ಭೀಮಾ ಲೇಔಟ್‌ನಲ್ಲಿ ಮೂಲಸೌಕರ್ಯಗಳ ಕೊರತೆ, ಪ್ರತಿಭಟನೆ ಎಚ್ಚರಿಕೆ

KannadaprabhaNewsNetwork |  
Published : Oct 30, 2026, 03:00 AM IST
ಶಿಗ್ಗಾಂವಿ ಪಟ್ಟಣದ ಹೊಸ ಬಸ್ ಸ್ಟ್ಯಾಂಡ್ ಎದುರಿನ ಭೀಮಾ ಲೇಔಟ್‌ನಲ್ಲಿ ಮೂಲಭೂತ ಸೌಲಭ್ಯಗಳನ್ನ ಒದಗಿಸುವಂತೆ ಆಗ್ರಹಿಸಿ ಪುರಸಭೆ ಮುಖ್ಯಾಧಿಕಾರಿ ರವಿ ಬಾಗಲಕೋಟಿ ಅವರಿಗೆ ನಿವಾಸಿಗಳು ಮನವಿ ಸಲ್ಲಿಸಿದರು. | Kannada Prabha

ಸಾರಾಂಶ

ಶಿಗ್ಗಾಂವಿ ಪಟ್ಟಣದ ಹೊಸ ಬಸ್ ಸ್ಟ್ಯಾಂಡ್ ಎದುರಿನ ಭೀಮಾ ಲೇಔಟ್‌ನಲ್ಲಿ ಗಟಾರ, ರಸ್ತೆ ಸೇರಿದಂತೆ ಮೂಲಭೂತ ಸೌಲಭ್ಯಗಳ ಕೊರತೆಯಿಂದ ನಿವಾಸಿಗಳು ತೀವ್ರ ತೊಂದರೆ ಅನುಭವಿಸುತ್ತಿದ್ದು, ಸಮಸ್ಯೆಗಳನ್ನು ಕೂಡಲೇ ಪರಿಹರಿಸುವಂತೆ ಆಗ್ರಹಿಸಿ ಪುರಸಭೆ ಮುಖ್ಯಾಧಿಕಾರಿ ರವಿ ಬಾಗಲಕೋಟಿ ಅವರಿಗೆ ನಿವಾಸಿಗಳು ಮನವಿ ಸಲ್ಲಿಸಿದರು.

ಶಿಗ್ಗಾಂವಿ:ಪಟ್ಟಣದ ಹೊಸ ಬಸ್ ಸ್ಟ್ಯಾಂಡ್ ಎದುರಿನ ಭೀಮಾ ಲೇಔಟ್‌ನಲ್ಲಿ ಗಟಾರ, ರಸ್ತೆ ಸೇರಿದಂತೆ ಮೂಲಭೂತ ಸೌಲಭ್ಯಗಳ ಕೊರತೆಯಿಂದ ನಿವಾಸಿಗಳು ತೀವ್ರ ತೊಂದರೆ ಅನುಭವಿಸುತ್ತಿದ್ದು, ಸಮಸ್ಯೆಗಳನ್ನು ಕೂಡಲೇ ಪರಿಹರಿಸುವಂತೆ ಆಗ್ರಹಿಸಿ ಪುರಸಭೆ ಮುಖ್ಯಾಧಿಕಾರಿ ರವಿ ಬಾಗಲಕೋಟಿ ಅವರಿಗೆ ನಿವಾಸಿಗಳು ಮನವಿ ಸಲ್ಲಿಸಿದರು.

ಹೊಸ ಬಸ್ ನಿಲ್ದಾಣಕ್ಕೆ ಕೂಗಳತೆ ದೂರದಲ್ಲಿರುವ ಮುಖ್ಯ ನಗರ ಇದಾಗಿದ್ದು, ಈ ಲೇಔಟ್‌ನಲ್ಲಿ ಚರಂಡಿ ನೀರು ಸರಾಗವಾಗಿ ಹರಿದು ಹೋಗಲು ಸೂಕ್ತ ವ್ಯವಸ್ಥೆ ಇಲ್ಲದ ಕಾರಣ ಕೊಳಚೆ ನೀರು ಸಂಗ್ರಹವಾಗುತ್ತಿದೆ. ಅಲ್ಲದೆ, ಚರಂಡಿ ನೀರು ಬೋರ್‌ವೆಲ್‌ಗಳತ್ತ ಹರಿಯುತ್ತಿರುವುದರಿಂದ ಕುಡಿಯುವ ನೀರು ಕಲುಷಿತಗೊಳ್ಳುವ ಆತಂಕ ನಿವಾಸಿಗಳನ್ನು ಕಾಡುತ್ತಿದೆ. ಇದರಿಂದ ಸಾರ್ವಜನಿಕರ ಆರೋಗ್ಯದ ಮೇಲೂ ದುಷ್ಪರಿಣಾಮ ಬೀರುವ ಸಾಧ್ಯತೆ ಇದೆ ಎಂದು ನಿವಾಸಿಗಳು ಕಳವಳ ವ್ಯಕ್ತಪಡಿಸಿದ್ದಾರೆ.

ಇದರೊಂದಿಗೆ ಲೇಔಟ್‌ನ ರಸ್ತೆಗಳಿಗೆ ಅಗತ್ಯ ಸೌಲಭ್ಯಗಳಿಲ್ಲದೆ ಜನರು ಸಂಚರಿಸಲು ತೊಂದರೆ ಅನುಭವಿಸುತ್ತಿದ್ದಾರೆ. ವಿದ್ಯುತ್ ಕಂಬಗಳಲ್ಲಿನ ದೀಪಗಳು ಉರಿಯದ ಕಾರಣ ರಾತ್ರಿ ವೇಳೆ ಸಂಚಾರಕ್ಕೆ ತೊಂದರೆಯಾಗುತ್ತಿದ್ದು, ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ನಿವಾಸಿಗಳು ಒತ್ತಾಯಿಸಿದರು.

20 ದಿನದಲ್ಲಿ ಸಮಸ್ಯೆ ಪರಿಹರಿಸಲು ಗಡುವು:

ಭೀಮಾ ಲೇಔಟ್‌ನಲ್ಲಿರುವ ಗಟಾರ, ರಸ್ತೆ ಹಾಗೂ ವಿದ್ಯುತ್ ದೀಪಗಳ ಸಮಸ್ಯೆಗಳನ್ನು ಒಂದು ವಾರದೊಳಗೆ ಸಂಪೂರ್ಣವಾಗಿ ಸರಿಪಡಿಸಬೇಕು. ಇಲ್ಲವಾದಲ್ಲಿ ಪುರಸಭೆ ಎದುರು ಉಗ್ರ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದು ನಿವಾಸಿಗಳು ಎಚ್ಚರಿಕೆ ನೀಡಿದರು.

ನಿವಾಸಿಗಳಾದ ಸಿ.ವಿ. ಮತ್ತಿಗಟ್ಟಿ, ಡಾ. ಮಲ್ಲೇಶಪ್ಪ ಹರಿಜನ, ಬಸವರಾಜ ಸಂಶಿ, ಬಸವರಾಜ ಗೊಟಗೋಡಿ, ಗುರುಶಾಂತಪ್ಪ ಗುಂಜಳ, ಶಂಕ್ರಯ್ಯ ಪಾಟೀಲ, ಮಹದೇವಿ ಹಿರೇಮಠ, ವಿಜಯಾ ಕುಲಕರ್ಣಿ, ಮಂಜುನಾಥ ಮತ್ತಿಗಟ್ಟಿ, ಲತಾ ಹಿರೇಮಠ, ಲತಾ ಹೆಸರೂರ, ವಿ.ಸಿ. ಕೌಜಲಗಿ ಸೇರಿದಂತೆ ಉಳಿದ ನಿವಾಸಿಗಳು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ರೇಪ್‌ ಮಾಡಿದ್ದಕ್ಕಾಗಿ ಅಪಹರಣ ಮೂಲಕ ಪ್ರತೀಕಾರ
ಉತ್ತರ ಪಾಲಿಕೆಯಲ್ಲಿ 18 ಜಂಕ್ಷನ್‌ ಗುರುತು