ಗದಗ: ಲಕ್ಕುಂಡಿ ಗ್ರಾಮಕ್ಕೆ ಸಮರ್ಪಕ ಮೂಲ ಸೌಲಭ್ಯ ಒದಗಿಸುವಲ್ಲಿ ವಿಫಲರಾಗಿರುವ ಆಡಳಿತಾಧಿಕಾರಿಯನ್ನು ತಕ್ಷಣ ಬದಲಾಯಿಸಬೇಕೆಂದು ಆಗ್ರಹಿಸಿ ಗ್ರಾಮಸ್ಥರು ಸೋಮವಾರ ಸ್ಥಳೀಯ ಗ್ರಾಮ ಪಂಚಾಯಿತಿ ಕಾರ್ಯಾಲಯದ ಎದುರು ಧರಣಿ ಸತ್ಯಾಗ್ರಹ ನಡೆಸಿದರು.
ಸ್ಥಳಕ್ಕೆ ಆಗಮಿಸಿದ ಆಡಳಿತಾಧಿಕಾರಿ ಶರಣು ಗೋಗೇರಿ ಹಾಗೂ ಪಿಡಿಒ ಅಮೀರನಾಯಕ ಅವರು ಸಮಸ್ಯೆ ಬಗೆಹರಿಸುವುದಾಗಿ ವಿನಂತಿಸಿದರೂ ಪ್ರತಿಭಟನಾಕಾರರು ಒಪ್ಪಲಿಲ್ಲ. ಬಳಿಕ ವಿಬಿ ಜಿ ರಾಮ ಜಿ ಯೋಜನೆಯ ಸಹಾಯಕ ನಿರ್ದೇಶಕ ಕುಮಾರ ಪೂಜಾರ ಭೇಟಿ ನೀಡಿ, ಜಿಲ್ಲಾಧಿಕಾರಿಗಳು ಆಡಳಿತಾಧಿಕಾರಿಗಳ ಬದಲಾವಣೆಗೆ ಪರಿಶೀಲಿಸಿ ಆದೇಶ ಹೊರಡಿಸಲಿದ್ದಾರೆ ಎಂದು ಭರವಸೆ ನೀಡಿದ ನಂತರ ಧರಣಿ ಹಿಂಪಡೆಯಲಾಯಿತು.
ಪ್ರತಿಭಟನೆಯಲ್ಲಿ ಅಶೋಕ ಮೇಟಿ, ಬಸವರಾಜ ಮುಳ್ಳಾಳ, ಬಸವರಾಜ ಕವಲೂರು, ಅಶೋಕ ಗದಗಿನ, ಪ್ರವೀಣ ಕಲಾಲ, ವಿನಾಯಕ ಡಿಗ್ಗಾವಿ, ಚಂದ್ರು ಚಬ್ಬರಭಾವಿ, ಪ್ರಶಾಂತ ಬಟ್ಟೂರ, ವೀರಣ್ಣ ಅರಹುಣಶಿ, ಮಲ್ಲಿಕಾರ್ಜುನ ರಾಯಚೂರು, ನಾಗರಾಜ ಜಾಡರ, ಮಹಮ್ಮದ್ ಬೆಟಗೇರಿ, ರವಿ ಕವಲೂರು, ಕಲ್ಮೇಶ ಅಂಬಕ್ಕಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.11ರಂದು ಸಸಿ ನೆಡುವ ಕಾರ್ಯಕ್ರಮಗದಗ: ತಾಲೂಕಿನ ಹುಯಿಲಗೋಳ ಗ್ರಾಮದ ಬಳಗಾನೂರ ರಸ್ತೆಯಲ್ಲಿರುವ ಶಿವಶಾಂತ ಜೀವ ವೈವಿಧ್ಯ ಉದ್ಯಾನವನದಲ್ಲಿ ಆ. 11ರಂದು ಬೆಳಗ್ಗೆ 10ಕ್ಕೆ ಮಾಜಿ ಸಚಿವ, ಜಿಲ್ಲೆಯ ಹಿರಿಯ ಮುತ್ಸದ್ಧಿ ರಾಜಕಾರಣಿ ಎಸ್.ಎಸ್. ಪಾಟೀಲ ಅವರ 93ನೇ ಜನ್ಮದಿನದ ಅಂಗವಾಗಿ 93 ಸಸಿ ನೆಡುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಗದಗ- ಬೆಟಗೇರಿ ರೋಟರಿ ಕ್ಲಬ್, ಇನ್ನರ್‌ವೀಲ್ ಕ್ಲಬ್ ಹಾಗೂ ರೋಟ್ರಾಕ್ಟ್ ಕ್ಲಬ್ ಜೆ.ಟಿ. ಕಾಲೇಜು ಘಟಕಗಳ ಸಹಯೋಗದೊಂದಿಗೆ ಈ ಕಾರ್ಯಕ್ರಮ ನಡೆಯಲಿದ್ದು, ರೋಟರಿ ಕ್ಲಬ್ ಉಪಾಧ್ಯಕ್ಷ ಸುರೇಶ ಕುಂಬಾರ ಅಧ್ಯಕ್ಷತೆ ವಹಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಉಪ ಅರಣ್ಯ ಸಂರಕ್ಷಣಾಧಿಕಾರಿ ಸಂತೋಷ ಕೆಂಚಪ್ಪನವರ, ವಲಯ ಅರಣ್ಯಾಧಿಕಾರಿ ವೀರೇಂದ್ರ ಮರಿಬಸಣ್ಣವರ ಹಾಗೂ ರೋಟರಿ ಸಂಸ್ಥೆಯ ಪದಾಧಿಕಾರಿಗಳು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದು, ಡಾ. ಪ್ರದೀಪ ಉಗಲಾಟ ಪ್ರಾಯೋಜಕತ್ವ ವಹಿಸಿದ್ದಾರೆ.