ಕನ್ನಡಪ್ರಭ ವಾರ್ತೆ ಮದ್ದೂರು
ಪಟ್ಟಣದ ಮಹಿಳಾ ಸರ್ಕಾರಿ ಕಾಲೇಜಿನಲ್ಲಿ ಮಂಡ್ಯದಲ್ಲಿ ನಡೆಯುವ 87ನೇ ಅಖಿಲ ಭಾರತ ಸಾಹಿತ್ಯ ಸಮ್ಮೇಳನದ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿ, ಮಂಡ್ಯ ಜಿಲ್ಲೆಯಲ್ಲಿ ಕೀರ್ತಿಶೇಷರಾದ ಎಚ್.ಕೆ. ವೀರಣ್ಣಗೌಡ. ಕೆ.ವಿ. ಶಂಕರೇಗೌಡ. ಎಸ್.ಸಿ.ಮಲ್ಲಯ್ಯ, ಎಸ್.ಎಂ. ಕೃಷ್ಣ. ಅಂಬರೀಶ್. ಸಜ್ಜನ ರಾಜಕಾರಣದ ಮೂಲಕ ಜಿಲ್ಲೆಗೆ ಮೌಲ್ಯಗಳನ್ನು ತಂದು ಕೊಟ್ಟಿದ್ದರು. ತಮ್ಮ ಅಭಿವೃದ್ಧಿ ಕಾರ್ಯಗಳಿಂದ ಜಿಲ್ಲೆಗೆ ಮೆರುಗನ್ನು ತಂದುಕೊಟ್ಟಿದ್ದರು. ಅಲ್ಲದೆ ಈ ಎಲ್ಲರೂ ಅಭಿವೃದ್ಧಿಪರವಾದ ಚಿಂತನೆ ಹೊಂದಿದ್ದರು. ಈಗ ಜಿಲ್ಲೆಯಲ್ಲಿ ಅಭಿವೃದ್ಧಿ ಪರ ಚಿಂತಿಸುವ ರಾಜಕಾರಣಿ ಇಲ್ಲದ ಕಾರಣ ಅಭಿವೃದ್ಧಿ ಕೆಲಸ ಸಮರ್ಪಕವಾಗಿ ನಡೆಯುತ್ತಿಲ್ಲ ಎಂದು ತಿಳಿಸಿದರು.
ಮಂಡ್ಯದಲ್ಲಿ ಡಿಸೆಂಬರ್ ತಿಂಗಳಲ್ಲಿ ನಡೆಯುವ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಜಿಲ್ಲೆಯ ಜನರು ಅರ್ಥಪೂರ್ಣವಾಗಿ ಆಚರಿಸುವ ಮೂಲಕ ಕನ್ನಡ ಭಾಷೆ ಪ್ರತಿ ಮನೆ ಮನೆಯ ಜನರ ಹೃದಯದ ಅಂತರಾಳಕ್ಕೆ ತಲುಪಲಿದೆ ಎಂದು ಹೇಳಿದರು.ಭರದ ಸಿದ್ಧತೆ: ಜಿಲ್ಲಾ ಕಾರ್ಯಕಾರಿ ಸಮಿತಿ ಸಂಚಾಲಕಿ ಮೀರಾ ಶಿವಲಿಂಗಯ್ಯ ಮಾತನಾಡಿ, ಸಮ್ಮೇಳನಕ್ಕೆ ಎಲ್ಲಾ ರೀತಿಯ ಸಿದ್ಧತೆಗಳು ಭರದಿಂದ ಸಾಗುತ್ತಿವೆ. ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಮೆರುಗು ನೀಡಬೇಕು ಎಂದು ಮನವಿ ಮಾಡಿದರು.