ಶಿಗ್ಗಾಂವಿ: ಪುರಾತನ ಕೆರೆಗಳನ್ನು ಪುನಶ್ಚೇತನಗೊಳಿಸುವುದು ಹಾಗೂ ಅವುಗಳ ರಕ್ಷಣೆ ಮಾಡುವುದು ಎಲ್ಲರ ಹೊಣೆಯಾಗಿದೆ. ಕೆರೆಗಳು ಗ್ರಾಮೀಣ ಜನರ ಜೀವನಾಡಿಯಾಗಿದ್ದು, ಅವುಗಳಿಂದ ಅಂತರ್ಜಲ ಹೆಚ್ಚಿಸಲು ಸಹಕಾರಿಯಾಗಿವೆ ಎಂದು ಶಾಸಕ ಯಾಸೀರ್ ಅಹ್ಮದಖಾನ್ ಪಠಾಣ ತಿಳಿಸಿದರು.ತಾಲೂಕಿನ ಅತ್ತಿಗೇರಿ ಗ್ರಾಮದಲ್ಲಿ ಇತ್ತೀಚೆಗೆ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಘ, ಗ್ರಾಮ ಪಂಚಾಯಿತಿ ಹಾಗೂ ನಾಯಕನಕೆರೆ ಅಭಿವೃದ್ಧಿ ಸಮಿತಿ ಸಹಯೋಗದಲ್ಲಿ ನಡೆದ ನಮ್ಮೂರು- ನಮ್ಮ ಕೆರೆ ಯೋಜನೆಯಡಿ ಕೆರೆ ಪುನಶ್ಚೇತನ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿ ಮಾತನಾಡಿದರು.ಭಾರತ ಕೃಷಿ ಪ್ರಧಾನ ದೇಶವಾಗಿದ್ದು, ಶೇ. ೭೦ರಷ್ಟು ಜನ ಕೃಷಿ ಅವಲಂಬಿತರಾಗಿದ್ದಾರೆ. ಕೃಷಿ ಕ್ಷೇತ್ರ ಬೆಳೆದರೆ ಮಾತ್ರ ಇತರ ಎಲ್ಲ ರಂಗಗಳು ಬೆಳವಣಿಗೆ ಹೊಂದಲು ಸಾಧ್ಯ. ಹೀಗಾಗಿ ಕೃಷಿ ಕೇತ್ರಕ್ಕೆ ಹೆಚ್ಚಿನ ಆದ್ಯತೆ ನೀಡುವ ಮೂಲಕ ರೈತರು ಆರ್ಥಿಕ ಅಭಿವೃದ್ಧಿಗೆ ಪ್ರೋತ್ಸಾಹಿಸಬೇಕು ಎಂದರು.ನಾಯಕನಕೆರೆ ಅಭಿವೃದ್ಧಿ ಸಮಿತಿ ಅಧ್ಯಕ್ಷ ಶೇಖರಗೌಡ ಪಾಟೀಲ ಅಧ್ಯಕ್ಷತೆ ವಹಿಸಿದ್ದರು. ಉಪಾಧ್ಯಕ್ಷ ಮಲ್ಲಿಕಾರ್ಜುನಗೌಡ ಪಾಟೀಲ, ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಘದ ನಿರ್ದೇಶಕ ಶಿವಾನಂದ ಆಚಾರ್ಯ, ಶಿವರಾಯ ಪ್ರಭು, ತಾಲೂಕು ಯೋಜನಾಧಿಕಾರಿ ಉಮಾ ನಾಗರಾಜ, ಗ್ರಾಮ ಪಂಚಾಯಿತಿ ಅಧ್ಯಕ್ಷ ಅಬ್ದುಲ್‌ಸಾಬ್ ತೋಟದ ಉಪಾಧ್ಯಕ್ಷೆ ಗೀತಾ ಮಂಡಿಗನಾಳ, ಪಿಡಿಒ ರವಿ ಗಾಣಿಗೇರ, ನಿಂಗಣ್ಣ ಜವಳಿ, ಎಸ್.ಎಫ್. ಮಣಕಟ್ಟಿ, ಗುಡ್ಡಪ್ಪ ಜಲದಿ ಸೇರಿದಂತೆ ಗ್ರಾಮ ಪಂಚಾಯಿತಿ ಹಾಗೂ ನಾಯಕನ ಕೆರೆ ಅಭಿವೃದ್ಧಿ ಸಮಿತಿ ಪದಾಧಿಕಾರಿಗಳು ಇದ್ದರು.ಕುರುಬಗೊಂಡದ ಪ್ರಾಥಮಿಕ ಕೃಷಿ ಸಹಕಾರಿ ಸಂಘದ ಅಮೃತ ಮಹೋತ್ಸವ ಇಂದು
ಹಾವೇರಿ: ತಾಲೂಕಿನ ಕುರುಬಗೊಂಡ ಗ್ರಾಮದ ರಂಗಮಂದಿರದಲ್ಲಿ ಮಾ. 8ರಂದು ಬೆಳಗ್ಗೆ 11ಕ್ಕೆ ಕುರಬಗೊಂಡ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರಿ ಸಂಘದ 75ನೇ ವರ್ಷದ ಅಮೃತ ಮಹೋತ್ಸವ ಕಾರ್ಯಕ್ರಮ ನಡೆಯಲಿದೆ ಎಂದು ಸಹಕಾರಿ ಸಂಘದ ಅಧ್ಯಕ್ಷ ರೇವಣಸಿದ್ದಪ್ಪ ಹಾವೇರಿ ತಿಳಿಸಿದರು.ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಅಮೃತ ಮಹೋತ್ಸವ ಕಾರ್ಯಕ್ರಮದಲ್ಲಿ ಧಾರವಾಡ ಮುರುಘಾಮಠದ ಡಾ. ಮಲ್ಲಿಕಾರ್ಜುನ ಸ್ವಾಮೀಜಿ, ತಿಪ್ಪಾಯಿಕೊಪ್ಪದ ಗುರು ಮೂಕಪ್ಪ ಶಿವಯೋಗಿಗಳ ಮಠದ ಮಹಾಂತ ಶ್ರೀಗಳು ಹಾಗೂ ಕುರುಬಗೊಂಡದ ಪಂ. ವೀರಭದ್ರಯ್ಯ ಶಾಸ್ತ್ರಿಗಳು ಸಾನ್ನಿಧ್ಯ ವಹಿಸಲಿದ್ದಾರೆ. ಸಹಕಾರ ಸಚಿವ ಕೆ.ಎನ್. ರಾಜಣ್ಣ ಕಾರ್ಯಕ್ರಮ ಉದ್ಘಾಟಿಸುವರು. ರಾಜ್ಯ ಅರಣ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಹಾಗೂ ಶಾಸಕ ಬಸವರಾಜ ಶಿವಣ್ಣನವರ ಸಂಸ್ಥಾಪಕರ ಶಿಲಾನ್ಯಾಸ ನೆರವೇರಿಸಲಿದ್ದಾರೆ ಎಂದರು.ಕಾರ್ಯಕ್ರಮದಲ್ಲಿ ಗೌರವಾನ್ವಿತ ಉಪಸ್ಥಿತರಾಗಿ ಜಿಲ್ಲಾ ಉಸ್ತುವಾರಿ ಸಚಿವ ಶಿವಾನಂದ ಪಾಟೀಲ ಪಾಲ್ಗೊಳ್ಳುವರು. ಸಂಸದ ಬಸವರಾಜ ಬೊಮ್ಮಾಯಿ, ವಿಧಾನಸಭೆ ಉಪಸಭಾಧ್ಯಕ್ಷ, ಶಾಸಕ ರುದ್ರಪ್ಪ ಲಮಾಣಿ, ವಿಧಾನ ಪರಿಷತ್ ಮುಖ್ಯ ಸಚೇತಕ ಸಲೀಂ ಅಹ್ಮದ್, ಮಾಜಿ ಶಾಸಕ ವಿರುಪಾಕ್ಷಪ್ಪ ಬಳ್ಳಾರಿ, ಧಾರವಾಡ ಕೆಸಿಸಿ ಬ್ಯಾಂಕ್ ನಿರ್ದೇಶಕ ಕೊಟ್ರೇಶಪ್ಪ ಬಸೇಗಣ್ಣಿ ಭಾಗವಹಿಸಲಿದ್ದಾರೆ ಎಂದರು.ಗ್ರಾಪಂ ಮಾಜಿ ಅಧ್ಯಕ್ಷ ಎಲ್.ಎಸ್. ಪಾಟೀಲ ಮಾತನಾಡಿದರು. ಮಾಲತೇಶ ಮಾಗೋಡ, ಮಹಾಂತೇಶ ಬಶೆಟ್ಟಿಯವರ, ಮಹಾಂತೇಶ ಕುಲಕರ್ಣಿ, ಹುಸೇನಮಿಯಾ ಹೆಡಿಗ್ಗೊಂಡ, ಶಂಕ್ರಪ್ಪ ಮುದಿಯಪ್ಪನವರ, ಬಾಬು ಶಿವಮ್ಮನವರ, ಬಿ.ಬಿ. ಕುಲಕರ್ಣಿ, ಶಾಂತಪ್ಪ ಹಾವೇರಿ, ಬಿ.ಎಚ್. ಗೌಡ್ರ ಇದ್ದರು.