ಕನ್ನಡಪ್ರಭ ವಾರ್ತೆ ವಿಜಯಪುರ
ನಗರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಶಿಕ್ಷಣ ಅಧ್ಯಯನ ವಿಭಾಗದಲ್ಲಿ ಈಚೆಗೆ ಆಹಾರ ಮತ್ತು ಪೌಷ್ಟಿಕತೆ ಕುರಿತು ವಿಶೇಷ ಉಪನ್ಯಾಸದಲ್ಲಿ ಅವರು ಮಾತನಾಡಿದರು.
ಶಿಕ್ಷಕರು ಕೇವಲ ಬೋಧನೆಗೆ ಮಾತ್ರ ಸೀಮಿತರಾಗಿಲ್ಲ. ಅವರು ತಮ್ಮ ವೃತ್ತಿಯ ಜೊತೆಗೆ ಸಮುದಾಯಕ್ಕೆ ಆರೋಗ್ಯ, ಆಹಾರ ಹಾಗೂ ಸ್ವಾಸ್ಥ್ಯದ ಕುರಿತು ಅರಿವು ಮೂಡಿಸಬೇಕು. ಗ್ರಾಮೀಣ ಜನರಲ್ಲಿ ಆಹಾರ ಮತ್ತು ಪೌಷ್ಟಿಕತೆಯ ಅರಿವಿನ ಕೊರತೆಯಿದೆ ಅದನ್ನು ಸರಿ ಪಡಿಸುವವರೆಗೂ ಸಮುದಾಯದ ಸುಸ್ಥಿರ ಅಭಿವೃದ್ಧಿ ಸಾಧ್ಯವಿಲ್ಲ ಎಂದು ತಿಳಿಸಿದರು.ಶಾಲಾ ಮಟ್ಟದ ಶಿಕ್ಷಣದಿಂದಲೇ ಇದರ ಕುರಿತು ಚಟುವಟಿಕೆಗಳನ್ನು ರೂಪಿಸಬೇಕಾಗಿದೆ. ಇದರಿಂದ ಉತ್ತಮ ಆರೋಗ್ಯ ಹೊಂದುವ ಮೂಲಕ ಮಕ್ಕಳ ಸಮಾಜಕ್ಕೆ ಉಪಯೋಗಿಯಾಗಬಲ್ಲರು ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ವಿಶ್ವವಿದ್ಯಾನಿಲಯದ ವಿವಿಧ ವಿಭಾಗಗಳ ಪ್ರಾಧ್ಯಾಪಕ ಪ್ರೊ.ಯು.ಕೆ.ಕುಲಕರ್ಣಿ, ಪ್ರೊ.ಅಶೋಕಕುಮಾರ ಸುರಪುರ, ಡಾ. ಪ್ರಕಾಶ ಸಣ್ಣಕ್ಕನವರ, ಡಾ. ಭಾರತಿ ಗಾಣಿಗೇರ, ಡಾ. ರೂಪಾ ನಾಯ್ಕೊಡಿ ಭಾಗವಹಿಸಿದ್ದರು.