ಧಾರವಾಡ: ಪಡಿತರ ಚೀಟಿ ರೀತಿಯಲ್ಲೇ ರೈತರಿಗೆ ರಸಗೊಬ್ಬರ ಚೀಟಿ ವಿತರಿಸಲು ಕ್ರಮ ಕೈಗೊಳ್ಳುವಂತೆ ಕಾರ್ಮಿಕ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಲಾಡ್ ಸಲಹೆ ನೀಡಿದ್ದಾರೆ.
ಕೃಷಿ ವಿಶ್ವವಿದ್ಯಾಲಯವು ವಿವಿಧ ಬೆಳೆಗಳಿಗೆ ಸಂಬಂಧಿಸಿದ ಹಲವು ಸಂಶೋಧನೆಗಳನ್ನು ನಡೆಸುತ್ತಿದೆ. ಗ್ರಾಮಗಳಲ್ಲಿರುವ ರೈತರಿಗೆ ಅನುಕೂಲವಾಗುವಂತೆ ಪ್ರತಿ ರೈತರ ಸರ್ವೇ ನಂಬರ್‌ವಾರು ಬೆಳೆಗಳನ್ನು ಬೆಳೆಯಲು ಸೂಕ್ತ ಅಧ್ಯಯನ ನಡೆಸಿ ಶಿಫಾರಸು ಮಾಡುವುದು ಅನಿವಾರ್ಯ. ಇದರಿಂದ ರೈತರ ಬೇಡಿಕೆಗಳಾದ ಬಿತ್ತನೆ ಬೀಜ ಮತ್ತು ರಸಗೊಬ್ಬರಗಳ ಅನುಪಾತವನ್ನು ಸರಿದೂಗಿಸಲು ಸಹಾಯವಾಗಲಿದೆ.
ರಸಗೊಬ್ಬರ ಚೀಟಿಯಲ್ಲಿ ಹಲವು ಅಂಶಗಳು ಒಳಗೊಂಡಿರಬೇಕು. ರೈತರ ಸರ್ವೇ ನಂಬರ್, ಜಮೀನಿನ ಮಣ್ಣಿನ ಫಲವತ್ತತೆಯ ಪರೀಕ್ಷಾ ವರದಿ, ಪರೀಕ್ಷಾ ವರದಿಯ ಅನುಗುಣವಾಗಿ ಬೆಳೆಯ ಬೇಕಾದ ಬೆಳೆ, ಶಿಫಾರಸು ಮಾಡಿದ ಬೆಳೆಗೆ ಬೇಕಾದ ಬಿತ್ತನೆ ಬೀಜಗಳು ಹಾಗೂ ರಸಗೊಬ್ಬರದ ವಿವರ ಹಾಗೂ ಶಿಫಾರಸಿಗೆ ಅನುಗುಣವಾಗಿ ಬಿತ್ತನೆ ಬೀಜಗಳು ಹಾಗೂ ರಸಗೊಬ್ಬರ ವಿವರಣೆ ಇರಬೇಕು ಎಂದಿದ್ದಾರೆ.ಅನುಕೂಲಗಳು ಏನು: ಈ ಎಲ್ಲ ಅಂಶಗಳನ್ನು ಗಮನದಲ್ಲಿಟ್ಟುಕೊಂಡು ರಸಗೊಬ್ಬರ ವಿತರಿಸಲು ಕ್ರಮ ಕೈಗೊಳ್ಳುವುದರಿಂದ ಬಿತ್ತನೆಗೆ ಬೇಕಾದ ಬೀಜ, ರಸಗೊಬ್ಬರದ ಕೊರತೆ ಉಂಟಾಗುವುದಿಲ್ಲ. ಈ ಸಂಬಂಧ ಕೃಷಿ ವಿಶ್ವವಿದ್ಯಾಲಯ ಹಾಗೂ ಕೃಷಿ ಇಲಾಖೆ ಸಹಯೋಗದಲ್ಲಿ ಜಿಲ್ಲೆಯ ಒಂದು ತಾಲೂಕಿನಲ್ಲಿ ಒಂದು ಹೋಬಳಿಯಲ್ಲಿ ಪ್ರಾಯೋಗಿಕವಾಗಿ ಈ ವಿಧಾನ ಅನುಸರಿಸಲು ಎಲ್ಲ ಅಗತ್ಯ ಕ್ರಮ ಕೈಗೊಳ್ಳುವಂತೆ ಪತ್ರದಲ್ಲಿ ತಿಳಿಸಿದ್ದಾರೆ.
ಧಾರವಾಡ:
ರಾಜ್ಯದಲ್ಲಿ 2015ರಲ್ಲಿ ನಡೆದ ಸಮೀಕ್ಷೆ ಪ್ರಕಾರ, ಹಿಂದುಳಿದ ವರ್ಗಗಳ ಸಂಖ್ಯೆ ಸುಮಾರು ಶೇ. 70ರಷ್ಟು (5.42 ಕೋಟಿ) ಇದ್ದು, ಒಬಿಸಿ ವರ್ಗದ ವ್ಯಾಪ್ತಿಯಲ್ಲಿ 1880 ಜಾತಿ ಮತ್ತು ಉಪಜಾತಿಗಳಿವೆ. ಈ ವರ್ಗದ ಉದಯೋನ್ಮುಖ ಯುವ ಕೈಗಾರಿಕೋದ್ಯಮಿಗಳನ್ನು ಪ್ರೋತ್ಸಾಹಿಸಲು ಮೀಸಲಾದ ಯಾವುದೇ ಪ್ರತ್ಯೇಕ ಬಂಡವಾಳ, ಅನುದಾನ ವ್ಯವಸ್ಥೆ ಇಲ್ಲ. ಈ ವರ್ಗದ ಯುವ ಉದ್ಯಮಿಗಳ ಕೈಗಾರಿಕೆ ಸ್ಥಾಪನೆ ವಲಯದಿಂದ ದೂರ ಉಳಿಯುತ್ತಿದ್ದಾರೆ. ಹಾಗಾಗಿ, ಇವರಿಗೆ ಅನುಕೂಲವಾಗಲು ಸರ್ಕಾರದ ಹಂತದಲ್ಲಿ ಒಂದು ನಿಧಿ ಸ್ಥಾಪಿಸುವುದು ಅನಿವಾರ್ಯ. ಈ ಸಂಬಂಧ ನೀತಿ ರೂಪಿಸುವಂತೆ ಸಂಬಂಧಪಟ್ಟವರಿಗೆ ಸೂಕ್ತ ನಿರ್ದೇಶನವನ್ನು ನೀಡಲು ಕೋರಿದ್ದಾರೆ.
ಈ ಪ್ರತ್ಯೇಕ ನಿಧಿಯಿಂದ, ಸರ್ಕಾರ ಮತ್ತು ಖಾಸಗಿ ವಲಯದ ಹೂಡಿಕೆದಾರರು ಅಂತಿಮಗೊಳಿಸುವ ಯುವ ಹಿಂದುಳಿದ ವರ್ಗಗಗಳಿಗೆ ನವೋದ್ಯಮಗಳನ್ನು ಆರಂಭಿಸಲು ಅನುದಾನ ಒದಗಿಸಬಹುದು. ಇದರಿಂದ ರಾಜ್ಯದ ಆರ್ಥಿಕ ಅಭಿವೃದ್ಧಿಗೆ ಕೊಡುಗೆ ನೀಡಲಿದ್ದಾರೆ ಎಂಬ ಆಶಾಭಾವನೆಯನ್ನು ಸಚಿವರು ವ್ಯಕ್ತಪಡಿಸಿದ್ದಾರೆ.