಗಬೇಕು. ಜೊತೆಗೆ ಪಿಎಫ್, ಇಎಸ್‌ಐ ಸೌಲಭ್ಯ ಒದಗಿಸುವಂತಾಗಬೇಕು ಎಂದು ಕೋರಿದರು.

ಡಿ.ಆರ್.ರಾಜು ಅವರು ಮಾತನಾಡಿ, ಗೋಣಿಕೊಪ್ಪ ಗ್ರಾ.ಪಂ.ವ್ಯಾಪ್ತಿಯಲ್ಲಿ 28 ಪೌರಕಾರ್ಮಿಕರು ಕೆಲಸ ನಿರ್ವಹಿಸುತ್ತಿದ್ದು, ಸರ್ಕಾರಿ ಆದೇಶದನ್ವಯ ಮೂರು ಜನ ಪೌರಕಾರ್ಮಿಕರನ್ನು ಖಾಯಂಗೊಳಿಸಲು ಅವಕಾಶವಿದೆ. ಆದರೆ ಪೌರಕಾರ್ಮಿಕರು ಖಾಯಂಗೊಳಿಸಲು ಇಲಾಖಾಧಿಕಾರಿಗಳು ಯಾವುದೇ ಕ್ರಮ ಕೈಗೊಂಡಿಲ್ಲ ಎಂದರು.ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಅವರು ಮಾತನಾಡಿ, ಅರ್ಹ ಪೌರಕಾರ್ಮಿಕರನ್ನು ವಿಶೇಷ ಪ್ರಕರಣ ಎಂದು ಪರಿಗಣಿಸಿ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರಾದ ಶೇಖರ್ ಅವರು ಮಾತನಾಡಿ, ನ.7 ರಂದು ಪೌರಕಾರ್ಮಿಕರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಸಂಬಂಧಿಸಿದವರು ಅಗತ್ಯ ಮಾಹಿತಿ ನೀಡುವಂತೆ ತಿಳಿಸಿದರು.

ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರಾದ ಶೇಖರ್ ಮಾತನಾಡಿದರು.

ಗೋಣಿಕೊಪ್ಪ ಗ್ರಾ.ಪಂ.ಅಭಿವೃದ್ಧಿ ಅಧಿಕಾರಿ ತಿಮ್ಮಯ್ಯ, ನಗರಸಭೆ ಪೌರಾಯುಕ್ತ ಎಚ್.ಆರ್.ರಮೇಶ್, ಗೋಣಿಕೊಪ್ಪ ಪೌರಕಾರ್ಮಿಕ ಕಾಲೋನಿಯ ವಿಜಯ್ ಕುಮಾರ್, ಪೊನ್ನಂಪೇಟೆಯ ಪರಮೇಶ್, ಗುಮ್ಮನಕೊಲ್ಲಿಯ ರಾಜೇಶ್ವರಿ, ಪೊಲೀಸ್ ಇಲಾಖೆ ಹಾಗೂ ಆರೋಗ್ಯ ಇಲಾಖೆಯ ಹಿರಿಯ ಅಧಿಕಾರಿಗಳು, ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರು, ಸಾಮಾಜಿಕ ಅಭಿವೃದ್ಧಿ ತಜ್ಞರು ಮತ್ತು ಸಮಿತಿಯ ಸದಸ್ಯರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ರೇಪ್‌ ಮಾಡಿದ್ದಕ್ಕಾಗಿ ಅಪಹರಣ ಮೂಲಕ ಪ್ರತೀಕಾರ
ಉತ್ತರ ಪಾಲಿಕೆಯಲ್ಲಿ 18 ಜಂಕ್ಷನ್‌ ಗುರುತು