ರೇಣುಕಾಂಬೆಯ ಸನ್ನಿಧಿಯಲ್ಲಿ ಲಕ್ಷ ದೀಪೋತ್ಸವ ಸಂಪನ್ನ

KannadaprabhaNewsNetwork |  
Published : Nov 22, 2025, 01:45 AM IST
ಫೋಟೋ:೨೧ಕೆಪಿಸೊರಬ-೦೨ : ಸೊರಬ ತಾಲೂಕಿನ ಚಂದ್ರಗುತ್ತಿ ಶ್ರೀ ರೇಣುಕಾಂಬ ದೇವಸ್ಥಾನದಲ್ಲಿ ಸಾವಿರಾರು ಭಕ್ತರ ಸಮ್ಮುಖದಲ್ಲಿ ಲಕ್ಷ ದೀಪೋತ್ಸವ  ವಿಜೃಂಭಣೆಯಿAದ ಜರುಗಿತು. | Kannada Prabha

ಸಾರಾಂಶ

ಮಲೆನಾಡಿನ ಪುರಾಣ ಹಾಗೂ ಐತಿಹಾಸಿಕ ಪ್ರಸಿದ್ಧ ತಾಲೂಕಿನ ಚಂದ್ರಗುತ್ತಿ ಗ್ರಾಮದ ಶ್ರೀ ರೇಣುಕಾಂಬ ದೇವಸ್ಥಾನದಲ್ಲಿ ಗುರುವಾರ ರಾತ್ರಿ ಸಾವಿರಾರು ಭಕ್ತರ ಸಮ್ಮುಖದಲ್ಲಿ ಕಾರ್ತಿಕ ಮಾಸದ ಲಕ್ಷ ದೀಪೋತ್ಸವವು ವಿಜೃಂಭಣೆಯಿಂದ ಜರುಗಿತು.

ಸೊರಬ: ಮಲೆನಾಡಿನ ಪುರಾಣ ಹಾಗೂ ಐತಿಹಾಸಿಕ ಪ್ರಸಿದ್ಧ ತಾಲೂಕಿನ ಚಂದ್ರಗುತ್ತಿ ಗ್ರಾಮದ ಶ್ರೀ ರೇಣುಕಾಂಬ ದೇವಸ್ಥಾನದಲ್ಲಿ ಗುರುವಾರ ರಾತ್ರಿ ಸಾವಿರಾರು ಭಕ್ತರ ಸಮ್ಮುಖದಲ್ಲಿ ಕಾರ್ತಿಕ ಮಾಸದ ಲಕ್ಷ ದೀಪೋತ್ಸವವು ವಿಜೃಂಭಣೆಯಿಂದ ಜರುಗಿತು. ಲಕ್ಷ ದೀಪೋತ್ಸವದ ಹಿನ್ನೆಲೆ ದೇವಸ್ಥಾನವನ್ನು ವಿಶೇಷವಾಗಿ ಬಣ್ಣ ಬಣ್ಣದ ದೀಪಾಲಂಕಾರ, ಪುಷ್ಪಾಲಂಕಾರ ತಳಿರು ತೋರಣಗಳಿಂದ ಶೃಂಗರಿಸಲಾಗಿತ್ತು. ಭಕ್ತರು ದೇವಸ್ಥಾನದ ಮೆಟ್ಟಿಲುಗಳು ಮತ್ತು ಆವರಣದಲ್ಲಿ ದೀಪಗಳನ್ನು ಹಚ್ಚಿ ಸಂಭ್ರಮಿಸಿದರು. ಲಕ್ಷ ದೀಪೋತ್ಸವದ ನಿಮಿತ್ತ ಪರಿವಾರ ದೇವರುಗಳಾದ ಕಾಲಭೈರವ, ನಾಗದೇವತೆ, ಮಾತಂಗಿ, ಪರಶುರಾಮ, ತ್ರಿಶೂಲದ ಭೈರಪ್ಪ ದೇವರುಗಳಿಗೆ ವಿಶೇಷ ಪೂಜೆ ನೆರವೇರಿದವು. ನಂತರ ಶ್ರೀ ರೇಣುಕಾಂಬೆಗೆ ಲಕ್ಷ ದೀಪೋತ್ಸವದ ಮಹಾ ಮಂಗಳಾರತಿ ನೆರವೇರಿತು. ಭಕ್ತರು ದೇವಿಯದರ್ಶನ ಪಡೆದು ಇಷ್ಟಾರ್ಥ ಸಿದ್ಧಿಗಾಗಿ ಪ್ರಾರ್ಥಿಸಿದರು. ವಾದ್ಯ ಮೇಳಗಳು ಲಕ್ಷ ದೀಪೋತ್ಸವಕ್ಕೆ ಮೆರಗು ನೀಡಿದವು. ದೇವಸ್ಥಾನದ ಆವರಣದಲ್ಲಿ ಆಕಾಶದ ಎತ್ತರದಲ್ಲಿ ಜಗಮಗಿಸುವ ನಕ್ಷತ್ರಗಳ ಮಧ್ಯೆ ಆಕರ್ಷಕ ಸಿಡಿಮದ್ದು ಸಿಡಿಸಿ ಸಂಭ್ರಮಿಸಿದರು. ಲಕ್ಷ ದೀಪೋತ್ಸವಕ್ಕೆ ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿ ಪ್ರಮೀಳಾ ಕುಮಾರಿ ಚಾಲನೆ ನೀಡಿದರು. ಶಿವರುದ್ರಪ್ಪ ಎನ್.ಜೋಗಿ ಜನಪದ ದೂರವಾಣಿ ಕಲಾವಿದರು ಮತ್ತು ಅವರ ಸಂಗಡಿಗರು ಗೆಂಡ್ಲಾ, ಹೊಸೂರು, ಚಿನ್ನರಜೋಗಿ ಜನಪದ ತಂಡದವರಿಂದ ಜೋಗಿ ಪದ ಕಾರ್ಯಕ್ರಮ ಅತ್ಯುತ್ತಮವಾಗಿ ಪ್ರದರ್ಶನಗೊಂಡಿತು. ಗ್ರಾಪಂ ಅಧ್ಯಕ್ಷೆ ಸರಿತಾ, ಉಪಾಧ್ಯಕ್ಷ ಎಂ.ಬಿ.ರೇಣುಕಾಪ್ರಸಾದ್, ಸದಸ್ಯ ಎಂ.ಪಿ.ರತ್ನಾಕರ ಮತ್ತು ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿ ಪ್ರಮೀಳಾ ಕುಮಾರಿ ಅವರು ಜನಪದ ಕಲಾವಿದರನ್ನು ಸನ್ಮಾನಿಸಿದರು. ದೇವಸ್ಥಾನದ ಪ್ರಧಾನ ಅರ್ಚಕರ ನೇತೃತ್ವದಲ್ಲಿ ಲಕ್ಷ ದೀಪೋತ್ಸವದ ಧಾರ್ಮಿಕ ಪೂಜಾ ವಿಧಿ ವಿಧಾನಗಳು ನಡೆದವು.ಚಂದ್ರಗುತ್ತಿ ಸೇರಿದಂತೆ ಸುತ್ತಲಿನ ಗ್ರಾಮಗಳಿಂದ ಭಕ್ತರು ಆಗಮಿಸಿ ಲಕ್ಷ ದೀಪೋತ್ಸವವನ್ನುಕಣ್ತುಂಬಿ ಕೊಂಡರು. ಭಕ್ತರಿಗೆ ಪ್ರಸಾದ ವಿತರಿಸಲಾಯಿತು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

‘ಕನ್ನಡಪ್ರಭ, ಏಷ್ಯಾನೆಟ್‌ ಸುವರ್ಣ ನ್ಯೂಸ್‌’ನ ಸಹಯೋಗದಲ್ಲಿ ಆಯೋಜಿಸಿದ್ದ ‘ಕೆಂಗೇರಿ ಸಂಭ್ರಮ’ಕ್ಕೆ ವಿದ್ಯುಕ್ತ ತೆರೆ
ಸರ್ವಾಧ್ಯಕ್ಷರಾಗಿ ಸೋಮಲಿಂಗ ಗೆಣ್ಣೂರ ಆಯ್ಕೆ