ಯುವ ಪೀಳಿಗೆ ಪೋಷಕಾಂಶಗಳ ಕೊರತೆ

KannadaprabhaNewsNetwork |  
Published : Apr 08, 2026, 04:00 AM IST
6ಬಜಜ8 | Kannada Prabha

ಸಾರಾಂಶ

ವಿಜಯಪುರ: ಇಂದಿನ ಕಾಲದಲ್ಲಿ ಮಕ್ಕಳಿಗೆ ಸಮರ್ಪಕವಾದ ಆಹಾರ ಪದ್ಧತಿ ಪಾಲಿಸುವುದು ಒಂದು ಸವಾಲಾಗಿದೆ. ಇಂದಿನ ಯುವ ಪೀಳಿಗೆ ಪೋಷಕಾಂಶಗಳ ಕೊರತೆಯಿಂದ ಬಳಲುತ್ತಿರುವುದು ಕಳವಳಕಾರಿ ಸಂಗತಿ ಎಂದು ಆರ್‌ಕೆಎಂ ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಶಂಭುಲಿಂಗಯ್ಯ ಕರ್ಪೂರಮಠ ಹೇಳಿದರು.

ವಿಜಯಪುರ: ಇಂದಿನ ಕಾಲದಲ್ಲಿ ಮಕ್ಕಳಿಗೆ ಸಮರ್ಪಕವಾದ ಆಹಾರ ಪದ್ಧತಿ ಪಾಲಿಸುವುದು ಒಂದು ಸವಾಲಾಗಿದೆ. ಇಂದಿನ ಯುವ ಪೀಳಿಗೆ ಪೋಷಕಾಂಶಗಳ ಕೊರತೆಯಿಂದ ಬಳಲುತ್ತಿರುವುದು ಕಳವಳಕಾರಿ ಸಂಗತಿ ಎಂದು ಆರ್‌ಕೆಎಂ ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಶಂಭುಲಿಂಗಯ್ಯ ಕರ್ಪೂರಮಠ ಹೇಳಿದರು.ನಗರದ ಆರ್‌ಕೆಎಂ ಹಾಸ್ಪಿಟಲ್ಸ್ ಹಾಗೂ ಆರ್‌ಕೆಎಂ ಆಯುರ್ವೇದ ವೈದ್ಯಕೀಯ ಮಹಾವಿದ್ಯಾಲಯದ ಕೌಮಾರಭೃತ್ಯ ವಿಭಾಗದ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಮಕ್ಕಳ ವೆಲ್‌ನೆಸ್ ಮತ್ತು ಮೌಲ್ಯ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದ ಅವರು, ತಾಯಂದಿರು ತಮ್ಮ ಮಕ್ಕಳ ಆರೋಗ್ಯದ ಕಡೆ ಹೆಚ್ಚು ಗಮನಹರಿಸಿ, ಮನೆಯಲ್ಲಿ ಸಿದ್ಧವಾಗುವ ಪೌಷ್ಟಿಕ ಆಹಾರವನ್ನು ನೀಡುವುದು ಅತ್ಯಂತ ಮುಖ್ಯವಾಗಿದೆ. ಆಯುರ್ವೇದವು ಮಕ್ಕಳ ಪೋಷಣೆಯಲ್ಲಿ ಮಹತ್ವದ ಪಾತ್ರವಹಿಸುತ್ತದೆ. ಮಕ್ಕಳ ಸಮಗ್ರ ಆರೋಗ್ಯ ಮತ್ತು ಮೌಲ್ಯಗಳನ್ನು ಬೆಳೆಸುವ ಉದ್ದೇಶದಿಂದ ಈ ಶಿಬಿರ ಹಮ್ಮಿಕೊಳ್ಳಲಾಗಿದೆ. ಇದಕ್ಕಾಗಿ ಆರ್‌ಕೆಎಂ ಪೋಷಣಾ ವಿಭಾಗವನ್ನು ಭೇಟಿ ಮಾಡುವಂತೆ ಸಲಹೆ ನೀಡಿದರು.ಮಹಾವಿದ್ಯಾಲಯದ ಪ್ರಾಚಾರ್ಯ ಡಾ.ನಂದಕುಮಾರ ರುದ್ರಗೌಡರ ಮಾತನಾಡಿ, ಮಕ್ಕಳ ದೈಹಿಕ ಮತ್ತು ಮಾನಸಿಕ ಅಭಿವೃದ್ಧಿಗೆ ಯೋಗ ಮಹತ್ವವಾಗಿದ್ದು, ಯೋಗದಿಂದ ಏಕಾಗ್ರತೆ ಹೆಚ್ಚಾಗಿ ಆರೋಗ್ಯಕರ ಜೀವನಶೈಲಿ ಬೆಳೆಸಬಹುದು. ಚಿಕ್ಕ ವಯಸ್ಸಿನಲ್ಲಿ ಮೊಬೈಲ್ ಫೋನ್‌ಗಳ ಅತಿಯಾದ ಬಳಕೆಯನ್ನು ತಪ್ಪಿಸಬೇಕು ಎಂದು ಎಚ್ಚರಿಸಿದರು.ಡಾ.ಸೌಮ್ಯ ಮಾತನಾಡಿ, ಏಳು ದಿನಗಳ ಶಿಬಿರದಲ್ಲಿ ಮಕ್ಕಳ ದೈಹಿಕ ಆರೋಗ್ಯ, ಮಾನಸಿಕ ಸ್ಥಿರತೆ, ನೈತಿಕ ಮೌಲ್ಯಗಳು ಹಾಗೂ ವ್ಯಕ್ತಿತ್ವ ವಿಕಸನಕ್ಕೆ ಸಂಬಂಧಿಸಿದ ಚಟುವಟಿಕೆಗಳನ್ನು ಹಮ್ಮಿಕೊಳ್ಳಲಾಗಿದೆ. ಈ ಶಿಬಿರವು ಮಕ್ಕಳಿಗೆ ಮನರಂಜನೆ ಜೊತೆಗೆ ಉತ್ತಮ ಅಭ್ಯಾಸಗಳು ಮತ್ತು ಜೀವನ ಮೌಲ್ಯಗಳನ್ನು ಬೆಳೆಸುವಲ್ಲಿ ಸಹಕಾರಿಯಾಗಲಿದೆ ಎಂದರು.ಈ ವೇಳೆ ಕೌಮಾರಭೃತ್ಯ ವಿಭಾಗದ ಮುಖ್ಯಸ್ಥ ಡಾ.ಪುರುಷೋತ್ತಮ ಉಕ್ಕಲಿ, ಸಹಾಯಕ ಪ್ರಾಧ್ಯಾಪಕಿ ಡಾ.ಸೌಮ್ಯಶ್ರೀ ಅಮಿತ, ಮೇಧಾ ಹಿರೇಮಠ ಉಪಸ್ಥಿತರಿದ್ದರು.

-----------6bij08: ಆರ್‌ಕೆಎಂ ಆಯುರ್ವೇದ ವೈದ್ಯಕೀಯ ಮಹಾವಿದ್ಯಾಲಯದಲ್ಲಿ ಮಕ್ಕಳ ವೆಲ್‌ನೆಸ್ ಮತ್ತು ಮೌಲ್ಯ ಶಿಬಿರ

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಪುಟ 2ಕ್ಕೆ ಬಾಟಮ್....ಗುರುವಂದನಾ, ಸ್ನೇಹ ಸಮ್ಮಿಲನ ಕಾರ್ಯಕ್ರಮ
3ನೇ ಪುಟಕ್ಕೆ ಬ್ರೀಪ್‌... ಗ್ರಾಮ ಒನ್ ಫ್ರಾಂಚೈಸಿಗೆ ಆನ್ ಲೈನ್ ಅರ್ಜಿ ಆಹ್ವಾನ