ಕನ್ನಡಪ್ರಭ ವಾರ್ತೆ ಬೆಳಗಾವಿಸಚಿವರ ವಿರುದ್ಧ ಸದನದಲ್ಲಿಯೇ ಅಶ್ಲೀಲ ಪದ ಬಳಕೆ ಮಾಡಿದ ಆರೋಪ ಎದುರಿಸುತ್ತಿರುವ ಬಿಜೆಪಿಯ ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಅವರನ್ನು ವಜಾಗೊಳಿಸುವಂತೆ ಆಗ್ರಹಿಸಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ರ ಬೆಂಬಲಿಗರು ಬೆಳಗಾವಿಯಲ್ಲಿ ಶನಿವಾರ ಬೃಹತ್ ಪ್ರತಿಭಟನೆ ನಡೆಸಿದರು.
ರವಿಯವರು ಲಕ್ಷ್ಮೀ ಹೆಬ್ಬಾಳ್ಕರ್‌ಗೆ ಮಾತ್ರವಲ್ಲ, ಇಡೀ ಸ್ತ್ರೀ ಕುಲಕ್ಕೆ ಅಪಮಾನ ಮಾಡಿದ್ದಾರೆ. ರವಿಯವರು ಕೂಡಲೇ ಕ್ಷಮೆಯಾಚಿಸಬೇಕು. ಅವರ ಪರಿಷತ್ ಸದಸ್ಯತ್ವ ರದ್ದು ಮಾಡಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು. ಅವರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳದಿದ್ದರೆ ಉಗ್ರ ಹೋರಾಟ ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದರು.
ಸುವರ್ಣವಿಧಾನಸೌಧಕ್ಕೆ ನುಗ್ಗಿ ರವಿ ಮೇಲೆ ಹಲ್ಲೆಗೆ ಯತ್ನಿಸಿದ ಹೆಬ್ಬಾಳ್ಕರ್ ಅವರ ಖಾಸಗಿ ಪಿಎ ಸಂಗನಗೌಡ ಪಾಟೀಲ ಸೇರಿ ಹೆಬ್ಬಾಳ್ಕರ್‌ರ ಸಹಸ್ರಾರು ಅಭಿಮಾನಿಗಳು ಪ್ರತಿಭಟನಾ ಮೆರಣಿಗೆಯಲ್ಲಿ ಪಾಲ್ಗೊಂಡಿದ್ದರು. ಪ್ರತಿಭಟನೆ ಹಿನ್ನೆಲೆಯಲ್ಲಿ ಕೆಲಕಾಲ ಸಂಚಾರ ವ್ಯವಸ್ಥೆ ಅಸ್ತವ್ಯಸ್ತಗೊಂಡಿತ್ತು. ಪ್ರತಿಭಟನೆ ಹಿನ್ನೆಲೆಯಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಆಯೋಜಿಸಲಾಗಿತ್ತು.ಇದೇ ವೇಳೆ, ಹಾಸನ, ರಾಮನಗರ, ಶಿವಮೊಗ್ಗ, ರಾಯಚೂರು, ಹುಬ್ಬಳ್ಳಿ ಸೇರಿ ರಾಜ್ಯದ ಇತರೆಡೆಯೂ ಕಾಂಗ್ರೆಸ್‌ನಿಂದ ಪ್ರತಿಭಟನೆಗಳು ನಡೆದವು. ಕೋಟ್:
- ಮಣಾಲ್ ಹೆಬ್ಬಾಳಕರ, ಕಾಂಗ್ರೆಸ್ ಯುವ ಮುಖಂಡ.