ಧಾರವಾಡ:
ಕಲಘಟಗಿ ತಾಲೂಕಿನ ಪಟ್ಟಣ ಪಂಚಾಯ್ತಿ ಎದುರು ನಡೆದ ಕಾರ್ಯಕ್ರಮದಲ್ಲಿ ಸಾಮಾನ್ಯ ಜನರ ಬದುಕಿನಲ್ಲಿ ನೇರ ಬದಲಾವಣೆ ತರುವ ಉದ್ದೇಶದಿಂದ ಜಾರಿಗೊಂಡ ಈ ಯೋಜನೆಗಳು ಗ್ರಾಮೀಣ ಹಾಗೂ ನಗರ ಪ್ರದೇಶಗಳಲ್ಲೂ ವ್ಯಾಪಕ ಪರಿಣಾಮ ಬೀರಿವೆ ಎಂದರು.
ಕ್ಷೇತ್ರ ಪ್ರಚಾರ ವಾಹನವು ಜಿಲ್ಲೆಯಾದ್ಯಂತ ಒಟ್ಟು 20 ಹಳ್ಳಿಗಳಲ್ಲಿ ಸಂಚರಿಸಿ, ಪಂಚ ಗ್ಯಾರಂಟಿ ಯೋಜನೆಗಳ ಮಾಹಿತಿ ತಲುಪಿಸಲಿದೆ. ಕ್ಷೇತ್ರ ಪ್ರಚಾರ ವಾಹನದ ಮೂಲಕ ಮನೆ-ಮನೆಗೆ ತೆರಳಿ ಎಲ್ಲ ಜನರಿಗೂ ಮನ ಮುಟ್ಟುವಂತೆ ಪ್ರಚಾರ ಮಾಡಬೇಕು ಎಂದ ಅವರು, ₹ 3485.02 ಕೋಟಿಯನ್ನು ಗ್ಯಾರಂಟಿ ಯೋಜನೆಗಳಡಿ ಜಿಲ್ಲೆಯಲ್ಲಿ ವೆಚ್ಚ ಮಾಡಲಾಗಿದೆ ಎಂದು ಸಚಿವರು ಅಂಕಿ ಸಮೇತ ಮಾಹಿತಿ ನೀಡಿದರು.ಕ್ಷೇತ್ರ ಪ್ರಚಾರ ವಾಹನದೊಂದಿಗೆ ಕುಂದಗೋಳ ತಾಲೂಕಿನ ಹರ್ಲಾಪೂರ ಗ್ರಾಮದ ಶ್ರೀಸ್ವಾಮಿ ವಿವೇಕಾನಂದ ಜಾನಪದ ಕಲಾತಂಡದ ನಾಯಕರಾದ ದಾವಲಸಾಬ ದೊಡ್ಡಮನಿ ನೇತೃತ್ವದಲ್ಲಿ ಪ್ರಕಾಶ ಮಡಿವಾಳರ, ರಮೇಶ ಸಜ್ಜಗಾರ, ಗೂಳಪ್ಪ ದುರ್ಗಣ್ಣವರ, ನೌಶಾದ ಬೆಂತೂರ ಐದು ಗ್ಯಾರಂಟಿ ಯೋಜನೆಗಳ ಕುರಿತು ಜನಪದ ಹಾಡುಗಳು ಹಾಗೂ ಬೀದಿ ನಾಟಕಗಳ ಮುಖಾಂತರ ಜನರಲ್ಲಿ ಜಾಗೃತಿ ಕಾರ್ಯಕ್ರಮ ನೀಡಿದರು.
ಗ್ಯಾರಂಟಿ ಯೋಜನೆಗಳ ಅಧ್ಯಕ್ಷ ಶಾನಪ್ಪಗೌಡ ಪಾಟೀಲ ಮಾತನಾಡಿದರು. ವಾರ್ತಾ ಇಲಾಖೆಯ ಪ್ರಭಾರ ಸಹಾಯಕ ನಿರ್ದೇಶಕ ಡಾ. ಸುರೇಶ ಹಿರೇಮಠ ಸ್ವಾಗತಿಸಿದರು. ಮನೋಜ ಮಸನಿ ವಂದಿಸಿದರು.