ಅಜ್ಜನ ಸನ್ನಿಧಿಯಲ್ಲಿ ಲಕ್ಷ ದೀಪೋತ್ಸವ ವೈಭವ

KannadaprabhaNewsNetwork |  
Published : Dec 13, 2023, 01:00 AM IST
ಲಕ್ಷ ದೀಪೋತ್ಸವ | Kannada Prabha

ಸಾರಾಂಶ

ಉತ್ತರ ಕರ್ನಾಟಕದ ಲಕ್ಷಾಂತರ ಭಕ್ತರ ಆರಾಧ್ಯ ದೈವ ಇಲ್ಲಿನ ಸಿದ್ಧಾರೂಢಸ್ವಾಮಿ ಮಠದಲ್ಲಿ ಕಾರ್ತಿಕ ಮಾಸದ ಅಂಗವಾಗಿ ಮಂಗಳವಾರ ಲಕ್ಷ ದೀಪೋತ್ಸವ ಕಾರ್ಯಕ್ರಮ ಸಾವಿರಾರು ಭಕ್ತರ ಸಮ್ಮುಖದಲ್ಲಿ ಅದ್ಧೂರಿಯಾಗಿ ನಡೆಯಿತು.

ಕನ್ನಡಪ್ರಭ ವಾರ್ತೆ ಹುಬ್ಬಳ್ಳಿ

ಶ್ರೀಮಠದ ಪ್ರಾಂಗಣದಲ್ಲಿ ಹಚ್ಚಲಾಗಿದ್ದ ಬಗೆಬಗೆಯ ದೀಪಗಳ ಬೆಳಕಿನಿಂದ ಆವರಣವೆಲ್ಲ ಜಗಮಗಿಸುತ್ತಿತ್ತು. ಭಕ್ತರಿಂದ ಶ್ರೀ ಸಿದ್ಧಾರೂಢ ಮಹಾರಾಜ ಕೀ ಜೈ ಎಂಬ ಘೋಷವಾಕ್ಯಗಳು ಮುಗಿಲು ಮುಟ್ಟಿದ್ದವು. ಸಹಸ್ರಾರು ಸಂಖ್ಯೆಯಲ್ಲಿ ಆಗಮಿಸಿದ್ದ ಭಕ್ತರು ಶ್ರೀಮಠದ ಪ್ರಾಂಗಣದಲ್ಲಿ ದೀಪ ಹಚ್ಚುವ ಮೂಲಕ ಮೆರುಗು ತಂದರು.

ಲಕ್ಷ ದೀಪೋತ್ಸವದ ಹಿನ್ನೆಲೆಯಲ್ಲಿ ಶ್ರೀಮಠದ ಆವರಣದಲ್ಲಿ ಬಣ್ಣಬಣ್ಣದ ರಂಗೋಲಿ ಬಿಡಿಸಲಾಗಿತ್ತು. ಈ ರಂಗೋಲಿಯ ಮೇಲೆ ಭಕ್ತರು ಪಣತೆಯನ್ನಿಟ್ಟು ದೀಪ ಬೆಳಗಿಸಿದರು.

ಅನ್ಯರಾಜ್ಯಗಳಿಂದ ಬಂದ ಭಕ್ತರು

ಲಕ್ಷ ದೀಪೋತ್ಸವದ ಹಿನ್ನೆಲೆಯಲ್ಲಿ ಆಂಧ್ರಪ್ರದೇಶ, ಮಹಾರಾಷ್ಟ್ರ, ತಮಿಳುನಾಡು, ಗೋವಾ ಸೇರಿದಂತೆ ಧಾರವಾಡ, ಹಾವೇರಿ, ಗದಗ, ಕೊಪ್ಪಳ, ವಿಜಯಪುರ, ಬಾಗಲಕೋಟೆ, ಕಲಬುರಗಿ ಸೇರಿದಂತೆ ವಿವಿಧ ಜಿಲ್ಲೆಗಳಿಂದ ಸಾವಿರಾರು ಸಂಖ್ಯೆಯಲ್ಲಿ ಭಕ್ತರು ಆಗಮಿಸಿದ್ದರು.

ಆಕಾಶಬುಟ್ಟಿಗಳ ಮೆರುಗು

ನಂತರ ಸಾವಿರಾರು ಭಕ್ತರು ಹಣತೆಗೆ ಎಣ್ಣೆ, ಬತ್ತಿ ಹಾಕಿ ದೀಪ ಬೆಳಗಿಸಿ ಖುಷಿಪಟ್ಟರು. ಸಂಜೆ ಶ್ರೀಮಠದ ಆವರಣದಲ್ಲಿ ನೂರಾರು ಜನರು ಆಕಾಶಬುಟ್ಟಿ ಹಾರಿಸಿ ಸಂಭ್ರಮಿಸಿದರೆ, ಆಕರ್ಷಕ ಸಿಡಿಮದ್ದುಗಳ ಪ್ರದರ್ಶನ ಭಕ್ತರ ಗಮನ ಸೆಳೆಯುವಲ್ಲಿ ಯಶಸ್ವಿಯಾಯಿತು.

ದೀಪೋತ್ಸವಕ್ಕೆ ಚಾಲನೆ

ಸಂಜೆ 6.30ಕ್ಕೆ ಆರಂಭವಾದ ಲಕ್ಷದೀಪೋತ್ಸವಕ್ಕೆ ಶ್ರೀಮಠದ ಮುಖ್ಯ ಆಡಳಿತಾಧಿಕಾರಿ ಹಾಗೂ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶೆ ಕೆ.ಜಿ. ಶಾಂತಿ ದೀಪ ಬೆಳಗಿಸುವ ಮೂಲಕ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಶ್ರೀಮಠದ ಟ್ರಸ್ಟ್‌ ಕಮಿಟಿಯ ಸದಸ್ಯರು, ಸಾರ್ವಜನಿಕರು ಪಾಲ್ಗೊಂಡಿದ್ದರು.

ವಿಶೇಷ ಪೂಜೆ:

ಕಾರ್ತಿಕೋತ್ಸವದ ಹಿನ್ನೆಲೆಯಲ್ಲಿ ಬೆಳಗ್ಗೆ ಸಿದ್ಧಾರೂಢಸ್ವಾಮಿಗೆ ವಿಶೇಷ ಪೂಜೆ, ಅಭಿಷೇಕ ನೆರವೇರಿತು. ಶ್ರೀ ಸಿದ್ಧಾರೂಢರ ಹಾಗೂ ಗುರುನಾಥಾರೂಢರ ಕರ್ತೃ ಗದ್ದುಗೆಯ ದರ್ಶನ ಪಡೆಯಲು ಸಾವಿರಾರು ಸಂಖ್ಯೆಯಲ್ಲಿ ಭಕ್ತರು ಬೆಳಗ್ಗೆಯಿಂದಲೇ ಕಾದು ಕುಳಿತಿರುವುದು ಕಂಡುಬಂದಿತು. ಶ್ರೀಮಠಕ್ಕೆ ಆಗಮಿಸಿದ್ದ ಸಾವಿರಾರು ಭಕ್ತರಿಗೆ ಅನ್ನಸಂತರ್ಪಣೆ ನೆರವೇರಿಸಲಾಯಿತು. ಹಲವು ಕಡೆಗಳಿಂದ ಶ್ರೀಮಠಕ್ಕೆ ಆಗಮಿಸಿದ್ದ ಭಕ್ತರು ಭಕ್ತಿಯ ಸೇವೆಗೈದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಪತ್ರಕರ್ತ ತಗಡೂರಿಗೆ ಲೋಹಿಯಾ ಪ್ರಶಸ್ತಿ ಪ್ರದಾನ
ಕನ್ನಡದಲ್ಲಿ ರೈಲ್ವೆ ಪರೀಕ್ಷೆಗೆ ಇಲಾಖೆ : ಕರವೇ