ಭ್ರಷ್ಟಾಚಾರ ಹೆಚ್ಚಳಕ್ಕೆ ಕಾನೂನು ಅರಿವಿನ ಕೊರತೆಯೇ ಕಾರಣ: ರೇಣುಕಾದೇವಿ

KannadaprabhaNewsNetwork |  
Published : Jan 18, 2026, 02:00 AM IST
ಪೊಟೋ೧೭ಸಿಪಿಟಿ೨: ನಗರದ ಅನುಗ್ರಹ ಕನ್ವೆನ್ಷನ್ ಹಾಲ್‌ನಲ್ಲಿ ರಾಷ್ಟ್ರೀಯ ಭ್ರಷ್ಟಾಚಾರ ನಿರ್ಮೂಲನೆ ಹಾಗೂ ಕಾರ್ಯಚರಣೆ ಸಮಿತಿ ,ಇಂಡಿಯ ಆಯೋಜಿಸಿದ್ದ ಚನ್ನಪಟ್ಟಣ ತಾಲೂಕು ಘಟಕ ಉದ್ಘಾಟನೆ ಹಾಗೂ ಪದಾಧಿಕಾರಿಗಳ ಸಮಾವೇಶ ಮತ್ತು ಬೆಂಗಳೂರು ದಕ್ಷಿಣ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಕಾನೂನು ಅರಿವು ಕಾರ್ಯಕ್ರಮವನ್ನು ರೇಣುಕಾದೇವಿ ದೇಶಪಾಂಡೆ ಹಾಗೂ ಇತರರು ಉದ್ಘಾಟಿಸಿದರು. | Kannada Prabha

ಸಾರಾಂಶ

ಚನ್ನಪಟ್ಟಣ: ಕಾನೂನಿನ ಅರಿವಿನ ಕೊರತೆಯಿಂದ ಭ್ರಷ್ಟಾಚಾರ ಹೆಚ್ಚಳಗೊಳ್ಳುತ್ತಿದೆ. ಹೆಚ್ಚುತ್ತಿರುವ ಭ್ರಷ್ಟಾಚಾರ ಮುಕ್ತವಾಗಲು ಮೊದಲು ಗ್ರಾಹಕರು ಎಚ್ಚೆತ್ತುಕೊಳ್ಳಬೇಕು ಇಲ್ಲವಾದಲ್ಲಿ ಭ್ರಷ್ಟಾಚಾರ ನಿರ್ಮೂಲನೆ ಮಾಡುವುದು ಸಾಧ್ಯವಿಲ್ಲ ಎಂದು ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಆಯೋಗದ ಪ್ರಭಾರ ಅಧ್ಯಕ್ಷರಾದ ರೇಣುಕಾದೇವಿ ದೇಶಪಾಂಡೆ ತಿಳಿಸಿದರು.

ಚನ್ನಪಟ್ಟಣ: ಕಾನೂನಿನ ಅರಿವಿನ ಕೊರತೆಯಿಂದ ಭ್ರಷ್ಟಾಚಾರ ಹೆಚ್ಚಳಗೊಳ್ಳುತ್ತಿದೆ. ಹೆಚ್ಚುತ್ತಿರುವ ಭ್ರಷ್ಟಾಚಾರ ಮುಕ್ತವಾಗಲು ಮೊದಲು ಗ್ರಾಹಕರು ಎಚ್ಚೆತ್ತುಕೊಳ್ಳಬೇಕು ಇಲ್ಲವಾದಲ್ಲಿ ಭ್ರಷ್ಟಾಚಾರ ನಿರ್ಮೂಲನೆ ಮಾಡುವುದು ಸಾಧ್ಯವಿಲ್ಲ ಎಂದು ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಆಯೋಗದ ಪ್ರಭಾರ ಅಧ್ಯಕ್ಷರಾದ ರೇಣುಕಾದೇವಿ ದೇಶಪಾಂಡೆ ತಿಳಿಸಿದರು.

ನಗರದಲ್ಲಿ ರಾಷ್ಟ್ರೀಯ ಭ್ರಷ್ಟಾಚಾರ ನಿರ್ಮೂಲನೆ ಹಾಗೂ ಕಾರ್ಯಚರಣೆ ಸಮಿತಿ ಇಂಡಿಯ ಆಯೋಜಿಸಿದ್ದ ಚನ್ನಪಟ್ಟಣ ತಾಲೂಕು ಘಟಕ ಉದ್ಘಾಟನೆ ಹಾಗೂ ಪದಾಧಿಕಾರಿಗಳ ಸಮಾವೇಶ ಮತ್ತು ಬೆಂಗಳೂರು ದಕ್ಷಿಣ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಕಾನೂನು ಅರಿವು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಸಾರ್ವಜನಿಕರ ಕೆಲಸ ಕಾರ್ಯಗಳ ಅನುಕೂಲಕ್ಕಾಗಿ ಸರ್ಕಾರ ಸಾಕಷ್ಟು ಯೋಜನೆಗಳನ್ನು ರೂಪಿಸಿದೆ. ಆದರೆ ಸಾರ್ವಜನಿಕರು ಸ್ವಲ್ಪ ಶ್ರಮವಹಿಸಿ ಅವರವರ ಕೆಲಸ ಕಾರ್ಯಗಳನ್ನು ಅವರೇ ಮಾಡಿಕೊಂಡಲ್ಲಿ ಯಾವ ಇಲಾಖೆಯಲ್ಲಿಯು ಸಹ ದಲ್ಲಾಳಿಗಳು ಸೃಷ್ಟಿ ಆಗುವುದಿಲ್ಲ. ನಮ್ಮ ಕೆಲಸವನ್ನು ಸುಲಭ ಮಾಡಿಕೊಳ್ಳುವ ಸಲುವಾಗಿ ಲಂಚದ ಮೊರೆ ಹೋದಾಗ ನಮ್ಮಿಂದಲೇ ಭ್ರಷ್ಟಾಚಾರ ಪ್ರಾರಂಭವಾಗುತ್ತದೆ ಎಂದರು.

ಸಾರ್ವಜನಿಕವಾಗಿ ಗ್ರಾಹಕರಿಗೆ ತೊಂದರೆ ಆದಲ್ಲಿ ಆಯೋಗಕ್ಕೆ ದೂರು ನೀಡಿ ದೂರು ನೀಡಲು ಬರುವಾಗ ನೀವು ಖರಿದಿಸಿದ ಬಿಲ್ ತರುವುದು ಕಡ್ಡಾಯ. ಗ್ರಾಹಕರಿಗೆ ತೊಂದರೆ ಆದ ಸಂದರ್ಭದಲ್ಲಿ ಆಯೋಗದ ಮೂಲಕ ಕಾನೂನಿನ ಹೋರಾಟ ನಡೆಸಿ ನಿಮಗಾದ ಅನ್ಯಾಯಕ್ಕೆ ನ್ಯಾಯ ಪಡೆದುಕೊಳ್ಳಿ ಎಂದರು.

ಚನ್ನಪಟ್ಟಣ ತಾಲೂಕು ಘಟಕಕ್ಕೆ ಅಧ್ಯಕ್ಷರಾಗಿ ಆಯ್ಕೆಯಾದ ಸಿದ್ದರಾಮೇಗೌಡ ಮಾತನಾಡಿ, ಭ್ರಷ್ಟಾಚಾರ ಸಂಪೂರ್ಣವಾಗಿ ಮುಕ್ತಗೊಳಿಸುವುದು ಒಬ್ಬರಿಂದ ಸಾಧ್ಯವಿಲ್ಲ. ನೊಂದ ಗ್ರಾಹಕರು ಹಾಗೂ ಅಸಹಾಯಕ ಹೆಣ್ಣು ಮಕ್ಕಳಿಗೆ ನ್ಯಾಯ ಕೊಡಿಸುವ ಕೆಲಸ ಮಾಡುವ ಮೂಲಕ ಭ್ರಷ್ಟಾಚಾರ ಮುಕ್ತ ಮಾಡಲು ಎಲ್ಲರನ್ನೂ ಒಗ್ಗೂಡಿಸಿಕೊಂಡು ಕೆಲಸ ಮಾಡಬೇಕಿದೆ ಎಂದು ತಿಳಿಸಿದರು.

ತಾಲೂಕು ಘಟಕದ ಕಾರ್ಯಾಧ್ಯಕ್ಷರಾಗಿ ಮಳೂರು ಕಿರಣ್, ಉಪಾಧ್ಯಕ್ಷರಾಗಿ ತಿಮ್ಮಸಂದ್ರ ಪುಟ್ಟಸ್ವಾಮಿ, ಮೈಲಾನಾಯಕನಹಳ್ಳಿ ಜಗದೀಶ್, ಕಾರ್ಯದರ್ಶಿಯಾಗಿ ಮಂಗಾಡಹಳ್ಳಿ ಮುನಿ ಸಿದ್ದೇಗೌಡ, ಜಂಟಿ ಕಾರ್ಯದರ್ಶಿಗಳಾಗಿ ಸಂತೋಷ್, ರಮೇಶ್ ಆಯ್ಕೆಯಾದರು.

ಕಾರ್ಯಕ್ರಮದಲ್ಲಿ ಜಿಲ್ಲಾಧ್ಯಕ್ಷರಾದ ನಾಗಭೂಷಣ್, ರಾಮನಗರ ಘಟಕದ ಅಧ್ಯಕ್ಷ ಮುನಿರಾಜು, ಕನಕಪುರ ಘಟಕದ ಅಧ್ಯಕ್ಷ ಚಂದ್ರು, ಮುಖಂಡರಾದ ರಾಮಚಂದ್ರು, ದೊಡ್ಡೇಗೌಡ, ಸತೀಶ್, ಜಯಲಕ್ಷ್ಮಿ ಇತರರು ಇದ್ದರು.

ಪೊಟೋ೧೭ಸಿಪಿಟಿ೨:

ಚನ್ನಪಟ್ಟಣದಲ್ಲಿ ರಾಷ್ಟ್ರೀಯ ಭ್ರಷ್ಟಾಚಾರ ನಿರ್ಮೂಲನೆ ಹಾಗೂ ಕಾರ್ಯಚರಣೆ ಸಮಿತಿ ಆಯೋಜಿಸಿದ್ದ ತಾಲೂಕು ಘಟಕ ಉದ್ಘಾಟನೆ ಹಾಗೂ ಪದಾಧಿಕಾರಿಗಳ ಸಮಾವೇಶ ಮತ್ತು ಬೆಂಗಳೂರು ದಕ್ಷಿಣ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಕಾನೂನು ಅರಿವು ಕಾರ್ಯಕ್ರಮವನ್ನು ರೇಣುಕಾದೇವಿ ದೇಶಪಾಂಡೆ ಉದ್ಘಾಟಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಶ್ರೀಮಠದಲ್ಲಿ ಗುರುಶಾಂತವೀರ ಶ್ರೀಗಳ ಅಂತ್ಯಕ್ರಿಯೆ
ಸಿದ್ಧೇಶ್ವರ ಜಾತ್ರೆಯಲ್ಲಿ ಭಾರ ಎತ್ತುವ ಸ್ಪರ್ಧೆ