ಯಳಂದೂರು, ಶಾಸಕ ಎ.ಆರ್. ಕೃಷ್ಣಮೂರ್ತಿಯಳಂದೂರು: ತಾಲೂಕಿನಲ್ಲಿ ಕ್ರೀಡಾಂಗಣ ನಿರ್ಮಾಣಕ್ಕೆ ಸರ್ಕಾರವು ಅನುದಾನ ನೀಡಲು ಮುಂದಾಗಿದ್ದು, ತಾಲೂಕಿನಲ್ಲಿ ವಿವಿಧ ಕಡೆಗಳಲ್ಲಿ ಸ್ಥಳಗಳನ್ನು ಪರಿಶೀಲನೆ ಮಾಡಿ, ಕ್ರೀಡಾಂಗಣ ನಿರ್ಮಾಣಕ್ಕೆ ಜಾಗವನ್ನು ನಿಗದಿಪಡಿಸಲಾಗುವುದು ಎಂದು ಶಾಸಕ ಎ.ಆರ್.ಕೃಷ್ಣಮೂರ್ತಿ ತಿಳಿಸಿದರು.ಪಟ್ಟಣ ಪಬ್ಲಿಕ್ ಶಾಲೆ ಆವರಣದಲ್ಲಿ ಕ್ರೀಡಾಂಗಣ ನಿರ್ಮಾಣಕ್ಕೆ ಸ್ಥಳ ಪರಿಶೀಲಿಸಿ ಮಾತನಾಡಿದರು. ತಾಲೂಕಿನಲ್ಲಿ ಹಲವು ವರ್ಷಗಳಿಂದ ಕ್ರೀಡಾಂಗಣವಿಲ್ಲದೇ ಕ್ರೀಡಾ ಚಟುವಟಿಕೆಗಳು ಕುಟುಂತಗೊಂಡಿದೆ. ವಿದ್ಯಾರ್ಥಿಗಳು, ಕ್ರೀಡಾಪಟುಗಳಿಗೆ ತೊಂದರೆಯಾಗಿದ್ದು, ಈ ಬಗ್ಗೆ ವಿಧಾನ ಸಭೆಯ ಅಧಿವೇಶನದಲ್ಲಿ ಚರ್ಚಿಸಲಾಯಿತು. ಸರ್ಕಾರದಿಂದ ಕ್ರೀಡಾಂಗಣ ನಿರ್ಮಾಣಕ್ಕೆ ಉತ್ತಮ ಸ್ಪಂದನೆ ಸಿಕ್ಕಿದೆ ಎಂದರು.
ಪಬ್ಲಿಕ್ ಶಾಲೆಯ ಆವರಣದಲ್ಲಿ ಪದವಿ, ಪಿಯುಸಿ, ಪ್ರೌಢಶಾಲೆ , ಪ್ರಾಥಮಿಕ ಶಾಲೆಯ ಸೇರಿದಂತೆ ಸಾವಿರಾರು ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದು, ಕ್ರೀಡಾಗಣ ನಿರ್ಮಿಸಿದರೆ ವಿದ್ಯಾರ್ಥಿಗಳಿಗೆ ಹೆಚ್ಚಿನ ಅನುಕೂಲವಾಗುತ್ತದೆ. ಆದರೆ ಈ ಜಾಗವು ವಿಶಾಲವಾದ ಕ್ರೀಡಾಂಗಣ ನಿರ್ಮಾಣಕ್ಕೆ ಸ್ಥಳಾವಕಾಶ ಕೊರತೆಯಿದೆ. ಆದರೆ ಪಕ್ಕದಲ್ಲಿ ಖಾಸಗಿ ವ್ಯಕ್ತಿಯಾಬ್ಬರ ಜಮೀನು ಇದ್ದು, ಈ ಸ್ಥಳವನ್ನು ಸರ್ಕಾರದ ವತಿಯಿಂದ ಖರೀದಿಸಲು ಪ್ರಯತ್ನ ಮಾಡಲಾಗುವುದು. ಸದ್ಯದಲ್ಲೇ ಪಟ್ಟಣ ಹೃದಯ ಭಾಗದಲ್ಲಿ ಕ್ರೀಡಾಂಗಣ ನಿರ್ಮಾಣ ಮಾಡಲು ಕ್ರಮವಹಿಸಲಾಗುವುದು ಎಂದು ತಿಳಿಸಿದರು. ಈ ಬಗ್ಗೆ ಉಪವಿಭಾಗಧಿಕಾರಿ ಹಾಗೂ ತಹಸೀಲ್ದಾರ್ ಭೇಟಿ ನೀಡಿ ಜಮೀನು ಮಾಲೀಕರಿಗೆ ಮನವರಿಕೆ ಮಾಡಿ ಸರ್ಕಾರದಿಂದ ಜಾಗವನ್ನು ಖದೀದಿಸುವಂತೆ ಕ್ರಮವಹಿಸಬೇಕೆಂದು ಡಿಸಿ ಸೂಚಿಸಿದರು.ಅಪರ ಜಿಲ್ಲಾಧಿಕಾರಿ ಗೀತಾ ಹುಡೇದ್, ಉಪವಿಭಾಗಧಿಕಾರಿ ಮಹೇಶ್, ತಹಸೀಲ್ದಾರ್ ಜಯಪ್ರಕಾಶ್, ಕ್ರೀಡಾ ಅಧಿಕಾರಿ ಚಿನ್ನಸ್ವಾಮಿ, ಜಿಲ್ಲಾ ಗ್ಯಾರಂಟಿ ಯೋಜನೆ ಪ್ರಾಧಿಕಾರದ ಅಧ್ಯಕ್ಷ ಎಚ್.ವಿ.ಚಂದ್ರು, ನಿರ್ದೇಶಕ ಪ್ರಭುಪ್ರಸಾದ್, ಮುಖಂಡ ಕಂದಹಳ್ಳಿ ನಂಜುಂಡಸ್ವಾಮಿ, ಶಾಸಕರ ಆಪ್ತ ಕಾರ್ಯದರ್ಶಿ ಹೊಂಗನೂರು ಚೇತನ್ ಹಾಜರಿದ್ದರು.ಜಮೀನಿಗೆ ಖಾಸಗಿ ವ್ಯಕ್ತಿ ಮನವೊಲಿಸಲು ಮುಂದಾದ ಡೀಸಿ: ಸ್ಥಳದಲ್ಲಿ ಜಮೀನು ಮಾಲೀಕ ಮಣಿಗೆ ದೂರವಾಣಿ ಕರೆ ಮಾಡಿದ ಜಿಲ್ಲಾಧಿಕಾರಿ ಶಿಲ್ಪಾನಾಗ್ ಮಾತನಾಡಿ, ಪಬ್ಲಿಕ್ ಶಾಲೆ ಆವರಣದಲ್ಲಿ ಕ್ರೀಡಾಂಗಣ ನಿರ್ಮಾಣ ಮಾಡಲು ಸರ್ಕಾರದ ಜಾಗ ಸಾಲುತ್ತಿಲ್ಲ. ಶಾಲೆಯ ಪಕ್ಕದಲ್ಲಿ ನಿಮ್ಮ ಜಮೀನು ನೀಡಿದರೆ ಸುಸಜ್ಜಿತ ಕ್ರೀಡಾಂಗಣ, ಶೈಕ್ಷಣಿಕ ಚಟುವಟಿಕೆಗಳಿಗೆ ಅನುಕೂಲವಾಗುವಂತೆ ಸರ್ಕಾರದ ಅನುದಾನವನ್ನು ಪಡೆದು ನಿಮ್ಮ ಜಮೀನನ್ನು ಶೈಕ್ಷಣಿಕ ಕಾರ್ಯಗಳಗೆ ಬಿಟ್ಟುಕೊಟ್ಟು ಜಿಲ್ಲಾ ಆಡಳಿತ ಜೊತೆಗೆ ಕೈ ಜೋಡಿಸಬೇಕೆಂದು ಮನವಿ ಮಾಡಿದರು.