ಸ್ವಚ್ಛತೆ ಕೊರತೆ: ಘಟಕ ವ್ಯವಸ್ಥಾಪಕರಿಗೆ ಡಿಸಿ ನೋಟಿಸ್

KannadaprabhaNewsNetwork |  
Published : Aug 14, 2026, 02:15 AM IST
(ಪೋಟೋ-13ಬಿಕೆಟಿ2, ಜಿಲ್ಲಾಧಿಕಾರಿ ಸಂಗಪ್ಪ ಅವರು ಬೀಳಗಿ ಬಸ್ ನಿಲ್ದಾಣಕ್ಕೆ ಭೇಟಿ ನೀಡಿದರು) | Kannada Prabha

ಸಾರಾಂಶ

ಕನ್ನಡಪ್ರಭ ವಾರ್ತೆ ಬಾಗಲಕೋಟೆಬೀಳಗಿ ಬಸ್ ನಿಲ್ದಾಣದಲ್ಲಿ ಸ್ವಚ್ಛತೆ ಕಾಪಾಡದೇ ನಿರ್ಲಕ್ಷ್ಯ ದೋರಣೆ ತಾಳಿರುವ ಬೀಳಗಿ ಬಸ್ ನಿಲ್ದಾಣದ ಘಟಕ ವ್ಯವಸ್ಥಾಪಕರಿಗೆ ಜಿಲ್ಲಾಧಿಕಾರಿ ಸಂಗಪ್ಪ ಅವರು ನೋಟಿಸ್ ನೀಡಿದ್ದಾರೆ.

ಕನ್ನಡಪ್ರಭ ವಾರ್ತೆ ಬಾಗಲಕೋಟೆ

ಬೀಳಗಿ ಬಸ್ ನಿಲ್ದಾಣದಲ್ಲಿ ಸ್ವಚ್ಛತೆ ಕಾಪಾಡದೇ ನಿರ್ಲಕ್ಷ್ಯ ದೋರಣೆ ತಾಳಿರುವ ಬೀಳಗಿ ಬಸ್ ನಿಲ್ದಾಣದ ಘಟಕ ವ್ಯವಸ್ಥಾಪಕರಿಗೆ ಜಿಲ್ಲಾಧಿಕಾರಿ ಸಂಗಪ್ಪ ಅವರು ನೋಟಿಸ್ ನೀಡಿದ್ದಾರೆ.

ಬೀಳಗಿ ಬಸ್ ನಿಲ್ದಾಣಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಬಸ್ ನಿಲ್ದಾಣದ ಆವರಣದಲ್ಲಿ ಸಮರ್ಪಕ ಸ್ವಚ್ಛತೆ ಇಲ್ಲದಿರುವುದು ಕಂಡುಬಂದಿತು. ಅಲ್ಲದೇ, ಬಸ್ ನಿಲ್ದಾಣದ ಆವರಣದಲ್ಲಿರುವ ಹೊಟೇಲ್ ಹಾಗೂ ಅಂಗಡಿಗಳಲ್ಲಿಯೂ ಸ್ವಚ್ಛತೆ ಕಾಪಾಡದೇ ಇರುವುದರ ಜತೆಗೆ ಅವಧಿ ಮೀರಿದ ಆಹಾರ ಪದಾರ್ಥಗಳನ್ನು ಮಾರಾಟ ಮಾಡುತ್ತಿರುವುದು ಕಂಡುಬಂದಿತು. ನಿಲ್ದಾಣದಲ್ಲಿರುವ ಬೇಕರಿ ಅಂಗಡಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಆಹಾರ ಸುರಕ್ಷತೆ, ಬ್ಯಾಂಡ್ ಉತ್ಪನ್ನಗಳು ಇರದೇ ಇರುವುದು ಕಂಡುಬಂದಿತು. ಈ ಕುರಿತು ಆಹಾರ ಸುರಕ್ಷತೆ ಅಧಿಕಾರಿ, ಬೀಳಗಿ ಪಟ್ಟಣ ಪಂಚಾಯತ ಮುಖ್ಯಾಧಿಕಾರಿಗಳಿಗೆ ಕ್ರಮಕೈಗೊಳ್ಳಲು ಸೂಚನೆ ನೀಡಿದರು.

ಸಾರ್ವಜನಿಕ ಸ್ಥಳವಾಗಿರುವ ಬಸ್ ನಿಲ್ದಾಣವು ಸದಾ ಸ್ವಚ್ಛ ಹಾಗೂ ಸುಸಜ್ಜಿತವಾಗಿರಬೇಕು. ಈ ನಿಟ್ಟಿನಲ್ಲಿ ಸಂಬಂಧಿಸಿದ ಘಟಕ ವ್ಯವಸ್ಥಾಪಕರು ಸೂಕ್ತ ಮೇಲ್ವಿಚಾರಣೆ ನಡೆಸಿ, ಸಾರ್ವಜನಿಕರಿಗೆ ಉತ್ತಮ ಸೇವೆ ಹಾಗೂ ಸ್ವಚ್ಛ ವಾತಾವರಣ ಕಲ್ಪಿಸುವ ಜವಾಬ್ದಾರಿ ಹೊಂದದೇ ಇರುವ ಬಗ್ಗೆ ಭೇಟಿ ಸಂದರ್ಭದಲ್ಲಿ ಈ ರೀತಿಯ ಅವ್ಯವಸ್ಥೆ ಕಂಡುಬಂದಿರುವುದು ಕರ್ತವ್ಯ ನಿರ್ವಹಣೆಯಲ್ಲಿನ ನಿರ್ಲಕ್ಷ್ಯ ಹಾಗೂ ಮೇಲ್ವಿಚಾರಣೆಯ ಕೊರತೆಯನ್ನು ಕಂಡು ನೋಟಿಸ್ ಜಾತಿ ಮಾಡಿದ್ದಾರೆ. ಬಸ್ ನಿಲ್ದಾಣದ ಆವರಣವನ್ನು ತಕ್ಷಣವೇ ಸ್ವಚ್ಛಗೊಳಿಸುವಂತೆ ಹಾಗೂ ಹೊಟೇಲ್ ಮತ್ತು ಅಂಗಡಿಗಳಲ್ಲಿ ಸ್ವಚ್ಛತೆ ಕಾಪಾಡುವುದರ ಜೊತೆಗೆ ಅವಧಿ ಮೀರಿದ ಆಹಾರ ಪದಾರ್ಥಗಳ ಮಾರಾಟ ನಡೆಯದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು. ಭೇಟಿ ಸಂದರ್ಭದಲ್ಲಿ ಆಹಾರ ಇಲಾಖೆಯ ಜಂಟಿ ನಿರ್ದೇಶಕ ಶ್ರೀಶೈಲ ಕಂಕಣವಾಡಿ ಇದ್ದರು. ಪಡಿತರ ಗೋದಾಮಿಗೆ ಡಿಸಿ ಭೇಟಿಬೀಳಗಿಯ ಟಿಎ.ಪಿ.ಸಿ.ಎಂ.ಎಲ್ ಗೋದಾಮಿಗೆ ಜಿಲ್ಲಾಧಿಕಾರಿ ಸಂಗಪ್ಪ ಅವರು ಭೇಟಿ ನೀಡಿ ಪ್ರಸಕ್ತ ತಿಂಗಳಿಗೆ ಬಿಡುಗಡೆಯಾದ ಪಡಿತರಧಾನ್ಯಗಳ ಎತ್ತುವಳಿ ಹಾಗೂ ಬಿಲ್ಲುಗಳನ್ನು ಪರಿಶೀಲಿಸಿ, ಆಹಾರದಾನ್ಯಗಳ ಮಾಹಿತಿಯನ್ನು ಪಡೆದುಕೊಂಡರು. ಪರಿಶೀಲನೆ ವೇಳೆಯಲ್ಲಿ ಆಹಾರ ಇಲಾಖೆಯ ಜಂಟಿ ನಿರ್ದೇಶಕ ಶ್ರೀಶೈಲ ಕಂಕಣವಾಡಿ ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಬಿ.ನಾಗೇಂದ್ರ ರಾಜೀನಾಮೆಗೆ ನೀಡಲಿ
ನಡುಗಡ್ಡೆ ಪ್ರದೇಶದ ಸಂತ್ರಸ್ತರಿಗೆ ತಕ್ಷಣವೇ ನಿವೇಶನ ಕೊಡಿ