ದೇವಸ್ಥಾನ ನಿರ್ಮಾಣದ 2ನೇ ಹಂತದ ಕಾಮಗಾರಿಗೆ ಲಕ್ಷ್ಮೀ ಚೆಕ್ ಹಸ್ತಾಂತರ

KannadaprabhaNewsNetwork |  
Published : Aug 22, 2026, 04:15 AM IST
ಬಾಳೇಕುಂದ್ರಿ ಬಿಕೆ ಗ್ರಾಮದಲ್ಲಿ ಶ್ರೀ ರಾಮಲಿಂಗೇಶ್ವರ ದೇವಸ್ಥಾನದ 2ನೇ ಹಂತದ ಕಾಮಗಾರಿಗೆ ಬಿಡುಗಡೆಯಾದ ಅನುದಾನದ ಚೆಕ್‌ನ್ನು ಶಾಸಕಿ ಲಕ್ಷ್ಮೀ ಹೆಬ್ಬಾಳಕರ ದೇವಸ್ಥಾನ ಕಮೀಟಿಗೆ ಹಸ್ತಾಂತರಿಸಿದರು | Kannada Prabha

ಸಾರಾಂಶ

ಧಾರ್ಮಿಕ ಹಾಗೂ ಸಾಂಸ್ಕೃತಿಕ ಪರಂಪರೆ ಉಳಿಸಿ, ಬೆಳೆಸುವ ನಿಟ್ಟಿನಲ್ಲಿ ದೇವಸ್ಥಾನಗಳ ಅಭಿವೃದ್ಧಿಗೆ ಆದ್ಯತೆ ನೀಡಲಾಗುತ್ತಿದೆ ಎಂದು ಮಾಜಿ ಸಚಿವೆ, ಶಾಸಕಿ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.

ಕನ್ನಡಪ್ರಭ ವಾರ್ತೆ ಬೆಳಗಾವಿ

ಧಾರ್ಮಿಕ ಹಾಗೂ ಸಾಂಸ್ಕೃತಿಕ ಪರಂಪರೆ ಉಳಿಸಿ, ಬೆಳೆಸುವ ನಿಟ್ಟಿನಲ್ಲಿ ದೇವಸ್ಥಾನಗಳ ಅಭಿವೃದ್ಧಿಗೆ ಆದ್ಯತೆ ನೀಡಲಾಗುತ್ತಿದೆ ಎಂದು ಮಾಜಿ ಸಚಿವೆ, ಶಾಸಕಿ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.

ಬಾಳೇಕುಂದ್ರಿ ಬಿ.ಕೆ.ಗ್ರಾಮದಲ್ಲಿ ಸುಮಾರು ₹1.20 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಳ್ಳುತ್ತಿರುವ ರಾಮಲಿಂಗೇಶ್ವರ ದೇವಸ್ಥಾನದ ಎರಡನೇ ಹಂತದ ಕಾಮಗಾರಿಗಾಗಿ ಬಿಡುಗಡೆಯಾದ ಅನುದಾನದ ಚೆಕ್‌ನ್ನು ಶುಕ್ರವಾರ ದೇವಸ್ಥಾನದ ಟ್ರಸ್ಟ್ ಕಮಿಟಿಯ ಪದಾಧಿಕಾರಿಗಳಿಗೆ ಲಕ್ಷ್ಮೀ ಹೆಬ್ಬಾಳಕರ್ ಹಸ್ತಾಂತರಿಸಿದರು.ಗ್ರಾಮದ ಪ್ರಮುಖ ಧಾರ್ಮಿಕ ಕೇಂದ್ರವಾಗಿರುವ ರಾಮಲಿಂಗೇಶ್ವರ ದೇವಸ್ಥಾನದ ಅಭಿವೃದ್ಧಿ ಹಾಗೂ ಸುಂದರೀಕರಣದ ಕಾಮಗಾರಿಗಳನ್ನು ಕೈಗೊಳ್ಳಲಾಗುತ್ತಿದೆ. ದೇವಸ್ಥಾನದ ನಿರ್ಮಾಣ ಕಾಮಗಾರಿ ಪೂರ್ಣಗೊಂಡ ಬಳಿಕ ಗ್ರಾಮಸ್ಥರು ಹಾಗೂ ಭಕ್ತರಿಗೆ ಹೆಚ್ಚಿನ ಅನುಕೂಲವಾಗಲಿದೆ. ದೇವಸ್ಥಾನವು ಗ್ರಾಮದಲ್ಲಿ ಧಾರ್ಮಿಕ ಚಟುವಟಿಕೆಗಳ ಜೊತೆಗೆ ಸಾಮಾಜಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳಿಗೂ ಕೇಂದ್ರವಾಗಲಿದೆ ಎಂದು ತಿಳಿಸಿದರು.ದೇವಸ್ಥಾನಗಳ ಅಭಿವೃದ್ಧಿಯು ಕೇವಲ ಕಟ್ಟಡ ನಿರ್ಮಾಣಕ್ಕೆ ಸೀಮಿತವಾಗದೆ, ನಮ್ಮ ಸಂಸ್ಕೃತಿ, ಪರಂಪರೆ ಹಾಗೂ ಧಾರ್ಮಿಕ ನಂಬಿಕೆಗಳನ್ನು ಮುಂದಿನ ಪೀಳಿಗೆಗೆ ಕೊಂಡೊಯ್ಯುವ ಕಾರ್ಯವಾಗಿದೆ. ಈ ಹಿನ್ನೆಲೆಯಲ್ಲಿ ಗ್ರಾಮಸ್ಥರ ಬೇಡಿಕೆಗಳಿಗೆ ಸ್ಪಂದಿಸಿ ದೇವಸ್ಥಾನದ ಅಭಿವೃದ್ಧಿ ಕಾಮಗಾರಿಗಳಿಗೆ ಅಗತ್ಯ ಸಹಕಾರ ನೀಡಲಾಗುತ್ತಿದೆ ಎಂದರು.ದೇವಸ್ಥಾನದ ನಿರ್ಮಾಣ ಕಾಮಗಾರಿ ನಿಗದಿತ ರೀತಿಯಲ್ಲಿ ಹಾಗೂ ಗುಣಮಟ್ಟದೊಂದಿಗೆ ನಡೆಯಬೇಕು. ಗ್ರಾಮಸ್ಥರು ಮತ್ತು ದೇವಸ್ಥಾನದ ಟ್ರಸ್ಟ್ ಕಮಿಟಿಯವರು ಕಾಮಗಾರಿಯ ಮೇಲ್ವಿಚಾರಣೆ ನಡೆಸಿ, ಉತ್ತಮ ರೀತಿಯಲ್ಲಿ ಕಾಮಗಾರಿ ಪೂರ್ಣಗೊಳಿಸುವಂತೆ ಅವರು ಸಲಹೆ ನೀಡಿದರು.ಚೆಕ್ ಹಸ್ತಾಂತರ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ, ದೇವಸ್ಥಾನ ಟ್ರಸ್ಟ್ ಕಮಿಟಿಯ ಹೊನಗೌಡ ಪಾಟೀಲ, ಸುರೇಶ್ ಕಾಳೋಜಿ, ಪ್ರವೀಣ ಪಾಟೀಲ, ಪ್ರಹ್ಲಾದ ಪಾಟೀಲ, ನಾಗೇಶ್ ದೇಸಾಯಿ, ಪ್ರೇಮ ಕೋಲಕಾರ, ಅಪ್ಸರ್ ಜಮಾದಾರ, ನೂರ್ ಮುಲ್ಲಾ ಸೇರಿದಂತೆ ಗ್ರಾಮದ ಪ್ರಮುಖರು ಹಾಗೂ ದೇವಸ್ಥಾನ ಟ್ರಸ್ಟ್ ಕಮಿಟಿಯ ಸದಸ್ಯರು ಉಪಸ್ಥಿತರಿದ್ದರು.ಗ್ರಾಮದ ಪ್ರಮುಖರು ದೇವಸ್ಥಾನದ ಅಭಿವೃದ್ಧಿಗೆ ಸಹಕಾರ ನೀಡಿದ್ದಕ್ಕಾಗಿ ಲಕ್ಷ್ಮೀ ಹೆಬ್ಬಾಳಕರ್ ಹಾಗೂ ಚನ್ನರಾಜ ಹಟ್ಟಿಹೊಳಿ ಅವರಿಗೆ ಕೃತಜ್ಞತೆ ಸಲ್ಲಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಭೀಕರ ಹತ್ಯೆ ಖಂಡಿಸಿ ಪ್ರತಿಭಟನೆ
ನಾಡಿದ್ದು ಕರಡು ಮತದಾರರ ಪಟ್ಟಿ ಪ್ರಕಟ