ಲಕ್ಷ್ಮೇಶ್ವರ ಬಂದ್‌ ಹಿನ್ನೆಲೆ ಪಥಸಂಚಲನ

KannadaprabhaNewsNetwork |  
Published : Oct 19, 2024, 12:19 AM IST
ಸಸಸಸ | Kannada Prabha

ಸಾರಾಂಶ

ಪಟ್ಟಣದಲ್ಲಿ ೧೬೩ಕಲಂ ಜಾರಿಗೊಳಿಸಿದ್ದು, ಸಿಸಿ ಕ್ಯಾಮೆರಾ ಅಳವಡಿಸಲಾಗಿದೆ

ಲಕ್ಷ್ಮೇಶ್ವರ: ಪಟ್ಟಣದಲ್ಲಿ ಶನಿವಾರ ವಿವಿಧ ಸಂಘಟನೆಗಳು ಕರೆದಿರುವ ಲಕ್ಷ್ಮೇಶ್ವರ ಬಂದ್ ಹಿನ್ನೆಲೆಯಲ್ಲಿ ಶುಕ್ರವಾರ ಸಂಜೆ ಪೊಲೀಸ್‌ ಇಲಾಖೆಯಿಂದ ಪಥಸಂಚಲನ (ರೂಟ್ ಮಾರ್ಚ್) ನಡೆಸಲಾಯಿತು.

ಪಟ್ಟಣದಲ್ಲಿ ಮುಂಜಾಗ್ರತಾ ಕ್ರಮವಾಗಿ ಜನರಲ್ಲಿ ಜಾಗೃತಿ ಮೂಡಿಸುವ ಮತ್ತು ಯಾವುದೇ ಅಹಿತಕರ ಘಟನೆಗಳು ನಡೆಯದಿರಲೆಂಬ ಉದ್ದೇಶದಿಂದ ಎಚ್ಚರಿಕೆ ವಹಿಸಲು ಪೊಲೀಸ್‌ ಇಲಾಖೆ ಪಥಸಂಚಲನ ಏರ್ಪಡಿಸಿ ಸಾರ್ವಜನಿಕರಲ್ಲಿ ಧೈರ್ಯ ತುಂಬುವ ಕಾರ್ಯ ಮಾಡಲಾಯಿತು.

ಪಟ್ಟಣದಲ್ಲಿ ಈಗಾಗಲೇ ಪ್ರತಿಬಂಧಕಾಜ್ಞೆ ೧೬೩ ಕಲಂ ಜಾರಿ ಮಾಡಲಾಗಿದ್ದು, ಈ ಹಿನ್ನೆಲೆಯಲ್ಲಿ ಪಟ್ಟಣದಲ್ಲಿ ಸೂಕ್ತ ಬಂದೊಬಸ್ತ್ ಮಾಡಲಾಗಿದೆ ಎಂದು ಪೊಲೀಸ್‌ ವರಿಷ್ಠಾಧಿಕಾರಿ ಬಿ.ಎಸ್. ನೇಮಗೌಡ ಹೇಳಿದ್ದಾರೆ. ಶುಕ್ರವಾರ ಸಂಜೆ ಪಟ್ಟಣದ ಪ್ರಮುಖ ಬೀದಿಗಳಲ್ಲಿ ನಡೆದ ಈ ಪಥಸಂಚಲನದಲ್ಲಿ ಕೆಎಸ್‌ಆರ್‌ಪಿ, ಡಿಎಆರ್ ಸಿಬ್ಬಂದಿಗಳು, ಶಿರಹಟ್ಟಿ ಮತ್ತು ಲಕ್ಷ್ಮೇಶ್ವರ ಠಾಣಾ ಸಿಬ್ಬಂದಿಗಳು, ಗೃಹರಕ್ಷಕ ಸಿಬ್ಬಂದಿಗಳು ಇದ್ದರು.

ಬಂದ್ ಹಿನ್ನೆಲೆಯಲ್ಲಿ ಪೊಲೀಸ್‌ ವರಿಷ್ಠಾಧಿಕಾರಿ ನೇತೃತ್ವದಲ್ಲಿ ಮೂವರು ಡಿವೈಎಸ್‌ಪಿ, ೧೦ಜನ ಸಿಪಿಐಗಳು, ೨೫ ಪಿಎಸ್‌ಐಗಳು, ೪ ಕೆಎಸ್‌ಆರ್‌ಪಿ ತುಕಡಿಗಳು, ೪ ಡಿಎಆರ್ ತುಕಡಿಗಳು ಹಾಗೂ ಗೃಹರಕ್ಷಕದಳದ ಸಿಬ್ಬಂದಿಗಳು ಸೇರಿದಂತೆ ೩೦೦ಕ್ಕೂ ಹೆಚ್ಚು ಸಿಬ್ಬಂದಿ ನಿಯೋಜಿಸಲಾಗಿದೆ ಎಂದು ಪೋಲಿಸ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪಟ್ಟಣದಲ್ಲಿ ೧೬೩ಕಲಂ ಜಾರಿಗೊಳಿಸಿದ್ದು, ಸಿಸಿ ಕ್ಯಾಮೆರಾ ಅಳವಡಿಸಲಾಗಿದೆ. ದ್ರೋಣ ಕ್ಯಾಮೆರಾ ಸಹ ಬಳಸಲಾಗುತ್ತಿದ್ದು ಶಾಂತಿ ಕದಡುವವರಿಗೆ ಕಠಿಣ ಕ್ರಮಕ್ಕೆ ಮುಂದಾಗುತ್ತದೆ. ಸಾರ್ವಜನಿಕರು ಯಾವುದೇ ಆತಂಕಕ್ಕೆ ಒಳಗಾಗುವ ಅಗತ್ಯವಿಲ್ಲ, ಯಾರು ಒತ್ತಡದಿಂದ ಅಂಗಡಿ ಮುಂಗಟ್ಟುಗಳನ್ನು ಬಂದ್ ಮಾಡಿಸುವದು, ಕಾನೂನು ಕೈಗೆತ್ತಿಗೊಳ್ಳುವದನ್ನು ಮಾಡದೆ ಸಹಕರಿಸುವಂತೆ ಇಲಾಖೆ ಮನವಿ ಮಾಡಿದೆ.

ಈ ವೇಳೆ ಸಿಪಿಐ ನಾಗರಾಜ ಮಾಡಳ್ಳಿ, ಪಿಎಸ್‌ಐ ಈರಪ್ಪ ರಿತ್ತಿ, ಕ್ರೈಂ ವಿಭಾಗದ ಪಿಎಸ್‌ಐ ಟಿ.ಕೆ.ರಾಥೋಡ, ಎ.ಎಸ್.ಐಗಳು, ಪೊಲೀಸ್ ಸಿಬ್ಬಂದಿಗಳು, ಗೃಹ ರಕ್ಷಕ ಸಿಬ್ಬಂದಿ ಸೇರಿದಂತೆ ಅನೇಕರು ಹಾಜರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ನಗರದ 75 ಜಂಕ್ಷನ್‌ ಅಭಿವೃದ್ಧಿಗೆ ಗ್ರಹಣ!
ಎಚ್‌ಎಎಲ್‌ ಮತ್ತೆ ಸಾರ್ವಜನಿಕ ಬಳಕೆ ಪ್ರಸ್ತಾಪ ಪರಿಶೀಲನೆ:ಸಚಿವ